ನಾನು ವ್ಯಾಪಾರಸ್ಥನಲ್ಲ,ಸ್ವಾರ್ಥಕ್ಕಾಗಿ ಏನೂ ಮಾಡಿಕೊಂಡವನಲ್ಲ: ವಿನಯ್ ಕುಮಾರ್ ಸೊರಕೆ
ನನ್ನ ಜೀವನವನ್ನು ಸಂಪೂರ್ಣವಾಗಿ ಜನ ಸೇವೆಗಾಗಿಯೇ ಮುಡಿಪಾಗಿಟ್ಟಿರುವೆ
Team Udayavani, May 4, 2023, 6:18 PM IST
ಕಾಪು: ಕಳೆದ ಚುನಾವಣೆಯಲ್ಲಿ ನನ್ನ ಬಗ್ಗೆ ಕ್ಷೇತ್ರದಲ್ಲಿ ಬಹಳಷ್ಟು ಅಪಪ್ರಚಾರ ನಡೆಸಿ ಚುನಾವಣೆಯಲ್ಲಿ ಸೋಲಿಸಲಾಯಿತು. ಈ ಬಾರಿಯೂ ನನ್ನ ಬಗ್ಗೆ ಅಪಪ್ರಚಾರ ಆರಂಭಗೊಂಡಿದೆ. ಆದರೆ ನಾನು ಏನು, ಹೇಗೆ ಎನ್ನುದರ ಬಗ್ಗೆ ಮತದಾರರು ತಿಳಿದುಕೊಂಡಿದ್ದಾರೆ ಎನ್ನುವ ನಂಬಿಕೆ ನನಗಿದೆ. ಅಪಪ್ರಚಾರ ಮಾಡುವವರಿಗೆ ಈ ಬಾರಿಯ ಚುನಾವಣೆಯಲ್ಲಿ ಜನರೇ ಸರಿಯಾದ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಮುದರಂಗಡಿ ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಭೇಟಿ ನೀಡಿ, ಸಮಾಜದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.
ನನ್ನ ಜೀವನ ತೆರೆದ ಪುಸ್ತಕವಾಗಿದೆ. ಎಲ್ಲರಿಗೂ ನನ್ನ ಬಗ್ಗೆ ಚೆನ್ನಾಗಿ ಗೊತ್ತಿದೆ. ಕೋಟಿ ಚೆನ್ನಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಗಳು ನಮ್ಮ ಸಮಾಜದ ಮಹಾನ್ ಶಕ್ತಿಗಳು. ಇತರ ಎಲ್ಲಾ ಸಮುದಾಯಗಳಿಗೂ ಆದರ್ಶ ಪ್ರಾಯವಾದ ಚಿಂತನೆಯನ್ನು ಬಿತ್ತಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ನಾನು ಶಾಸಕನಾಗಿದ್ದಾಗ ಮುದರಂಗಡಿ, ಎಲ್ಲೂರು, ಕುತ್ಯಾರು, ಪಿಲಾರು, ಸಾಂತೂರು ಪ್ರದೇಶಗಳ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಒದಗಿಸಿಕೊಟ್ಟಿದ್ದು ಇನ್ನಷ್ಟು ಕೆಲಸವನ್ನು ಮಾಡಲು ನೀವೆಲ್ಲಾ ಜತೆ ಸೇರಿ ಶಕ್ತಿ ತುಂಬ ಬೇಕಿದೆ. ಸಮಾಜವೂ ನನ್ನೊಂದಿಗೆ ಕೈ ಜೋಡಿಸಬೇಕಿದೆ ಎಂದರು.
ಬಿಲ್ಲವ ಸಮಾಜದ ಮುಖಂಡರಾದ ಸುರೇಶ ಸುವರ್ಣ, ನವೀನ್ ಚಂದ್ರ ಸುವರ್ಣ, ಶಿವಾಜಿ ಸುವರ್ಣ, ಆನಂದ ಪೂಜಾರಿ, ವೈ. ಸುಧೀರ್ ಕುಮಾರ್, ಶೇಖರ ಶಾಂತಿ, ರೋಹನ್ ಕುಮಾರ್, ಕೃಷ್ಣ ಪೂಜಾರಿ, ಗುಣಕರ ಪೂಜಾರಿ, ರವಿರಾಜ್ ಅಡ್ವೆ, ಅಜಿತ್ ಪೂಜಾರಿ, ಸುಜಾತ ಸುವರ್ಣ, ಜಯಶ್ರೀ, ಡೇವಿಡ್ ಡಿಸೋಜ ಉಪಸ್ಥಿತರಿದ್ದರು.
ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದ ಸೊರಕೆ
ಸೋತರೂ ಎದೆಗುಂದದೆ ಜನರ ಜೊತೆ ಇದ್ದು ಬಹಳಷ್ಟು ಜನಸೇವೆಯನ್ನು ಮಾಡಿದ್ದೀರಿ. ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಕಳೆದ 40 ವರ್ಷಗಳಿಂದ ಜನರ ಸೇವೆ ಮಾಡುತ್ತಿರುವ ನಿಮ್ಮೊಂದಿಗೆ ಈ ಬಾರಿ ನಮ್ಮ ಸಮಾಜ ಇದೆ ಎಂದು ಜಗದ್ಗುರು ಶ್ರೀಮದ್ ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದ್ದಾರೆ.
ಪಡುಕುತ್ಯಾರಿನಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ ಅವರು ತಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ, ಸರಕಾರದ ಯೋಜನೆಗಳ ಬಗ್ಗೆ ಸ್ವಾಮೀಜಿಯವರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಸೊರಕೆ ಅವರ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಶ್ರೀಗಳು ಇನ್ನಷ್ಟು ಸೇವೆಗೈಯ್ಯುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಆಶೀರ್ವದಿಸಿದರು.
ಕಾಂಗ್ರೆಸ್ ಮುಖಂಡರಾದ ದಿವಾಕರ ಡಿ. ಶೆಟ್ಟಿ, ರಾಜೇಶ್ ಕುಲಾಲ್, ದಿವಾಕರ ಬಿ. ಶೆಟ್ಟಿ, ಜಾನ್ಸನ್ ಕಾರ್ಕಡ, ಶಶಿಕಾಂತ್ ಆಚಾರ್ಯ, ಪ್ರಭಾಕರ ಆಚಾರ್ಯ, ರತನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಜಗತ್ತಿನ ಭೂಪಟದಲ್ಲಿ ಗುರುತಿಸುವಂತೆ ಮಾಡುವ ಗುರಿ
ನಾನು ವ್ಯಾಪಾರಸ್ಥನಲ್ಲ. ಕಳೆದ 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಜನಸೇವೆ ಮಾಡುತ್ತಾ ಬರುತ್ತಿದ್ದೇನೆ. ಜನಸೇವೆಗಾಗಿಯೇ ನನ್ನ ಜೀವನವನ್ನು ಮುಡಿಪಾಗಿಟ್ಟಿದ್ದೇನೆ. ಕಾಪು ಕ್ಷೇತ್ರದಲ್ಲಿ ಇತಿಹಾಸ ಕಂಡು ಕೇಳರಿಯದ ಅಭಿವೃದ್ಧಿ ಕೆಲಸಗಳನ್ನು ನಡೆಸಿದ್ದೇನೆ ಎಂಬ ಖುಷಿಯಿದೆ. ಈ ಬಾರಿ ಮತ್ತೂಮ್ಮೆ ಅವಕಾಶ ಕೊಟ್ಟರೆ ನಿಸ್ಸಂದೇಹವಾಗಿಯೂ ಕಾಪು ಕ್ಷೇತ್ರವನ್ನು ಜಗತ್ತಿನ ಭೂಪಟದಲ್ಲಿ ಗುರುತಿಸುವಂತೆ ಮಾಡುತ್ತೇನೆ ಎಂದು ವಾಗ್ದಾನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.