Kaup:ಜೂ.29,30:ಪ್ರಥಮ ಬಾರಿಗೆ ರಾಷ್ಟ್ರಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ


Team Udayavani, Jun 18, 2024, 3:31 PM IST

14-Kaup

ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇವರ ವತಿಯಿಂದ ಜೂ. 29 ಮತ್ತು 30 ರಂದು ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ಕಾಪುವಿನ ಪ್ರಪ್ರಥಮ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ ಸಾಕಾ ತ್ ಯು.ಕೆ. ತಿಳಿಸಿದರು.

ಮಂಗಳವಾರ ಕಾಪು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, ಆಂಧಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ನವದೆಹಲಿ, ಪಶ್ಚಿಮ ಬಂಗಾಳ ಸಹಿತ ವಿವಿಧ ರಾಜ್ಯಗಳ 300ಕ್ಕೂ ಅಧಿಕ ಮಂದಿ ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧಾಳುಗಳು ಮತ್ತು ಅವರೊಂದಿಗೆ ಬರುವ ಪೋಷಕರಿಗೆ 2 ದಿನದ ಉಚಿತ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.

ವಿಜೇತರಿಗೆ 2 ಲಕ್ಷ ರೂ. ಬಹುಮಾನ, 187 ಟ್ರೋಫಿ: ಎಫಿಲೆನ್ಸ್ ಟೆಕ್ನಾಲಜೀಸ್ ಮಾರ್ಕೆಟಿಂಘ್ ಕಂಪನಿ ಮಂಗಳೂರು, ಯುಡಿಸಿಎ ಉಡುಪಿ, ಕೆಎಸ್‌ಸಿಎ, ಎಐಸಿಎಸ್ ಫಿಡೆಗಳ ಸಹಕಾರದೊಂದಿಗೆ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಎರಡು ಲಕ್ಷ ರೂ. ವರೆಗೆ ನಗದು ಬಹುಮಾನ ನೀಡಲಾಗುವುದು.

6,8,10,12,14,16, ವರ್ಷ ಪ್ರಾಯದ ಹುಡುಗರು ಮತ್ತು ಹುಡುಗಿಯರಿಗಾಗಿ ನಡೆಯುವ ಸ್ಪರ್ಧೆಯಲ್ಲಿ ಪ್ರತೀ ವಿಭಾಗದಲ್ಲಿ ತಲಾ 10 ರಂತೆ 120 ಟ್ರೋಫಿ, ಓಪನ್‌ನಲ್ಲಿ 20, ಇತರ ವಿಭಾಗದಲ್ಲಿ 47 ಟ್ರೋಫಿ ಸಹಿತ 187 ಟ್ರೋಫಿ ವಿತರಿಸಲಾಗುವುದು ಎಂದರು.

ಜೂ. 29 ರಂದು ಬೆಳಿಗ್ಗೆ 8.45ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಂದ್ಯಾಟವನ್ನು ಉದ್ಘಾಟಿಸಲಿದ್ದ ಎಫಿಲೆನ್ಸ್ ಟೆಕ್ನಾಲಜೀಸ್ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿ ಮಂಗಳೂರು ಇದರ ಸ್ಥಾಪಕ ಅವಿನಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಹಶೀಲ್ದಾರ್ ಡಾ| ಪ್ರತಿಭಾ ಆರ್., ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜೂ. 30 ರಂದು ಸಂಜೆ 4.45ಕ್ಕೆ ಸಮರೋಪ ಸಮಾರಂಭ ನಡೆಯಲಿದೆ.

ಕಾಪುವಿನ ಪ್ರಥಮ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆ : ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಸಂಸ್ಥೆಯು ಕಳೆದ 16 ವರ್ಷಗಳಿಂದ ಕಾಪುವಿನಲ್ಲಿ ವರ್ಷಂಪ್ರತಿ ಅಂತರ್ ಜಿಲ್ಲೆ ಮತ್ತು ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸಿಕೊಂಡು ಬಂದಿದ್ದು ಈವರೆಗೆ ಸುಮಾರು 2,500ಕ್ಕೂ ಮಿಕ್ಕ ಚೆಸ್ ಪಟುಗಳು ಬಹುಮಾನ ಗಳಿಸಿದ್ದಾರೆ. ಈ ಬಾರಿ ಪ್ರಥಮ ಬಾರಿಗೆ ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ರಾಷ್ಟ್ರ ಮಟ್ಟದ ಆಟಗಾರರನ್ನು ಕಾಪುವಿಗೆ ಪರಿಚಯಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಕಾಪು ಆಸುಪಾಸಿನ ಮಕ್ಕಳಿಗೆ ಅನುಕೂಲವಾಗುವಂತೆ ಪ್ರತೀ ಬುಧವಾರ ಸಂಜೆ 6 ಗಂಟೆಗೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಚೆಸ್ ತರಬೇತಿ ತರಗತಿಯನ್ನು ನಡೆಸುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದಾಗಿದೆ ಎಂದರು.

ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇದರ ಅಧ್ಯಕ್ಷ ಉಮಾನಾಥ್ ಕಾಪು, ನಿರ್ದೇಶಕಿ ಸೌಂದರ್ಯ ಯು.ಕೆ., ಮುಖ್ಯ ಸಲಹೆಗಾರ ಲಕ್ಷ್ಮೀನಾರಾಯಣ ಆಚಾರ್ಯ ಉಡುಪಿ, ಸಲಹೆಗಾರ ನಾಗೇಶ್ ಕಾರಂತ್ ಕಾಪು, ಪಾಂಗಾಳ ಆಸರೆ ಸಂಸ್ಥೆಯ ಸ್ಥಾಪಕ ಪೆನ್ವೆಲ್ ಸೋನ್ , ಲೋಕೇಶ್ ಕೊಡ್ಮಾಣ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MGM–Udupi-1

Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.