ಉದ್ಯಾವರ: ಅಕ್ರಮ ಮರಳುಗಾರಿಕೆ ಬಗ್ಗೆ ಧ್ವನಿಯೆತ್ತಿದ ವ್ಯಕ್ತಿಗೆ ಬೆದರಿಕೆ, ಸ್ಕೂಟರ್ ಧ್ವಂಸ
Team Udayavani, Mar 21, 2023, 6:50 AM IST
ಕಾಪು : ಉದ್ಯಾವರ ಮಠದಕುದ್ರು ಪರಿಸರದ ಹೊಳೆ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಸಂಬಂಧಪಟ್ಟ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ, ಜೀವ ಬೆದರಿಕೆಯೊಡ್ಡಿದ್ದು ಮಾತ್ರವಲ್ಲದೇ ರಾತ್ರಿ ನಿಲ್ಲಿಸಿ ಹೋಗಿದ್ದ ಸ್ಕೂಟರ್‌ನ್ನು ಪುಡಿಗಟ್ಟಿದ ಘಟನೆ ಉದ್ಯಾವರದಲ್ಲಿ ನಡೆದಿದೆ.
ಉದ್ಯಾವರ ಮಠದಕುದ್ರು ವಿಬುಧೇಶನಗರದ ನಿವಾಸಿ ಭಾಸ್ಕರ್ ಕರ್ಕೇರ ಅವರು ಮಾ. 18ರಂದು ಅದಮಾರು ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾ ಮೀಜಿಯವರು ಮಠದಕುದ್ರು ಪರಿಸರದ ಹೊಳೆ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದು ಅಕ್ರಮ ಮರಳುಗಾರಿಕೆ ಬಗ್ಗೆ ವಿಷಯ ಪ್ರಸ್ತಾಪಿಸಿದ್ದರು.
ರಾತ್ರಿ ತನ್ನ ಸ್ಕೂಟರ್‌ನಲ್ಲಿ ಆಗಮಿಸಿದ ಅವರು ರಾ.ಹೆ. 66ರ ಸನಿಹದಲ್ಲಿರುವ ಸೋದೆ ಮಠದ ಜಾಗದಲ್ಲಿ ಸ್ಕೂಟರ್‌ನ್ನು ನಿಲ್ಲಿಸಿ ಮನೆಗೆ ಹೋಗುತ್ತಿದ್ದಾಗ ಮೂರು ಮಂದಿ ಅಪರಿಚಿತರು ಭಾಸ್ಕರ್ ಕರ್ಕೇರ ಅವರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಸ್ಕೂಟರ್‌ನ್ನು ಕೆಳಕ್ಕೆ ದೂಡಿದ್ದರು. ಅವರಿಂದ ತಪ್ಪಿಸಿಕೊಂಡು ಅಲ್ಲಿಂದ ಮನೆಗೆ ತೆರಳಿದ್ದರು. ಬೆಳಗ್ಗೆ ಸ್ಕೂಟರ್ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ಸ್ಕೂಟರ್‌ನ್ನು ಪುಡಿಗೈದು ಹಾನಿಗೊಳಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದರಿಂದಾಗಿ ಸುಮಾರು 10 ಸಾವಿರ ರೂ. ವರೆಗೆ ಸೊತ್ತು ನಷ್ಟ ಉಂಟಾಗಿದೆ.
ಈ ಬಗ್ಗೆ ಭಾಸ್ಕರ್ ಕರ್ಕೇರ ಅವರು ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.