Kaup: ರಿಕ್ಷಾ ಚಾಲಕ ನೇಣಿಗೆ ಶರಣು
Team Udayavani, Jan 2, 2025, 10:45 PM IST
ಕಾಪು: ಉಡುಪಿ ಕಲ್ಸಂಕ ಆಟೋ ರಿಕ್ಷಾ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಪಳ್ಳಿಗುಡ್ಡೆ ಕೋಟೆ ನಿವಾಸಿ ದೀಪಕ್ ಆರ್. (34) ಜ. 1ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವಿವಾಹಿತ ದೀಪಕ್ ಆರ್. ಮದ್ಯ ಸೇವನೆ ಚಟವನ್ನು ಹೊಂದಿದ್ದು, ಜ. 1ರಂದು ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ರೂಂನಲ್ಲಿ ಮಲಗಿದ್ದರು. ಸಂಜೆ ತಾಯಿ ರೂಂಗೆ ಹೋಗಿ ನೋಡಿದಾಗ ಒಳಗಿನಿಂದ ಬಾಗಿಲನ್ನು ಲಾಕ್ ಮಾಡಲಾಗಿತ್ತು.
ಬಳಿಕ ನೆರೆಕರೆಯವರು ಸೇರಿ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ದೀಪಕ್ ರೂಂನ ಟಾರಸಿಯ ಕಬ್ಬಿಣದ ಹುಕ್ಕಿಗೆ ಬಟ್ಟೆ ತುಂಡನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ
Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.