Hiriadka: ಎಮ್.ಎಸ್.ಪಿ.ಸಿ.ಯಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್
Team Udayavani, Feb 23, 2024, 11:08 AM IST
ಹಿರಿಯಡಕ: ಹಿರಿಯಡಕ ಸಮೀಪದ ಮಂಜೊಟ್ಟಿ ಎಂಬಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸರಬರಾಜು ಆಗುವ ಎಮ್.ಎಸ್.ಪಿ.ಸಿ.ಯ ಪ್ರಧಾನ ಕಚೇರಿಯಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್ ನಡೆದಿದೆ ಎಂದು ಕಾರ್ಯದರ್ಶಿ ಯಶೋಧ ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರು ನೀಡಿದ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಬಿವೃದ್ದಿ ಇಲಾಖೆ ಕರ್ನಾಟಕ ಸರ್ಕಾರ ಇದರ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಅಂಗನವಾಡಿ ಕೇಂದ್ರಗಳಿಗೆ ಅಹಾರ ಸರಬರಾಜು ಮಾಡುವ ಬೊಮ್ಮರಬೆಟ್ಟು ಗ್ರಾಮದ ಮಂಜೊಟ್ಟಿ ಎಂಬಲ್ಲಿರುವ ಎಮ್.ಎಸ್.ಪಿ.ಸಿ.ಯಲ್ಲಿ ಕಳೆದ 12 ವರ್ಷಗಳಿಂದ ಲೆಕ್ಕ ಪತ್ರ ನಿರ್ವಹಣೆ ಮಾಡುವ ಭವ್ಯ ಎಂಬವರು ಸುಮಾರು ಮೂರು ತಿಂಗಳ ಹಿಂದೆ ಹರೀಶ್ ಗೌಡ ಎಂಬವರಿಂದ ಸಂಸ್ಥೆಯ ಲೆಕ್ಕ ಪರಿಶೋಧನೆ ಮಾಡಿಸಿದಾಗ ಸಂಸ್ಥೆಯು ಸುಮಾರು 18 ಲಕ್ಷ ನಷ್ಟದಲ್ಲಿರುವುದಾಗಿ ತಿಳಿಸಿದ್ದು, ಈ ಬಗ್ಗೆ ಲೆಕ್ಕಪರಿಶೋಧಕಿ ಭವ್ಯ ಅವರಲ್ಲಿ ವಿಚಾರಿಸಿ ಲೆಕ್ಕ ಪತ್ರದ ದಾಖಲೆಗಳನ್ನು ತೋರಿಸುವಂತೆ ಕೇಳಿದಾಗ ಲೆಕ್ಕ ಪತ್ರದ ಪುಸ್ತಕವನ್ನು ಬಿಸಾಡಿ ನೀವೆ ನೋಡಿಕೊಳ್ಳಿ ಎಂದು ಹೇಳಿರುತ್ತಾರೆ. ಇದರಿಂದ ಸಂಸ್ಥೆಯಲ್ಲಿ ಅವ್ಯವಹಾರ ನಡೆದಿದ್ದರ ಬಗ್ಗೆ ತಿಳಿದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ಉಪನಿರ್ದೇಶಕರಿಗೆ ದೂರು ನೀಡಿದ್ದು, ಅವರು ಸಂಸ್ಥೆಯ ಬ್ಯಾಂಕ್ ಸ್ಟೇಟ್ ಮೆಂಟ್ ಪಡೆದು ಪರಿಶೀಲನೆ ನಡೆಸಿ ಚೆಕ್ ಮತ್ತು ಎಟಿಎಂ ಮುಖಾಂತರ ಲಕ್ಷಗಟ್ಟಲೆ ಹಣ ತೆಗೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಭವ್ಯ ಬಲತ್ಕಾರವಾಗಿ ಅಧ್ಯಕ್ಷ ಹಾಗೂ ಖಜಾಂಚಿಯವರಿಂದ ಸಹಿ ಮಾಡಲು ಹೇಳಿ, ಇಲ್ಲವಾದಲ್ಲಿ ನಿಮ್ಮನ್ನು ಕೆಲಸದಿಂದ ವಜಾ ಮಾಡುವುದಾಗಿ ಬೆದರಿಸಿ ಖಾಲಿ ಚೆಕ್ಕುಗಳಿಗೆ ಹಾಗೂ ಸಂಸ್ಥೆಯ ಲೇಟರ್‌ರೆಡ್ ಗೆ ಸಹಿ ಮಾಡಿಸಿಕೊಂಡು ಬ್ಯಾಂಕಿನಿಂದ ಲಕ್ಷಾಂತರ ಹಣ ಪಡೆದು ತನ್ನ ಸ್ವಂತ ಉಪಯೋಗಕ್ಕೆ ಖರ್ಚು ಮಾಡಿ ಸಂಸ್ಥೆಗೆ ಮೋಸ ಮಾಡಿದ್ದಾರೆ ಎನ್ನಲಾಗಿದೆ. ಅದಲ್ಲದೆ ಸಂಸ್ಥೆಯ ಸದಸ್ಯರಿಗೆ ಬೆದರಿಕೆ ಕರೆ ಮಾಡಿರುವುದಾಗಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.