Gruha Lakshmi Scheme : ಬಗೆಹರಿಯದ ತಾಂತ್ರಿಕ ಸಮಸ್ಯೆ
Team Udayavani, Nov 4, 2023, 11:17 PM IST
ಉಡುಪಿ: ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲ ಪಡೆಯಲು ಅರ್ಹ ಫಲಾನುಭವಿಗಳು ತಿಂಗಳುಗಳಿಂದ ಕಾದು ಕುಳಿತಿದ್ದಾರೆ. ಎದುರಾಗಿರುವ ತಾಂತ್ರಿಕ ಅಡಚಣೆ ನಿವಾರಿಸಲು ಸರಕಾರ/ಅಧಿಕಾರಿಗಳಿಗೆ ಇನ್ನೂ ಸಾಧ್ಯವಾಗಿಲ್ಲ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಇಡೀ ರಾಜ್ಯದಲ್ಲೇ ಈ ಸಮಸ್ಯೆ ಯಿದೆ. ರೇಷನ್ ಕಾರ್ಡ್ ತಿದ್ದುಪಡಿ, ಆಧಾರ್- ಬ್ಯಾಂಕ್ ಖಾತೆ ನಂಬರ್ ಸೀಡಿಂಗ್ ಆಗಿಲ್ಲ ಎಂಬ ಕಾರಣಕ್ಕೆ ಅನೇಕರದ್ದು ಅರ್ಜಿ ವಿಲೇವಾರಿಯೇ ಆಗುತ್ತಿಲ್ಲ. ಜಿಲ್ಲೆಗಳಲ್ಲಿ ಎಲ್ಲ ರೀತಿಯ ತಾಂತ್ರಿಕ ಸಮಸ್ಯೆ ಬಗೆಹರಿಸಿ ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅಲ್ಲಿಂದ ಅಪ್‌ಡೇಟ್ ಆಗುತ್ತಲ್ಲೇ ಇಲ್ಲ ಎಂದು ಜಿಲ್ಲಾಮಟ್ಟದ ಅಧಿಕಾರಿಗಳು ಹೇಳುತ್ತಿದ್ದಾರೆ.
ಆಗಸ್ಟ್ 15ರ ಹಿಂದೆ ಎಷ್ಟು ಮಂದಿ ಯೋಜನೆಗೆ ಅರ್ಹರಾಗಿದ್ದರೋ ಅಷ್ಟೇ ಮಂದಿ ಈಗಲೂ ಯೋಜನೆಯ ಫಲ ಪಡೆಯುತ್ತಿದ್ದಾರೆ. ಸೆಪ್ಟಂಬರ್ ತಿಂಗಳಲ್ಲಿ ಬೆರಳೆಣಿಕೆಯಷ್ಟು ಫಲಾನುಭವಿಗಳು ಪಟ್ಟಿಗೆ ಸೇರಿದ್ದರೂ ಅಕ್ಟೋಬರ್‌ನಲ್ಲಿ ಯಾರೂ ಸೇರಿಲ್ಲ. ಅನೇಕರು ಎಲ್ಲ ದಾಖಲೆಗಳಿದ್ದರೂ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಇನ್ನು ಕೆಲವರು ಇಂದಿಗೂ ದಾಖಲೆಗಳೊಂದಿಗೆ ಗ್ರಾಮ ಒನ್, ಕರ್ನಾಟಕ ಒನ್, ಆಹಾರ ಇಲಾಖೆಯ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಸುತ್ತುತ್ತಲೇ ಇದ್ದಾರೆ.
ಅಧಿಕಾರಿಗಳಿಂದಲೂ ಯಾವುದೇ ಉತ್ತರ ಸಿಗುತ್ತಿಲ್ಲ. ರೇಷನ್ ಕಾರ್ಡ್ ಮನೆಯ ಯಜಮಾನಿ ಹೆಸರಿನಲ್ಲೇ ಇದ್ದು, ಬ್ಯಾಂಕ್ ಖಾತೆ-ಆಧಾರ್ ಸೀಡಿಂಗ್ ಆಗಿದ್ದರೂ ಯೋಜನೆಗೆ ಸೇರಲು ಸಾಧ್ಯವಾಗುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.