Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ

ಪುರಾತನ ದೇಗುಲದ ವಾಸ್ತುವಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಈ ಕ್ರಮ

Team Udayavani, Sep 14, 2024, 7:15 AM IST

Perduru-Highway

ಹೆಬ್ರಿ: ಪೆರ್ಡೂರಿನ ಸಾವಿರ ವರ್ಷಗಳ ಇತಿಹಾಸದ ಅನಂತ ಪದ್ಮನಾಭ ದೇವಾಲಯದ ನಾಗವನ ಹಾಗೂ ವಾಸ್ತು ಪರಿಧಿಗೆ ಧಕ್ಕೆ ಆಗ ದಂತೆ ರಾಷ್ಟ್ರೀಯ ಹೆದ್ದಾರಿ-169ಎ ಕಾಮಗಾರಿ ನಡೆಸಲು ಸಾಧ್ಯವೇ ಎಂದು ಪರಿಶೀಲಿಸಲು ಹೆದ್ದಾರಿ ಇಲಾಖೆಗೆ ಹೈಕೋರ್ಟ್‌ ಸಲಹೆ ನೀಡಿದೆ.

ಮಲ್ಪೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಪೆರ್ಡೂರು ಭಾಗದಲ್ಲಿ ದೇವಸ್ಥಾನಕ್ಕೆ ತಾಗಿಕೊಂಡು ಹಾದು ಹೋಗುವ ನೀಲನಕ್ಷೆ ತಯಾರಾಗಿದೆ. ಇದನ್ನು
ಸ್ಥಳೀಯರಾದ ರಂಜಿತ್‌ ಪ್ರಭು ಕೋರ್ಟ್‌ನಲ್ಲಿ ಪ್ರಶ್ನಿಸಿ, ದೇಗುಲಕ್ಕೆ ಧಕ್ಕೆ ಯಾಗುವುದನ್ನು ತಡೆ ಯುವಂತೆ ಮನವಿ ಮಾಡಿದ್ದರು. ಪ್ರಸ್ತುತ ದೇವಸ್ಥಾನದ ಆಡಳಿತ ಮಂಡಳಿಯೂ ನ್ಯಾಯಾ ಲಯದ ಮೆಟ್ಟಿಲೇರಿದೆ. ನಕ್ಷೆ ಪ್ರಕಾರ ಹೆದ್ದಾರಿಯು ದೇವಾಲಯದ ರಥಬೀದಿ, ನಾಗವನ ಇರುವ ಜಾಗದಲ್ಲೇ ಹಾದು ಹೋಗಲಿದೆ.
ಇದರಿಂದ ದೇವಾಲಯವು ಮೂಲ ಸ್ವರೂಪವನ್ನು ಕಳೆದುಕೊಳ್ಳಲಿದೆ ಹಾಗೂ ವಾಸ್ತುವಿಗೆ ಧಕ್ಕೆ ಅಗಲಿದೆ. ಆದ್ದರಿಂದ ಪರ್ಯಾಯ ಸಾಧ್ಯತೆ ಬಗ್ಗೆ ಪರಿಶೀಲಿಸಲು ಸಲಹೆ ನೀಡುವಂತೆ ನ್ಯಾಯವಾದಿ ಕೇತನ್‌ ಕುಮಾರ್‌ ಬಂಗೇರ ಅವರು ದೇಗುಲದ ಪರವಾಗಿ ಮನವಿ ಮಾಡಿದ್ದರು.

ಬದಲಿ ಮಾರ್ಗಕ್ಕೆ ಸೂಚನೆ
ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಪುರಾತನ ಇತಿಹಾಸ ಹೊಂದಿರುವ ದೇವಸ್ಥಾನ ಗಳನ್ನು ರಕ್ಷಿಸಬೇಕಿದೆ. ಈ ಭಾಗದಲ್ಲಿ ಪರ್ಯಾಯ ಮಾರ್ಗದ ಸಾಧ್ಯತೆ ಬಗ್ಗೆ ಪರಿಶೀಲಿಸಬೇಕು. ಬೆಂಗಳೂರಿನ ಕೋರ್ಟ್‌ ಪಕ್ಕದ ಕಟ್ಟಡ ನೆಲಸಮಕ್ಕೆ ವಿರೋಧ ಇದೆ. ದೇವಸ್ಥಾನಕ್ಕೆ ಧಕ್ಕೆ ಅಗುವುದನ್ನು ತಡೆಯಲು ಸಾಧ್ಯ ವಿಲ್ಲವೇ ಎಂದು ಪ್ರಶ್ನಿಸಿದೆ. ರಸ್ತೆ ಅಗಲ ಗೊಳಿಸುವುದು ಅಥವಾ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡುವಾಗ ದೇವಾಲಯ ಸಹಿತ ಧಾರ್ಮಿಕ ಕಟ್ಟಡಗಳಿಗೆ ಧಕ್ಕೆ ಆಗುವುದಾದರೆ ಅಂತಹ ಸಂದರ್ಭಗಳಲ್ಲಿ ಸಂಬಂಧಿಸಿದ ಪ್ರಾಧಿಕಾರ ಪರ್ಯಾಯ ಮಾರ್ಗ ಗಳನ್ನು ಬಳಸಬಹುದು ಎಂದರು.

ಬದಲಿ ಮಾರ್ಗ
ಪೆರ್ಡೂರು ಮೇಲ್ಪೇಟೆಯಿಂದ ದೇವಸ್ಥಾನಕ್ಕೆ ಸಂಬಂಧಪಟ್ಟ ಖಾಲಿ ಜಾಗದ ಮೂಲಕ ಹಾದು ಬಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಪರ್ಯಾಯ ಮಾರ್ಗವನ್ನು ಬಳಸಬಹು ದು ಎಂದು ಸ್ಥಳೀಯರು ಹೆದ್ದಾರಿ ಇಲಾಖೆಗೆ ತಿಳಿಸಿದ್ದಾರೆ. ಇಲ್ಲೂ ದೇವಸ್ಥಾನದ ಶೇ. 80ರಷ್ಟು ಜಾಗ ರಸ್ತೆಗೆ ಹೋಗುತ್ತದೆ. ಆದರೆ ದೇಗು ಲದ ವಾಸ್ತುವಿಗೆ ಹಾನಿಯಾಗದು. ಇಲಾಖೆಯ ನಕ್ಷೆ ಪ್ರಕಾರ ಕಾಮಗಾರಿ ನಡೆದರೆ ಹಲವು ಅಂಗಡಿ, ಮನೆಗಳು, ರಾಮ ಮಂದಿರ, ನಾಗಬನಕ್ಕೂ ಧಕ್ಕೆಯಾಗುವುದಲ್ಲದೆ, ದೇವಸ್ಥಾನದ ವಾಸ್ತು ಭಿನ್ನವಾಗಲಿದೆ.

“ದೇಗುಲ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು.” –ಕೋಟ ಶ್ರೀನಿವಾಸ ಪೂಜಾರಿ , ಸಂಸದರು, ಉಡುಪಿ -ಚಿಕ್ಕಮಗಳೂರು ಕ್ಷೇತ್ರ

ದೇವಸ್ಥಾನದ ವಾಸ್ತು ಉಳಿಸಲು ಕೈಜೋಡಿಸಿ
“ಪೆರ್ಡೂರು ದೇವಸ್ಥಾನದ ವಾಸ್ತು ಮತ್ತು ಮೂಲ ಸ್ವರೂಪವನ್ನು ಉಳಿಸಲು ಭಕ್ತರು ಹಾಗೂ ಗ್ರಾಮಸ್ಥರೆಲ್ಲರೂ ಕೈಜೋಡಿಸ ಬೇಕಿದೆ. ಹೈಕೋರ್ಟ್‌ನ ನ್ಯಾಯಾಧೀಶರೂ ದೇವಸ್ಥಾನದ ಪರ ಅಭಿಪ್ರಾಯ ವ್ಯಕ್ತಪಡಿಸಿರುವುದು ಶ್ಲಾಘನೀಯ.” – ರಂಜಿತ್‌ ಪ್ರಭು, ಸ್ಥಳೀಯರು

 

– ಹೆಬ್ರಿ ಉದಯ ಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

HDK-by-Poll

By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್‌.ಡಿ.ಕುಮಾರಸ್ವಾಮಿ

Janapada-Academy

Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮೃತರ ಕುಟುಂಬಸ್ಥರು ಪಾರದರ್ಶಕ ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು

AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK-by-Poll

By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್‌.ಡಿ.ಕುಮಾರಸ್ವಾಮಿ

DK-Shivakuamar

By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ

Janapada-Academy

Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.