ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!
Team Udayavani, Jun 24, 2021, 7:03 PM IST
ಉಡುಪಿ : ಭಾರಿ ಮಳೆಯಾಗಿ ರಸ್ತೆ ಕುಸಿತವಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169ಎರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ರಾಷ್ಟ್ರೀಯ ಹೆದ್ದಾರಿ 169ಎರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರನ್ವಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.
ಬದಲಿ ಮಾರ್ಗದ ವಿವರ: ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.