ಹಿರಿಯ ಅಧಿಕಾರಿಗಳ ತರಾಟೆ; ಹೆಬ್ರಿ ಠಾಣಾಧಿಕಾರಿ ಮಹಾಬಲ ರಾಜೀನಾಮೆ?
Team Udayavani, Jul 6, 2018, 6:23 PM IST
ಉಡುಪಿ:ಸಿವಿಲ್ ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದರ ಹಿನ್ನೆಲೆಯಲ್ಲಿ ಮನನೊಂದ ಹೆಬ್ರಿ ಠಾಣಾಧಿಕಾರಿ ಮಹಾಬಲ ಶೆಟ್ಟಿ ಅವರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆಂಬ ವದಂತಿ ಹಬ್ಬಿದೆ.
ಕೆಲವು ವರ್ಷದಿಂದ ಹೆಬ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಾಬಲ ಶೆಟ್ಟಿಯವರು ಪ್ರಾಮಾಣಿಕ ಹಾಗೂ ಖಡಕ್ ಅಧಿಕಾರಿ ಎಂಬ ಹೆಸರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಮನವೊಲಿಸಲು ಯತ್ನಿಸುತ್ತಿದ್ದಾರೆಂದು ಹೇಳಲಾಗಿದೆ.
ಹಿರಿಯ ಅಧಿಕಾರಿಗಳ ತರಾಟೆಯಿಂದ ಮನನೊಂದು ಮೊಬೈಲ್ ಅನ್ನು ಮೇಜಿನ ಮೇಲಿಟ್ಟು, ಕೆಲವು ಹಿರಿಯ ಅಧಿಕಾರಿಗಳಿಗೆ ಮಾತ್ರ ಮಾಹಿತಿ ನೀಡಿ ಠಾಣೆಯಿಂದ ಹೊರನಡೆದಿರುವುದಾಗಿ ಬಲ್ಲ ಮೂಲದಿಂದ ತಿಳಿದು ಬಂದಿದೆ.
ಎಸ್ ಐ ಮಹಾಬಲ ಶೆಟ್ಟಿಯವರು ರಾಜೀನಾಮೆ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಲು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ನಿರಾಕರಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.