ರೋಗಲಕ್ಷಣವಿದ್ದರೆ ತಿಳಿಸಿ, ಉಚಿತವಾಗಿ ಚಿಕಿತ್ಸೆ ನೀಡಲಾಗುವುದು: ಉಡುಪಿ ಜಿಲ್ಲಾಧಿಕಾರಿ ಮನವಿ
Team Udayavani, Jul 7, 2020, 2:05 PM IST
ಉಡುಪಿ: ಕೋವಿಡ್-19 ಸೋಂಕು ಇರುವ ಸಮಯದಲ್ಲಿ ಮಳೆಗಾಲ ಬಂದಿದೆ. ಯಾವುದೇ ಜ್ವರ, ಶೀತ, ಉಸಿರಾಟ ಸಮಸ್ಯೆ ಕಂಡುಬಂದಲ್ಲಿ ಮನೆಯಲ್ಲಿಯೇ ಮದ್ದು ಮಾಡುವ ಕೆಲಸ ಮಾಡಬೇಡಿ. ನಿರ್ಲಕ್ಷ್ಯ ಮಾಡದೇ ನಮ್ಮ ಫೀವರ್ ಕ್ಲಿನಿಕ್ ಗೆ ಭೇಟಿ ನೀಡಿ. ನಾವು ಚಿಕಿತ್ಸೆ ವ್ಯವಸ್ಥೆ ಮಾಡುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ನಾಗರಿಕರಿಗೆ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಯಾರಿಗಾದರೂ ರೋಗ ಲಕ್ಷಣಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿ. ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ. ಇಲ್ಲವಾದರೆ ನಾವೇ ಭೇಟಿ ನೀಡಿ ನಿಮ್ಮ ಸ್ವಾಬ್ ಟೆಸ್ಟ್ ಮಾಡಿಸುತ್ತೇವೆ ಎಂದು ಹೇಳಿದರು.
ನಾಗರಿಕರಿಗೆ ಯಾವುದೇ ಆತಂಕ ಬೇಡ. ಗಂಟಲು ದ್ರವ ಪರೀಕ್ಷೆಯನ್ನು ಉಚಿತವಾಗಿ ಮಾಡಿಸಲಾಗುತ್ತದೆ. ಕೋವಿಡ್ ಪಾಸಿಟಿವ್ ಕಂಡುಬಂದರೆ ಅವರ ಚಿಕಿತ್ಸೆಯನ್ನೂ ಉಚಿತವಾಗಿ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೆ ಯಾವುದೇ ಹಿಂಜರಿಕೆಯಿಲ್ಲದೆ ಪರೀಕ್ಷೆ ಮಾಡಿಸಿ. ಜೀವ ರಕ್ಷಣೆಯೇ ನಮ್ಮ ಆದ್ಯತೆ ಎಂದು ಜಿಲ್ಲಾಧಿಕಾರಿಗಳು ನಾಗರಿಕರಿಗೆ ಮನವಿ ಮಾಡಿದರು.
ಮನೆಗೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಮಾಹಿತಿ ನೀಡಿ ಎಂದ ಅವರು, ಕೋವಿಡ್ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲು ಕೆಲವು ಸಂಘಟನೆಗಳು ನಿರ್ರಿಸಿದ್ದಾರೆ. ಆದರೆ ಸನ್ಮಾನಗಳು ಈಗ ಬೇಡ. ಒಮ್ಮೆ ಸೋಂಕು ನಿಯಂತ್ರಣಕ್ಕೆ ಬರಲಿ ನಂತರ ಸನ್ಮಾನ ನಡೆಸಬಹುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.