Karkala: ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ- ಬಿಜೆಪಿ ಯುವಮೋರ್ಚಾ
Team Udayavani, Aug 24, 2024, 12:07 PM IST
ಕೋಟ: ಕಾರ್ಕಳ ನಗರ ಠಾಣಾ ವ್ಯಾಪ್ತಿಯ ನಿವಾಸಿ ಹಿಂದೂ ಯುವತಿಯ ಮೇಲೆ 4 ಮಂದಿ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದ್ದು, ಈ ದುಷ್ಕೃತ್ಯದ ಹಿಂದೆ ಲವ್ ಜಿಹಾದ್ ಸಂಚು ಕೂಡ ಅಡಗಿರುವ ಅನುಮಾನವಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಖಂಡನೆ ವ್ಯಕ್ತಪಡಿಸಿದೆ.
ಇಂತಹ ಘಟನೆ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನೇ ಪ್ರಶ್ನಿಸುವ ರೀತಿಯಲ್ಲಿದ್ದು, ಆರೋಪಿಗಳಿಗೆ ಸೂಕ್ತ ಕಠಿಣ ಶಿಕ್ಷೆ ನೀಡುವುದರೊಂದಿಗೆ 4 ಮಂದಿ ಆರೋಪಿಗಳಿಗೆ ಬೆಂಬಲವಾಗಿ ನಿಂತ ಮತೀಯ ಶಕ್ತಿಗಳಾವು, ವ್ಯವಸ್ಥಿತವಾದ ಲವ್ ಜಿಹಾದ್ ಸಂಚಿಗೆ ಸಹಕರಿಸುತ್ತಿರುವ ವ್ಯವಸ್ಥೆಗಳು ಯಾರು ಎನ್ನುವ ಬಗ್ಗೆ ಸಮಗ್ರ ತನಿಖೆ ಪೊಲೀಸ್ ಇಲಾಖೆಯಿಂದ ನಡೆಯಬೇಕು ಹಾಗೂ ಕಾಂಗ್ರೆಸ್ ಆಡಳಿತದಲ್ಲಿರುವ ಸಂದರ್ಭದಲ್ಲೇ ಇಂತಹ ಘಟನೆಗಳು ಮತ್ತೆ – ಮತ್ತೆ ನಡೆಯುತ್ತಿರುವುದಕ್ಕೆ ಆಡಳಿತ ವ್ಯವಸ್ಥೆಯ ಕೋಮು ಓಲೈಕೆ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.
ಒಟ್ಟಾರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಲವ್ ಜಿಹಾದ್ ಹಾಗೂ ಡ್ರಾಗ್ಸ್ ಜಾಲವನ್ನು ಮಟ್ಟ ಹಾಕದಿದ್ದರೆ ಯುವಮೋರ್ಚಾ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.