ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ
Team Udayavani, Oct 28, 2021, 1:43 PM IST
ಕಾಪು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡದ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾಪು ತಾಲೂಕು ಆಡಳಿತದ ನೇತೃತ್ವದಲ್ಲಿ ವಿವಿಧ ಇಲಾಖೆಗಳು, ಸಂಸ್ಥೆಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಾಪು ಬೀಚ್ ನಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು.
ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಸಾರ್ವಜನಿಕರಿಗೆ ಕನ್ನಡ ಧ್ವಜಗಳನ್ನು ನೀಡುವ ಮೂಲಕ ಕನ್ನಡಕ್ಕಾಗಿ ನಾವು ಕಾರ್ಯಕ್ರಮ ಅಭಿಯಾನಕ್ಕೆ ಚಾಲನೆ ನೀಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಇಲಾಖೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗೃಹರಕ್ಷಕದಳ, ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು, ಸಂಘ – ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಜೊತೆಗೂಡಿ ಸಾಮೂಹಿಕವಾಗಿ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡುಗಳನ್ನು ಹಾಡಿದರು.
ಇದನ್ನೂ ಓದಿ:‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ
ಜಾನಪದ ಕಲಾವಿದ ಗುರುಚರಣ್ ಅವರ ನೇತೃತ್ವದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕ್ಲಿಪರ್ಡ್ ಲೋಬೋ, ಉಪತಹಶೀಲ್ದಾರ್ ರಾದ ರವಿಶಂಕರ್, ಚಂದ್ರಹಾಸ ಭಂಡಾರಿ, ಅಶೋಕ್, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್, ಎಸ್ಸೈ ರಾಘವೇಂದ್ರ ಸಿ., ಕಾಪು ವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಮರಾಠೆ, ಕಾಪು ತಾಲೂಕು ಕನ್ನಡ ಜಾನಪದ ಪರಿಷತ್ ನ ಅಧ್ಯಕ್ಷ ಲೀಲಾಧರ ಶೆಟ್ಟಿ, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಜಿ.ಪಂ. ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕೆಎಂಎಫ್ ವತಿಯಿಂದ ಮಜ್ಜಿಗೆ, ಅರಣ್ಯ ಇಲಾಖೆ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.