Karkala: ಸದ್ಭಾವನ ನಗರ- ಕಲ್ಲೊಟ್ಟೆ ರಸ್ತೆ ದುಃಸ್ಥಿತಿ
ಒಂದು ಕಿ. ಮೀ. ವ್ಯಾಪ್ತಿಯ ರಸ್ತೆ ಪೂರ್ತಿ ಹೊಂಡಗುಂಡಿ| ಇಕ್ಕೆಲಗಳಲ್ಲಿ ತ್ಯಾಜ್ಯ ರಾಶಿ
Team Udayavani, Jan 15, 2025, 2:24 PM IST
ಕಾರ್ಕಳ: ಪುರಸಭೆ ವ್ಯಾಪ್ತಿ ಪ್ರಮುಖ ರಸ್ತೆಗಳಲ್ಲಿ ಒಂದಾದ ಸದ್ಭಾವನ ನಗರ-ಕಲ್ಲೊಟ್ಟೆ ರಸ್ತೆ ದುಃಸ್ಥಿತಿಯಲ್ಲಿದ್ದು, ನೂರಾರು ಮನೆಗಳ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಂಚರಿಸಲು ಜನ ಸಾಮಾನ್ಯರು ಕಿರಿಕಿರಿ ಅನುಭವಿಸುವಂತಾಗಿದೆ.
ಒಂದು ಕಿ. ಮೀ. ವ್ಯಾಪ್ತಿಯ ರಸ್ತೆ ಸಂಪೂರ್ಣ ಹದಗೆಟ್ಟು ಹೊಂಡ ಗುಂಡಿಗಳಿಂದ ಕೂಡಿದೆ. ಮಳೆಗಾಲದಲ್ಲಿ ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಹಲವು ಮಂದಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಪ್ರಸ್ತುತ ಬೇಸಗೆಯಲ್ಲಿಯೂ ಜನರಿಗೆ ನಾನ ರೀತಿಯ ತೊಂದರೆಗಳು ಎದುರಾಗುತ್ತಿದೆ. ರಸ್ತೆಯಲ್ಲಿ ಡಾಮರಿಗಿಂತ ಜಾಸ್ತಿ ಗುಂಡಿಗಳೇ ಹೆಚ್ಚಿದ್ದು, ಕೊಂಚ ಎಚ್ಚರ ತಪ್ಪಿದರೂ ದ್ವಿಚಕ್ರ ವಾಹನ ಸವಾರರು ಬಿದ್ದು ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಈ ರಸ್ತೆಯಲ್ಲಿ ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಸಾಕಷ್ಟು ಮಂದಿ ಸಂಚರಿಸುತ್ತಾರೆ. ಹಲವಾರು ವರ್ಷಗಳಿಂದ ರಸ್ತೆ ಅಭಿವೃದ್ಧಿಯಾಗದೇ ನಿತ್ಯ ಓಡಾಡುವ ಜನರಿಗೆ ಸಮಸ್ಯೆಯಾಗಿದೆ. ರಸ್ತೆ ಅಭಿವೃದ್ಧಿಗೆ ಪುರಸಭೆ ಶೀಘ್ರ ಮುಂದಾಗುವಂತೆ ನಾಗರಿಕರು ಬೇಡಿಕೆ ಇಟ್ಟಿದ್ದಾತೆ.
ಎರಡು ಬದಿ ತ್ಯಾಜ್ಯ ರಾಶಿ
ರಸ್ತೆಯ ಎರಡು ಬದಿ ತ್ಯಾಜ್ಯವನ್ನು ಎಸೆದ ಪರಿಣಾಮ ಕೊಳಚೆಗೇರಿ ವಾತಾವರಣ ನಿರ್ಮಾಣ ವಾಗಿದೆ. ತ್ಯಾಜ್ಯದಿಂದ ದುರ್ವಾಸನೆ ಹರಡುತ್ತಿದ್ದು, ಸುತ್ತಮುತ್ತಲಿನವರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ತ್ಯಾಜ್ಯ ರಾಶಿಯಲ್ಲಿ ಹಸಿಕಸ, ಒಣ ಕಸ ಸಹಿತ 2 ಮಾದರಿಯ ತ್ಯಾಜ್ಯವನ್ನು ಎಸೆಯಲಾಗಿದೆ. ರಾತ್ರಿವೇಳೆ ಅಪರಚಿತರು ಬೈಕ್‌ಗಳಲ್ಲಿ ಬಂದು ತ್ಯಾಜ್ಯ ಎಸೆದು ಹೋಗುತ್ತಿದ್ದಾರೆ ಪುರಸಭೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಐನಾಪೂರ: ಶ್ರೀ ಕೆರಿಸಿದ್ದೇಶ್ವರ ದೇವರ ಭೇಟಿ -ಭಂಡಾರಮಯ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Udupi: ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.