Hebri: ಸಿಂಹ ಸಂಕ್ರಮಣ: ಪೆರ್ಡೂರಿನಲ್ಲಿ ನಾಳೆ ಮದುಮಕ್ಕಳ ಜಾತ್ರೆ
| ಕದಳೀಪ್ರಿಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇಗುಲದಲ್ಲಿ ಬೆಳಗ್ಗಿನಿಂದಲೇ ದೇವರ ದರ್ಶನ | ವಿಶೇಷ ಪೂಜೆ, ಅನ್ನ ಪ್ರಸಾದ
Team Udayavani, Aug 16, 2024, 12:30 PM IST
ಹೆಬ್ರಿ: ಉಡುಪಿ ತಾಲೂಕಿನ ಪೆರ್ಡೂರು ಕದಳೀಪ್ರಿಯ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ (ಅ.17) ನಡೆಯುವ ಸಿಂಹ ಸಂಕ್ರಮಣ ಆಚರಣೆ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ದಿ ಪಡೆದಿದೆ.
ಉಡುಪಿ ಜಿಲ್ಲೆ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪೆರ್ಡೂರು ಸಿಂಹ ಸಂಕ್ರಮಣಕ್ಕೆ ಬರುವುದು ಇಲ್ಲಿಯ ವಿಶೇಷತೆ. 12 ಸಂಕ್ರಮಣಗಳೂ ಇಲ್ಲಿ ವಿಶೇಷವಾಗಿದ್ದು ಅದರಲ್ಲೂ ಸಿಂಹ ಸಂಕ್ರಮಣ ಹಬ್ಬದ ವಾತಾವರಣದೊಂದಿಗೆ ದೇವರ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಜನಜಂಗುಳಿ, ವಾಹನ ದಟ್ಟಣೆ ಆರಂಭವಾಗುತ್ತದೆ. ಸಿಂಹ ಸಂಕ್ರಮಣದಂದು ದೇವರಿಗೆ ವಿಶೇಷ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಭಕ್ತ ವೃಂದದ ಸಹಕಾರದೊಂದಿಗೆ ನಡೆಯಲಿದೆ.
ದಿನವಿಡೀ ದರುಶನಕ್ಕೆ ಅವಕಾಶ
ಸಾಮಾನ್ಯವಾಗಿ ಹೆಚ್ಚಿನ ದೇವಸ್ಥಾನಗಳಲ್ಲಿ ಮಧ್ಯಾಹ್ನ ಅಥವಾ ಅದರ ಅನಂತರ ಸಮಯದದಲ್ಲಿ ದೇವರ ದರುಶನಕ್ಕೆ ಅವಕಾಶವಿರುವುದಿಲ್ಲ. ಆದರೆ ಕದಳೀ ಪ್ರಿಯ ಅನಂತಪದ್ಮನಾಭ ದೇವಸ್ಥಾನ ಪ್ರತಿದಿನ ಬೆಳಗ್ಗೆ 6ಗಂಟೆಯಿಂದ ರಾತ್ರಿ 8ಗಂಟೆ ತನಕ ತೆರೆದಿದ್ದು ಮಧ್ಯಾಹ್ನ ಅನ್ನಪ್ರಸಾದದೊಂದಿಗೆ ದಿನವಿಡೀ ದೇವರ ದರುಶನಕ್ಕೆ ಅವಕಾಶವಿದೆ
ಬಾಳೆಹಣ್ಣಿಗೊಲಿವ ಭಗವಂತ
ಅನಂತಪದ್ಮನಾಭನ ವಿಗ್ರಹವನ್ನು ತರುವಾಗ ದಾರಿಯಲ್ಲಿ ಬಾಳೆಹಣ್ಣು ಮಾರಾಟ ಮಾಡುವವನು ಅದನ್ನು ನಿರ್ಲಕ್ಷ್ಯ ಮಾಡಿದನಂತೆ. ಆ ಅನಂತರ ಆತನಿಗೆ ನಾನಾ ಸಮಸ್ಯೆಗಳಾಯಿತು. ಬಳಿಕ ಅವನು ದೇವರಿಗೆ ಬಾಳೆಹಣ್ಣು ಸಮರ್ಪಣೆ ಮಾಡಿದ ಮೇಲೆ ಸಮಸ್ಯೆಗಳು ಬಗೆಹರಿಯಿತು ಎಂದು ಹೇಳಲಾಗುತ್ತಿದೆ.
ಸುಮಾರು ಒಂದು ಸಾವಿರ ವರ್ಷಗಳಿಂದಲೂ ಭಕ್ತರಿಂದ ಬಾಳೆಹಣ್ಣಿನ ಸೇವೆ ಇಲ್ಲಿ ನಡೆದು ಬರುತ್ತಿದ್ದು ತಮ್ಮ ಇಷ್ಟಾರ್ಥ ಸಿದ್ಧಿ ಸಂಕಲ್ಪಗಳಿಗೆ ಬಾಳೆಹಣ್ಣಿನ ಸೇವೆ ಸಲ್ಲಿಸುವುದು ಇಲ್ಲಿ ವಿಶೇಷ. ಅನಾರೋಗ್ಯದ ನಿವಾರಣೆಗೆ ಸಾವಿರ ಬಾಳೆಹಣ್ಣು, 500 ಬಾಳೆಹಣ್ಣು, ದಿನಕ್ಕೊಂದು ಬಾಳೆಹಣ್ಣು, ಸಿಬ್ಲಿ ಹಣ್ಣು ಹೀಗೆ ಬಾಳೆಹಣ್ಣಿನ ಹರಕೆ ಸೇವೆ ನಡೆಯುತ್ತಿದೆ.
ಹನ್ನೆರಡು ಸಂಕ್ರಮಣ ವ್ರತಾಚರಣೆ
ಸಂಕ್ರಮಣ ದೇವರು ಎಂದು ಪ್ರಸಿದ್ಧಿ ಪಡೆದ ಪೆರ್ಡೂರು ಕ್ಷೇತ್ರವು ವರ್ಷದ ಹನ್ನೆರಡು ರಾಶಿಗಳನ್ನು ಸೂರ್ಯ ಕ್ರಮಿಸುವ ಘಟ್ಟದಲ್ಲಿ ಅನಂತಪದ್ಮನಾಭ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆರಾಧಿಸುವ ಪದ್ದತಿ ಹಿಂದಿನಿಂದಲೂ ಇದೆ.
ಶ್ರೀ ಕ್ಷೇತ್ರದಲ್ಲಿ 12 ಸಂಕ್ರಮಣಕ್ಕೆ ತಪ್ಪದೇ ಬಂದು ಭಗವಂತನ ದರ್ಶನ ಪಡೆದರೆ ಸಂಕಲ್ಪ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ.
ಹಿಂದೆ ಪ್ರತೀ ಸಂಕ್ರಮಣದಂದು ಕಾಲ್ನಡಿಗೆಯಲ್ಲಿಯೇ ದೇವರ ದರ್ಶನ ಪಡೆಯುತ್ತಿದ್ದರು. ಈಗಲೂ ಹೆಚ್ಚಿನ ಭಕ್ತರು ನಿರಾಹಾರರಾಗಿ ಶ್ರೀ ಸನ್ನಿಧಿಗೆ ಬಂದು ಹಣ್ಣು ಕಾಯಿ ಸಮರ್ಪಿಸಿ ಭಕ್ತಿಯಿಂದ ದೇವರಲ್ಲಿ ಪ್ರಾಥಿಸಿ ವ್ರತಾಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ.
ಮದುಮಕ್ಕಳ ಜಾತ್ರೆ
ಆಷಾಢ ಕಳೆದು ಬರುವ ಸಿಂಹ ಮಾಸ ಹೊಸ ಮದುಮಕ್ಕಳಿಗೆ ವಿಶೇಷ. ಈ ವರ್ಷದಲ್ಲಿ ಮದುವೆಯಾದ ಮದುಮಕ್ಕಳು ಸಿಂಹಸಂಕ್ರಮಣದಂದು ದೇವರ ದರ್ಶನ ಮಾಡಿ ಹೋಗುವ ಸಂಪ್ರದಾಯ ಮೊದಲಿನಿಂದಲೂ ನಡೆದು ಬರುತ್ತಿದೆ. ಮದುಮಗ ತನ್ನ ಮನೆ ಹಿರಿಯರೊಂದಿಗೆ ತನ್ನ ಮಡದಿಯನ್ನು ಕರೆದೊಯ್ಯಲು ಬರುವ ಹಾಗೂ ಮದುಮಗಳು ಗಂಡನ ಮನೆಗೆ ಹೋಗುವ ಮುನ್ನ ತಮ್ಮ ಹೆತ್ತವರೊಂದಿಗೆ ಬಂದು ಸೇರುವ ತಾಣ ಇದಾಗಿದ್ದು, ಇಲ್ಲಿ ಹೊಸ ದಂಪತಿ ಶ್ರೀ ಸ್ವಾಮಿಯನ್ನು ಪ್ರಾರ್ಥಿಸುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದ್ದು, ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿಯನ್ನು ಪಡೆದಿದೆ.
ಸಮಸ್ಯೆಯಾಗದಂತೆ ಕ್ರಮ
ಈ ಭಾಗದ ಯುವಕ ಸಂಘ, ಗ್ರಾಮಸ್ಥರ, ಪೊಲೀಸ್ ಇಲಾಖೆಯ ಸಹಕಾರದಿಂದ ಯಾವುದೇ ನೂಕುನುಗ್ಗಲಿಲ್ಲದೆ, ಮಳೆಯಲ್ಲಿ ಒದ್ದೆಯಾಗದಂತೆ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆೆ. ಅಲ್ಲದೆ ಅಂಗವಿಕಲರಿಗೆ ಮತ್ತು ವಯೋವೃದ್ಧರಿಗೆ ದೇವರ ಶೀಘ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. -ಪ್ರತಿಭಾ ಆರ್., ತಹಶೀಲ್ದಾರರು, ಕಾಪು, ಕಾರ್ಯ ನಿರ್ವಹಣಾಧಿಕಾರಿ, ಶ್ರೀ ಅನಂತಪದ್ಮನಾಭ ದೇವಸ್ಥಾನ , ಪೆರ್ಡೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.