ದ.ಕ., ಉಡುಪಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ: 3 ದಿನ ಭಾರೀ ಮಳೆ ಸಾಧ್ಯತೆ
Team Udayavani, Jun 22, 2022, 12:58 AM IST
ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಉತ್ತಮ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಬೆಳಗ್ಗೆಯೇ ಆರಂಭವಾದ ಮಳೆ ಮಧ್ಯಾಹ್ನದ ಬಳಿಕ ಬಿರುಸು ಪಡೆದಿತ್ತು. ಕೆಲವೊಂದು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿತ್ತು. ನಗರದಲ್ಲಿ ಈಗಾಗಲೇ ಸ್ಮಾರ್ಟ್‌ಸಿಟಿ, ಮಹಾನಗರ ಪಾಲಿಕೆ, ಗೈಲ್ ಗ್ಯಾಸ್ ಲೈನ್ ಸೇರಿದಂತೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇದರಿಂದಾಗಿ ಸರಿಯಾಗಿ ನೀರು ಹರಿಯಲು ಸಾಧ್ಯವಾಗದೆ ರಸ್ತೆಯಲ್ಲೇ ನೀರು ನಿಂತಿತ್ತು. ನಗರದ ಕೆಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಪುತ್ತೂರು, ಉಪ್ಪಿನಂಗಡಿ, ಸುಳ್ಯ, ಸುಬ್ರಹ್ಮಣ್ಯ, ಕಡಬ, ಕಲ್ಮಕಾರು, ಪಂಜ, ಐನಕಿದು, ಬೆಳ್ತಂಗಡಿ, ಧರ್ಮಸ್ಥಳ, ಚಾರ್ಮಾಡಿ, ವೇಣೂರು, ಮಡಂತ್ಯಾರು, ಕರಾಯ, ಮಾಣಿ, ಬಿ.ಸಿ.ರೋಡು, ಬಂಟ್ವಾಳ, ವಿಟ್ಲ, ಕನ್ಯಾನ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ.
ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯಲ್ಲಿ ಏತ ನೀರಾವರಿ ಕಾಮಗಾರಿ ಅಳವಡಿಸಿದ ಪೈಪ್‌ನ ಹೊಂಡಕ್ಕೆ ಲಾರಿಯೊಂದು ಸಿಲುಕಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ರಸ್ತೆಗಳಲ್ಲಿ ನೀರು; ಪರದಾಟ
ಉಡುಪಿ ಜಿಲ್ಲೆಯಲ್ಲಿ ಮಳೆ ಬಿರುಸಾಗಿದ್ದು, ಸೋಮವಾರ ತಡರಾತ್ರಿ, ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಮಂಗಳವಾರದ ಮಳೆಗೆ ಕೃಷಿ ಭೂಮಿ, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಉಡುಪಿ, ಪರ್ಕಳ, ಮಲ್ಪೆ ಮಧ್ಯಾಹ್ನ ಸುರಿದ ಭಾರೀ ಮಳೆಗೆ ರಸ್ತೆಗಳಲ್ಲಿ ನೀರು ಬ್ಲಾಕ್ ಆಗಿತ್ತು. ಕರಾವಳಿ ಬೈಪಾಸ್, ಉಡುಪಿ-ಮಣಿಪಾಲ ಮುಖ್ಯರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದರು.
ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಸಿದ್ದಾಪುರ, ಪಡುಬಿದ್ರಿ, ಹೆಬ್ರಿ, ಕಾಪು ಭಾಗದಲ್ಲಿ ನಿರಂತರ ಮಳೆಯಾಗಿದೆ.
ಜೂ. 22ರಿಂದ 26ರ ವರೆಗೆ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೃಷಿಕರು, ಮೀನುಗಾರರು ಎಚ್ಚರ ವಹಿಸುವಂತೆ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರ ಜಿಕೆಎಂಎಸ್ ವಿಭಾಗ ಪ್ರಕಟನೆ ತಿಳಿಸಿದೆ.
3 ದಿನ “ಆರೆಂಜ್ ಅಲರ್ಟ್’
ರಾಜ್ಯ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಭಾರತೀಯ ಹವಾಮಾನ ಇಲಾಖೆಯು “ಆರೆಂಜ್ ಅಲರ್ಟ್’ ಘೊಷಿಸಿದೆ. ಜೂ. 22ರಿಂದ 24ರ ವರೆಗೆ ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಮಳೆಯ ಜತೆ ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.