ವರ್ಷ ಕಳೆದರೂ ಮುಕ್ತಿ ಸಿಗದ ಇಂದ್ರಾಳಿ ರೈಲ್ವೇ ಸೇತುವೆ

ವಾಹನ ಸವಾರರ ಪಾಲಿಗೆ ಕಂಟಕ

Team Udayavani, Nov 5, 2020, 4:58 AM IST

UDUPIವರ್ಷ ಕಳೆದರೂ ಮುಕ್ತಿ ಸಿಗದ ಇಂದ್ರಾಳಿ ರೈಲ್ವೇ ಸೇತುವೆ

ಇಂದ್ರಾಳಿ ಸೇತುವೆ ರಸ್ತೆ.

ಉಡುಪಿ: ನಗರವನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕಲ್ಸಂಕ -ಮಣಿಪಾಲ ರಸ್ತೆಯನ್ನು ಚತುಷ್ಪಥವಾಗಿ ಪರಿವರ್ತನೆ ಮಾಡಿದರೂ ಮಧ್ಯದಲ್ಲಿರುವ ಇಂದ್ರಾಳಿ ರೈಲ್ವೆ ಸೇತುವೆ ಇನ್ನೂ ಅಗಲವಾಗದೆ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ತೀರ್ಥಹಳ್ಳಿ- ಕಲ್ಸಂಕ ರಾ.ಹೆ. 169(ಎ) ಚತುಷ್ಪಥ ಕಾಮಗಾರಿ ಪ್ರಾರಂಭಗೊಂಡು ಎರಡು ವರ್ಷಗಳು ಕಳೆದಿದೆ. ಕಲ್ಸಂಕ -ಮಣಿಪಾಲ ರಸ್ತೆಯನ್ನು ಚತುಷ್ಪಥ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆಯುತ್ತಿದೆ. ಗುತ್ತಿಗೆದಾರರ ಟೆಂಡರ್‌ ಅವಧಿ ಮುಕ್ತಾಯವಾಗುತ್ತಾ ಬಂದರೂ ಇಂದ್ರಾಳಿಯ ಕೊಂಕಣ ರೈಲ್ವೇಯ ಮೇಲ್ಸೇತುವೆ ಮಾತ್ರ ಹಳೆಯ ದ್ವಿಪಥದಲ್ಲಿ ವ್ಯವಸ್ಥೆಯಲ್ಲೇ ಇದೆ. ವೇಗವಾಗಿ ಬರುವ ವಾಹನಗಳು ಕೂಡಲೇ ಅಗಲ ಕಿರಿದಾಗುವ ಸೇತುವೆಗೆ ಹೊಂದಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿವೆ.

ಹಳೆಯ ಸಮಸ್ಯೆ
ಎರಡು ದಶಕಗಳ ಹಿಂದಿನಿಂದಲೂ ಇಂದ್ರಾಳಿ ರೈಲ್ವೇ ಸೇತುವೆ ಯೋಜನೆ ನನೆಗುದಿಗೆ ಬಿದ್ದಿದೆ. ಮಣಿಪಾಲ- ಕಲ್ಸಂಕ ರಾಜ್ಯ ಹೆದ್ದಾರಿ ರಸ್ತೆ ನಿರ್ಮಿಸುವ ಸಂದರ್ಭದಲ್ಲಿ ಇನ್ನೊಂದು ಸೇತುವೆ ನಿರ್ಮಿಸಲು ರೈಲ್ವೇ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ನಡುವೆ ಪತ್ರ ವ್ಯವಹಾರ ನಡೆದಿತ್ತು. ಆದರೆ ಸೇತುವೆ ನಿರ್ಮಾಣ ಕುರಿತು ಯಾವುದೇ ರೀತಿಯಾದ ಕೆಲಸವಾಗಿರಲಿಲ್ಲ.

ಸಿ.ಆರ್‌. ವರದಿ ಸಲ್ಲಿಕೆ
ರಾಷ್ಟ್ರೀಯ ಹೆದ್ದಾರಿ 169(ಎ) ಇಂದ್ರಾಳಿ ರೈಲ್ವೇ ಬ್ರಿಡ್ಜ್ ವಿನ್ಯಾಸವನ್ನು ಐಐಟಿ ಮದ್ರಾಸ್‌ ಪರಿಶೀಲನೆ ನಡೆಸಿ, ಕೆಲ ತಿಂಗಳ ಹಿಂದೆ ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಎನ್‌ಒಸಿಯನ್ನು ನೀಡಲು ಕಮಿಷನರ್‌ ಆಫ್ ರೈಲ್ವೇಗೆ (ಸಿಆರ್‌) ಕಳುಹಿಸಲಾಗಿದೆ. ಈ ವರದಿಯನ್ನು ಸಂಪೂರ್ಣಪರಿಶೀಲಿಸಿದ ಬಳಿಕ ಇಲಾಖೆ ಸೇತುವೆಯನ್ನು ನಿರ್ಮಿಸಲು ಅನುಮತಿ ಸಿಗಲಿದೆ. ಕೊಂಕಣ ರೈಲ್ವೇಯಿಂದ ಈಗಾಗಲೇ ಸೇತುವೆ ನೀಲನಕಾಶೆ ಪರಿಶೀಲಿಸಿ ಅನುಮೋದನೆಗೆ ಕಮಿಷನರ್‌ ಆಫ್ ರೈಲ್ವೇಗೆ ಕಳುಹಿಸಲಾಗಿದೆ ಎಂದು ಕಾರವಾರದ ಕೊಂಕಣ ರೈಲ್ವೇಯ ಆರ್‌ಆರ್‌ಎಂ ನಿಖಂ ಅವರು ಹೇಳುತ್ತಾರೆ.

ಡಾಮರು ಕಿತ್ತು ಹೋದ ರಸ್ತೆ!
ಇಂದ್ರಾಳಿ ಸೇತುವೆ ಬಳಿ ಈ ಹಿಂದೆ ಹಾಕಲಾದ ಡಾಮರು ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಜೆಲ್ಲಿ ಕಲ್ಲುಗಳು ಮೇಲೆ ಎದ್ದಿವೆ. ಇದರಿಂದಾಗಿ ಈ ಮಾರ್ಗವಾಗಿ ಸಂಚರಿಸುವ ದ್ವಿಚಕ್ರವಾಹನಗಳು ಸ್ಕಿಡ್‌ ಆಗುತ್ತಿದ್ದು, ಸವಾರರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿದೆ. ಹೊಸ ಸೇತುವೆ ನಿರ್ಮಾಣವಾಗುವವರೆಗೂ ಹಳೆಯ ರಸ್ತೆಯನ್ನು ಸುಸ್ಥಿತಿಯಲ್ಲಿ ಇರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶೀಘ್ರ ಕಾಮಗಾರಿ ಆರಂಭ
ಕೊಂಕಣ ರೈಲ್ವೇ ಇಂದ್ರಾಳಿ ಸೇತುವೆ ನಿರ್ಮಾಣದ ವಿನ್ಯಾಸಕ್ಕೆ ಒಪ್ಪಿಗೆ ಸೂಚಿಸುವ ಕೊನೆಯ ಹಂತಕ್ಕೆ ಬಂದಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗುವ ನಿರೀಕ್ಷೆ ಇದೆ.
– ಕೆ. ರಘುಪತಿ ಭಟ್‌, ಶಾಸಕ, ಉಡುಪಿ.

ಮನವಿ ಸಲ್ಲಿಸಲಾಗಿದೆ
2017ರಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಅನುಮತಿ ಕೋರಿ ಕೊಂಕಣ ರೈಲ್ವೇಗೆ ಮನವಿ ಸಲ್ಲಿಸಿದ್ದೇವೆ. ಅವರ ಆದೇಶದಂತೆ ಸೇತುವೆ ನೀಲ ನಕಾಶೆಯಲ್ಲಿ 5 ಬಾರಿ ಬದಲಾವಣೆ ಮಾಡಲಾಗಿದೆ. ಆದೇಶ ಸಿಕ್ಕಿದ ತತ್‌ಕ್ಷಣ ಕಾಮಗಾರಿ ಪ್ರಾರಂಭಿಸಲಾಗುತ್ತದೆ.
-ಮಂಜುನಾಥ್‌ ನಾಯಕ್‌, ರಾ.ಹೆ. ಪ್ರಾಧಿಕಾರ ಎಂಜಿನಿಯರ್‌.

ಟಾಪ್ ನ್ಯೂಸ್

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.