![6](https://www.udayavani.com/wp-content/uploads/2025/02/6-21-415x249.jpg)
![6](https://www.udayavani.com/wp-content/uploads/2025/02/6-21-415x249.jpg)
Team Udayavani, Jan 29, 2025, 11:36 AM IST
ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾರ್ಥವಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಫೆ. 4 ರಂದು ನವಚಂಡೀಯಾಗ ನಡೆಯಲಿದೆ ಎಂದು ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ಹೇಳಿದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅವರ ಉಪಸ್ಥಿತಿಯಲ್ಲಿ ನವಚಂಡೀಯಾಗ ಪೂರ್ವಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಫೆ. 3ರಂದು ಬೆಳಿಗ್ಗೆ 9 ಗಂಟೆಗೆ ಸಾಮೂಹಿಕ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಾತೃಕಾ ಪೂಜನಂ, ನಾಂದಿ ಸಮಾರಾಧನಂ, ಅರಳಿ ಪೂಜನಂ, ವೇದ ಪಾರಾಯಣಂ, ಅರಣೀ ಮತನಂ, ಅಗ್ನಿ ಸಂರಕ್ಷಣಂ, ನಿರ್ವಿಘ್ನಾಂಗ ಆಧ್ಯಗಣಯಾಗ, ಪ್ರಸಾದ ವಿತರಣೆ, ಸಂಜೆ 5.30ಕ್ಕೆ ನವಚಂಡಿಪಾರಾಯಣಂ, ಕುಂಡ ಸಂಸ್ಕಾರ, ಅಗ್ನಿ ಜನನಂ, ವಾಗ್ದೇವತಾ ಪೂಜೆ, ಅಷ್ಟಾವಧಾನಂ ನಡೆಯಲಿದೆ ಎಂದರು.
ಫೆ. 4ರಂದು ಬೆಳಿಗ್ಗೆ 6.30ಕ್ಕೆ ನವಚಂಡೀಯಾಗ ಆರಂಭ, ಕಲ್ಪೋಕ್ತ ಪೂಜಾ, ಮಹಾಮಂಗಳಾರತಿ, 11 ಗಂಟೆಗೆ ಪೂರ್ಣಾಹುತಿ, ಮಹಾಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಲಿದೆ.
ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆ ವಹಿಸಲಿದ್ದು, ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಡಾ. ರಾಮಲಿಂಗ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಡಾ. ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತ ವೆಂಕಟೇಶ್ ಐಎಎಸ್ ಭಾಗವಹಿಸಲಿದ್ದಾರೆ ಎಂದರು.
ನವದುರ್ಗಾ ಲೇಖನ ಯಜ್ಞದಲ್ಲಿ ಪಾಲ್ಗೊಳ್ಳುವ ಉದ್ದೇಶದೊಂದಿಗೆ ಈಗಾಗಲೇ ಪುಸ್ತಕ ತೆಗೆದುಕೊಂಡು ಹೋಗಿ ಲೇಖನ ಬರೆಯುತ್ತಿರುವವರು ಫೆ.3ರ ಒಳಗಾಗಿ ಶಿಲಾ ಸೇವೆ ಸಹಿತವಾಗಿ ತಾವು ಬರೆದ ಪುಸ್ತಕವನ್ನು ದೇವಸ್ಥಾನಕ್ಕೆ ಸಮರ್ಪಿಸಿ ಫೆ. 4ರಂದು ನಡೆಯುವ ನವ ಚಂಡಿಯಾಗದ ಸಂಕಲ್ಪದಲ್ಲಿ ಭಾಗವಹಿಸಬೇಕು. ಲೇಖನ ಬರೆಯಲು ಇಚ್ಚಿಸುವ ಭಕ್ತರು ಆದಷ್ಟು ಶೀಘ್ರದಲ್ಲಿ ಲೇಖನ ಪುಸ್ತಕವನ್ನು ಪಡೆದು ಲೇಖನ ಬರೆದು ಶಿಲಾ ಸೇವೆ ಸಹಿತವಾಗಿ ಕಾಪುವಿನ ಅಮ್ಮನಿಗೆ ಸಮರ್ಪಿಸಲು ಅವಕಾಶವಿದೆ. ಆ ಪ್ರಯುಕ್ತ 9 ಮತ್ತು ಅದಕ್ಕಿಂತ ಹೆಚ್ಚಿನ ಶಿಲಾಸೇವೆ ನೀಡುವ ಭಕ್ತರಿಗೆ ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಗೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದರು.
ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ಸಂಚಾಲಕ ಸುವರ್ಧನ ನಾಯಕ್, ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ. ಸುವರ್ಣ, ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕರ ಕರಣ್ ಜೋಹರ್
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Editorial: ಬೇಸಗೆ ಸಮೀಪಿಸುತ್ತಿದೆ ಜಲಮೂಲಗಳತ್ತ ಇರಲಿ ಚಿತ್ತ
Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ
Mr. Rani Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?
You seem to have an Ad Blocker on.
To continue reading, please turn it off or whitelist Udayavani.