Grama Panchayat Election: ಬೆಳಪು ಗ್ರಾ.ಪಂ. ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಆಯ್ಕೆ
ದಾಖಲೆಯ 10ನೇ ಬಾರಿಗೆ ಒಲಿದ ಪಟ್ಟ
Team Udayavani, Aug 17, 2023, 8:45 PM IST
ಕಾಪು: ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಐಕಳಬಾವ ದೇವಿಪ್ರಸಾದ್ ಶೆಟ್ಟಿ 10ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮಾಭಿವೃದ್ಧಿ ಸಮಿತಿಯ ಮೂಲಕ ತಮ್ಮ 20ನೇ ವಯಸ್ಸಿನಲ್ಲೇ ಗ್ರಾ.ಪಂ. ಚುನಾವಣೆಯಲ್ಲಿ ಜಯ ಸಾಧಿಸಿದ್ದ ಅವರು 32 ವರ್ಷಗಳಿಂದ ಗ್ರಾ.ಪಂ. ಸದಸ್ಯರಾಗಿ, 27 ವರ್ಷಗಳಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 27 ವರ್ಷ ಅಧ್ಯಕ್ಷರಾಗಿದ್ದಾರೆ.
ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ವಿವಿಧ ಮೂಲಗಳಿಂದ ಅನುದಾನ ತಂದು ಗ್ರಾಮವನ್ನು ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ದೇವಿಪ್ರಸಾದ್ ಎಸ್‌ಸಿಡಿಸಿಸಿ ಬ್ಯಾಂಕ್, ಕರ್ನಾಟಕ ರಾಜ್ಯ ಸಹಕಾರಿ ಮಹಾ ಮಂಡಲ, ಉಡುಪಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ನಿಯಮಿತ, ಬ್ರಹ್ಮಾವರ ಸಕ್ಕರೆ ಕಾರ್ಖಾ ನೆಯ ನಿರ್ದೇಶಕರೂ ಆಗಿದ್ದಾರೆ.
ಕಸ ಮುಕ್ತ ಗ್ರಾಮ ಗುರಿ
ಗ್ರಾಮದ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯಗಳ ಜೋಡಣೆಯ ಜತೆಗೆ ಶೈಕ್ಷಣಿಕ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೂ ಒತ್ತು ನೀಡಲಾಗಿದೆ. ಗ್ರಾಮವನ್ನು ಇನ್ನಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯ ಲಾಗುವುದು. ತಿಂಗಳೊಳಗೆ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿ ಬೆಳಪು ಗ್ರಾಮವನ್ನು ಸಂಪೂರ್ಣ ಕಸಮುಕ್ತ ಗ್ರಾಮವನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.