ಕಾಪು ಲೈಟ್ ಹೌಸ್ ನಿಂದ 15 ಕಿ. ಮೀ. ದೂರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬೋಟ್ ಸಿಬ್ಬಂದಿಗಳು
Team Udayavani, May 16, 2021, 12:03 PM IST
ಕಾಪು: ನವಮಂಗಳೂರು ಬಂದರಿನ ಹೊರವಲಯದಲ್ಲಿ ಮೂರಿಂಗ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟಗ್ ಕೋರಂಗಲ ಆಪರೇಷನ್ ಮೈನ್ ಕಾಪು ಬಳಿ ಕಲ್ಲಿಗೆ ಢಿಕ್ಕಿಹೊಡೆದು ಅಪಾಯಕ್ಕೆ ಸಿಲುಕಿದೆ.
ಇದರಲ್ಲಿ 9 ಜನ ಸಿಬಂದಿಗಳಿದ್ದು, ಅಪಾಯದಲ್ಲಿದ್ದಾರೆ. ಇದರಲ್ಲಿ ಅಪಾರ ಪ್ರಮಾಣದ ಡೀಸೆಲ್, ಆಯಿಲ್ ಇದೆ ಎಂದು ತಿಳಿದು ಬಂದಿದೆ. ದೂರದ ಸಮುದ್ರದಲ್ಲಿ ಮೂರಿಂಗ್ ಸೆಂಟರ್ ಇದ್ದು ತೈಲ ಕಚ್ಚಾ ಸರಕು ಹೊತ್ತು ತರುವ ಬೃಹತ್ ಹಡಗುಗಳಿಗೆ ಈ ಟಗ್ ಗಳು ನೆರವು ನೀಡುವ ಕೆಲಸ ಮಾಡುತ್ತಿದೆ. ಈ ಟಗ್ ಗುತ್ತಿಗೆ ಕಂಪನಿಯ ಗುತ್ತಿಗೆ ಕೊನೆಗೊಂಡಿದ್ದು ,ನವಮಂಗಳೂರಿನ ಬಂದರಿನ ಹೊರ ವಲಯದಲ್ಲಿ ಆಂಕರ್ ಹಾಕುವಂತೆ ಬಂದರು ಮಂಡಳಿಯಿಂದ ಸೂಚಿಸಲಾಗಿತ್ತು.
ಇದನ್ನೂ ಓದಿ: ಕಾಪು ಬಳಿ ಕಲ್ಲಿಗೆ ಢಿಕ್ಕಿ ಹೊಡೆದ ಟಗ್: ಅಪಾಯದಲ್ಲಿ 9 ಜನ ಸಿಬ್ಬಂದಿಗಳು
ಭಾರೀ ಗಾಳಿಗೆ ಆಂಕರ್ ತುಂಡಾಗಿ ಇದೀಗ ಕಾಪು ಸಮೀಪ ಕಾಣ ಅಪಘಾತಕ್ಕೀಡಾಗಿದೆ. ಇವರ ರಕ್ಷಣಾ ಕಾರ್ಯಾಚರಣೆಗೆ ಕೋಸ್ಟ್ ಗಾರ್ಡ್ ಗೆ ಹೆಲಿಕಾಪ್ಟರ್ ನ ನೆರವು ಮುಂಬೈನಿಂದ ಬರಬೇಕಿದ್ದು , ಕೆಲವೇ ಗಂಟೆಗಳಲ್ಲಿ ರಕ್ಷಣೆ ನಡೆಯುವ ನಿರೀಕ್ಷೆಯಿದೆ.
ಕಾಪು ಲೈಟ್ ಹೌಸ್ ಬಳಿಯ ಬಂಡೆಯ ಮೇಲೆ ಸಿಲುಕಿಕೊಂಡಿರುವ ಕೋರಂಗಲ್ ಎಕ್ಸ್ ಪ್ರೆಸ್ ವೆಸೆಲ್ ಬೋಟ್ ನಲ್ಲಿ ಸಿಲುಕಿರುವವರ ರಕ್ಷಣೆಗೆ ಕರಾವಳಿ ಕಾವಲು ಪಡೆ, ಉಡುಪಿ ಜಿಲ್ಲಾ ಪೊಲೀಸ್ ಪಡೆ, ಕೀರೋಸ್ ಕಂಪೆನೆಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಕೋರಂಗಲ್ ವೆಸೆಲ್ ಬೋಟ್ ನಲ್ಲಿ ಇರುವವರ ಹೆಸರು : ಮುಲ್ಲಾ ಖಾನ್ (ಕ್ಯಾಪ್ಟನ್), ಗೌರವ್ ಕುಮಾರ್ (ಸೆಕೆಂಡ್ ಕ್ಯಾಪ್ಟನ್), ಶಾಂತನು ಎ.ವಿ., ರಾಹುಲ್, ದೀಪಕ್, ಪ್ರಶಾಂತ್, ತುಷಾರ್, ಲಕ್ಷ್ಮೀ ನಾರಾಯಣ್, ರೂಡ್ ಅಹಮದ್ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೀ ರೋಸ್ ಕಂಪೆನಿಯ ಮ್ಯಾನೇಜರ್ ವೇಲು ತಿಳಿಸಿದ್ದಾರೆ.
ಇದನ್ನೂ ಓದಿ: ‘ತೌಕ್ತೆ’ ಅಬ್ಬರ : ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಬಿ.ಎಸ್. ವೈ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.