Kannada Sahithya Sammelana: ಸುನಿಲ್ ಮಿಶ್ರಾ ಕಲಾಕೃತಿಗಳ ಪ್ರದರ್ಶನ
Team Udayavani, Nov 2, 2023, 12:48 PM IST
ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ಜರಗಲಿರುವ ಕಾಪು ತಾ| 5ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಲಿಲಿತಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ಶಿರ್ವದ ಸುನಿಲ್ ಮಿಶ್ರಾ ಅವರ ಕಲಾಕೃತಿಗಳ ಪ್ರದರ್ಶನ ನಡೆಯಲಿದೆ.
ಕರ್ನಾಟಕ ಲಲಿತಕಲಾ ಅಕಾಡೆಮಿಯ 2021ನೇ ಸಾಲಿನ ಪ್ರಶಸ್ತಿ ಪಡೆದ ಸುನೀಲ್ ಮಿಶ್ರಾ ಅವರ ಕಂಚಿನ ಕಲಾಕೃತಿ ( ಹ್ಯೂಮನ್ ಮಾನ್ಯುಮೆಂಟ್ಸ್ ಫಾರ್ ಸೇಲ್) ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ 2019ನೇ ಸಾಲಿನ ವಾರ್ಷಿಕ ಶಿಲ್ಪಕಲಾ ಪ್ರದರ್ಶನದ ಬಹುಮಾನಕ್ಕೆ ಆಯ್ಕೆಯಾಗಿತ್ತು. 2016ರಲ್ಲಿ ಯುನೆಸ್ಕೋ ವತಿಯಿಂದ ನಡೆದ ಇಂಟರ್‌ನ್ಯಾಷನಲ್ ಆರ್ಟ್‌ವೀಕ್ ಪ್ರದರ್ಶನದಲ್ಲಿ ಭಾಗವಹಿಸಿರುವುದಲ್ಲದೆ ಅವರ ಕಲಾಕೃತಿ ಯುನೆಸ್ಕೋ ಮೂಲಸಂಸ್ಥೆಗೆ ಆಯ್ಕೆಯಾಗಿತ್ತು.
ಉಡುಪಿ ಜಿಲ್ಲೆಯ ಶಿರ್ವದಂತಹ ಗ್ರಾಮೀಣ ಪ್ರದೇಶದಲ್ಲಿ ಅರಳಿದ ಅಪ್ಪಟ ಗ್ರಾಮೀಣ ಪ್ರತಿಭೆ,ಏಕವ್ಯಕ್ತಿ ಕಲಾ ಪ್ರದರ್ಶನ, ರೇಖಾ ಚಿತ್ರ, ಶಿಲ್ಪಕಲೆ,ತೈಲವರ್ಣ,ಕಾಷ್ಠಶಿಲ್ಪ,ಟೆರ್ರಾ ಕೋಟಾ,ಮುಖವಾಡ ತಯಾರಿಕೆ,ಅಕ್ರಿಲಿಕ್ ಮಾಧ್ಯಮ,ಲೋಹ ಶಿಲ್ಪ (ಮಿಶ್ರಲೋಹ) ರಚಿಸುವುದರಲ್ಲಿ ಸಿದ್ಧಹಸ್ತರೆನಿಸಿಕೊಂಡಿದ್ದಾರೆ.
ಬೆಂಗಳೂರು ವಿವಿಪುರಂ ಕೆಪಿಎಸ್ ನೂತನ ವಾಣಿವಿಲಾಸ ಸಂಸ್ಥೆಯಲ್ಲಿ ಕಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಸುನೀಲ್‌ಶಿರ್ವದ ಹಿಂದೂ ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಹಾಗೂ ಶಿರ್ವ ಸಂತ ಮೇರಿ ಶಿಕ್ಷಣ ಸಂಸ್ಥೆಯಲ್ಲಿ ಪ.ಪೂ.ಶಿಕ್ಷಣ ಪಡೆದು,ಉಡುಪಿಯ ಸಿ.ಕೆ.ಎಂ ಕಲಾಶಾಲೆಯಲ್ಲಿ ಕಲಾ ವ್ಯಾಸಂಗ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.