ಕೆ.ಎಸ್.ಆರ್.ಟಿ.ಸಿ. ದಸರಾ ಪ್ಯಾಕೇಜ್‌ಗೆ ಅಭೂತಪೂರ್ವ ಸ್ಪಂದನೆ

ಧಾರ್ಮಿಕ, ಪ್ರವಾಸಿ ತಾಣಕ್ಕೆ ಈ ಸೇವೆ ವಿಸ್ತರಣೆಗೆ ಚಿಂತನೆ

Team Udayavani, Oct 7, 2022, 2:57 PM IST

18

ಉಡುಪಿ: ದಸರಾ ಸಂಭ್ರಮಕ್ಕೆ ಮತ್ತಷ್ಟು ಭಕ್ತರನ್ನು ಕೊಂಡೊಯ್ಯುವ ದೃಷ್ಟಿಯಿಂದ ಕೆ.ಎಸ್.ಆರ್.ಟಿ.ಸಿ. ಈ ಬಾರಿ ದಸರಾ ಪ್ಯಾಕೇಜ್‌ ಮಾಡಿದ್ದು, ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಈ ಸೇವೆಯನ್ನು ಅ. 9ರ ವರೆಗೆ ವಿಸ್ತರಿಸಲಾಗಿದೆ.

ಉಡುಪಿ ಸಿಟಿ ಬಸ್‌ ನಿಲ್ದಾಣದಿಂದ ಆರಂಭಗೊಂಡು ಕಡಿಯಾಳಿ, ಕನ್ನರ್ಪಾಡಿ, ಅಂಬಲಪಾಡಿ, ಪುತ್ತೂರು, ಮಂದಾರ್ತಿ, ನೀಲಾವರ, ಕುಂಜಾರುಗಿರಿ, ಕಾಪು ಮಾರಿಗುಡಿ, ಉಚ್ಚಿಲ ದೇವಸ್ಥಾನಕ್ಕೆ ಹೋಗಿ ಬಳಿಕ ಸಿಟಿ ಬಸ್‌ ನಿಲ್ದಾಣಕ್ಕೆ ತಂದು ಬಿಡಲಾಗುತ್ತದೆ.

ಸೆ.29ರಿಂದ ಈ ಸೇವೆ ಆರಂಭಗೊಂಡಿದ್ದು, ಮೊದಲು ದಿನ 2 ಬಸ್‌ಗಳನ್ನು ಓಡಿಸಲಾಗಿತ್ತು. ಎರಡೂ ಬಸ್‌ಗಳೂ ಭರ್ತಿಯಾದ ಪರಿಣಾಮ ಬಸ್‌ಗಳ ಸಂಖ್ಯೆಯನ್ನು ಅಧಿಕಗೊಳಿಸಲಾಗಿದೆ. ಕೆಲವು ದಿನ 4ರಿಂದ 7 ಬಸ್‌ಗಳೂ ಓಡಾಟ ಮಾಡಿವೆ. ಅ.2ರಂದು ರವಿವಾರ ಒಟ್ಟು 17 ಬಸ್‌ಗಳು ಓಡಾಟ ಮಾಡಿವೆ. ಜನರು ಮುಂಗಡವಾಗಿ ಟಿಕೆಟ್‌ಗಳನ್ನು ಬುಕಿಂಗ್‌ ಮಾಡಿದ ಪರಿಣಾಮ ಹೆಚ್ಚುವರಿ ಬಸ್‌ ಒದಗಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಕೆ.ಎಸ್.ಆರ್.ಟಿ.ಸಿ. ಉಡುಪಿ ಡಿಪೋ ಮ್ಯಾನೇಜರ್‌ ಶಿವರಾಮ್‌ ನಾಯಕ್‌, ಯೋಜನೆಯಂತೆ ಅ. 4ರಂದು ಈ ಸೇವೆಯನ್ನು ಕೊನೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಪ್ರಯಾಣಿಕರು ಈಗಾಗಲೇ ಟಿಕೆಟ್‌ ಗಳನ್ನು ದಿನಂಪ್ರತಿ ಬುಕ್‌ ಮಾಡುತ್ತಿರುವ ಕಾರಣ ಈ ಸೇವೆಯನ್ನು ಮತ್ತೆ 2 ದಿನಗಳ ಕಾಲ ವಿಸ್ತರಿಸಲಾಗಿದೆ. ಮತ್ತಷ್ಟು ಬೇಡಿಕೆ ಬಂದರೆ ಇದನ್ನು ಮತ್ತೆ ವಿಸ್ತರಣೆ ಮಾಡುವ ಯೋಜನೆಯಿದೆ ಎನ್ನುತ್ತವೆ ಕೆ.ಎಸ್.ಆರ್.ಟಿ.ಸಿ. ಮೂಲಗಳು.

ದಸರಾವಷ್ಟೇ ಅಲ್ಲದೆ ಪ್ರವಾಸೋದ್ಯಮದ ದೃಷ್ಟಿಯಿಂದಲೂ ಈ ಯೋಜನೆ ಬಹಳಷ್ಟು ಉಪಕಾರಿಯಾಗಿದೆ. ಈಗಾಗಲೇ ಟೆಂಪಲ್‌ ಟೂರಿಸಂ ಬಗ್ಗೆ ಹಲವಾರು ಸಭೆಗಳಲ್ಲಿ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ವಾರಾಂತ್ಯದ ದಿನ ಅಥವಾ ದಿನಂಪ್ರತಿಯಂತೆ ನಿಗದಿತ ಅವಧಿಯಲ್ಲಿ ಜಿಲ್ಲೆಯ ವಿವಿಧ ದೇವಸ್ಥಾನಗಳು ಹಾಗೂ ಪ್ರವಾಸಿ ತಾಣಗಳಿಗೆ ಕೆ.ಎಸ್.ಆರ್.ಟಿ.ಸಿ. ಸೇವೆ ನೀಡುವ ಬಗ್ಗೆ ಅಧಿಕಾರಿಗಳು ಯೋಜನೆ ರೂಪಿಸಿಕೊಂಡಿದ್ದಾರೆ.

ಸಾವಿರಕ್ಕೂ ಅಧಿಕ ಮಂದಿಗೆ ಸೇವೆ

ಕೆ.ಎಸ್.ಆರ್.ಟಿ.ಸಿ. ಸೆ.29ರಿಂದ ಅ.5ರ ವರೆಗೆ ಸಾವಿರಕ್ಕೂ ಅಧಿಕ ಮಂದಿಯನ್ನು ವಿವಿಧ ದೇವಸ್ಥಾನಗಳಿಗೆ ಕರೆದೊಯ್ದಿದೆ. ಒಂದು ಬಸ್‌ನಲ್ಲಿ ತಲಾ 30ರಿಂದ 35 ಮಂದಿಯನ್ನು ಕೊಂಡೊಯ್ಯಲಾಗುತ್ತಿದೆ. ಮುಂಗಡವಾಗಿ ಅಷ್ಟೇ ಅಲ್ಲದೆ ಕೆಲವರು ನಿಲ್ದಾಣಕ್ಕೆ ಬಂದಲ್ಲಿ ಆ ಕೂಡಲೇ ಟಿಕೆಟ್‌ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.