Kaup ಶ್ರೀ ಹೊಸ ಮಾರಿಗುಡಿ;ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನೆ,ಲೇಖನ ಸಂಕಲ್ಪಕ್ಕೆ ಚಾಲನೆ
Team Udayavani, Sep 3, 2024, 12:40 PM IST
ಕಾಪು: ನವದುರ್ಗಾ ಐಕ್ಯ ಸ್ವರೂಪಿಣಿಯಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಶ್ರೀ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ನಡೆಯುತ್ತಿರುವ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಸೆ.3ರ ಮಂಗಳವಾರ ಚಾಲನೆ ನೀಡಲಾಯಿತು.
ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿಗಳ ಉಪಸ್ಥಿತಿಯಲ್ಲಿ ಮಂಗಳ ಗೌರಿ ಪೂಜೆಯೊಂದಿಗೆ ನವದುರ್ಗಾ ಲೇಖನ ಸಂಕಲ್ಪ ಸ್ವೀಕರಿಸಿದರು.
ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್., ರತಿ ಶೆಟ್ಟಿ ಉಡುಪಿ, ಕಲ್ಪನಾ ಭಾಸ್ಕರ್, ವಿದ್ಯಾ ಎಸ್. ಶೆಟ್ಟಿ, ಸುಕಲತಾ ಸುಧಾಕರ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ ಬ್ರಹ್ಮಾವರ, ನಯನಾ ಗಣೇಶ್, ಸರಳ ಎಸ್. ಹೆಗ್ಡೆ ನವದುರ್ಗಾ ಲೇಖನ ಸಂಕಲ್ಪದ ದೀಪ ಪ್ರಜ್ವಲನೆಗೈದರು.
ಅವದೂತ ವಿನಯ್ ಗುರೂಜಿ ಗೌರಿಗದ್ದೆ ಅವರು ಮಾಜಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆಯ ನವ ದುರ್ಗಾ ಲೇಖನ ಯಜ್ಞ ಸಮಿತಿಯನ್ನು ಉದ್ಘಾಟಿಸಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ರವಿ ಸುಂದರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸಮಿತಿ ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶ್ಯಾಮಿಲಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ನಾಡೋಜ ಡಾ. ಜಿ. ಶಂಕರ್, ಮೂಡಬಿದ್ರಿ ಆಳ್ವಾಸ್ ಫೌಂಡೇಶನ್ ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಆಂಧ್ರಪ್ರದೇಶದ ಕಲ್ಯಾಣ ದುರ್ಗಾ ಶಾಸಕ ಅಮಿಲಿನೆನಿ ಸುರೇಂದ್ರ ಬಾಬು, ಶಾಸಕರಾದ ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್., ಮಹೇಶ್ ವಿಕ್ರಮ್ ಹೆಗ್ಡೆ, ಎರ್ಮಾಳು ಚಂದ್ರಹಾಸ ಶೆಟ್ಟಿ ಪೂನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ / ಕಾರ್ಯ ನಿರ್ವಹಣಾಧಿಕಾರಿ ರವಿ ಕಿರಣ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನೆ : ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ಕಾರ್ಯಾಧ್ಯಕ್ಷರಾದ ಕೃಷ್ಣಪ್ರಸಾದ್ ಅಡ್ಯಂತಾಯ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಡಾ. ವಿದ್ಯಾ ಶಂಕರ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ಕೋಶಾಧಿಕಾರಿ ಕೆ. ವಿಶ್ವನಾಥ್ ನೇತೃತ್ವದ ತಂಡವನ್ನು ಘೋಷಿಸಿ, ಉದ್ಘಾಟಿಸಲಾಯಿತು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ದಾಮೋದರ ಶರ್ಮಾ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.