![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 26, 2020, 12:27 PM IST
ಉಡುಪಿ: ಹಿರಿಯಡ್ಕ ಪೇಟೆಯಲ್ಲಿ ಗುರುವಾರ ಮಧ್ಯಾಹ್ನ ನಡೆದ ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರೊಂದಿಗೆ ಕಿಶನ್ ಹೆಗ್ಡೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಲು ಕಾರಿನಿಂದ ಇಳಿಯುವ ವೇಳೆ ಗುರುವಾರ ಕೊಲೆ ನಡೆದಿತ್ತು.
ಸುತ್ತಿಗೆ, ಮಾರಕಾಯುಧಗಳನ್ನು ಹಿಡಿದುಕೊಂಡು ಕಾರಿನ ಮುಂಭಾಗದಿಂದ ಆಗಮಿಸಿದ 4-5 ಮಂದಿಯ ತಂಡ ಏಕಾಏಕಿಯಾಗಿ ಕಾರಿನ ಗಾಜಿಗೆ ಸುತ್ತಿಗೆಯಿಂದ ಹೊಡೆದು ಜಖಂ ಗೊಳಿಸಿತ್ತು. ಅನಂತರ ಕಿಶನ್ ಹೆಗ್ಡೆ ಮೇಲೆ ಮನೋಜ್ ತಲವಾರಿನಿಂದ ಕಡಿದು ಗಾಯಗೊಳಿಸಿದ್ದ. ತಪ್ಪಿಸಿಕೊಳ್ಳಲು ಯತ್ನಿಸಿದ ಕಿಶನ್‌ನನ್ನು ಹಿಂಬಾಲಿಸಿದ ತಂಡ ತಲೆಗೆ ಬಲವಾಗಿ ಹೊಡೆದು ಕೊಲೆ ನಡೆಸಿದೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದರ ಪೈಕಿ ಹರಿಪ್ರಸಾದ್ ಶೆಟ್ಟಿಯವರ ತಲೆಗೂ ಏಟು ಬಿದ್ದಿದೆ.
ಇದನ್ನೂ ಓದಿ: ಹಿರಿಯಡ್ಕದಲ್ಲಿ ಕಿಶನ್ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್ ಕೋಡಿಕೆರೆ ಮನೋಜ್ ತಂಡದ ಕೃತ್ಯ
ಕೋಡಿಕೆರೆ ತಂಡದ ಕೃತ್ಯ ರೌಡಿಶೀಟರ್‌ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ಅವರ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಕೊಲೆಯ ಬಳಿಕ ಆರೋಪಿಗಳು ರಿಡ್ಜ್ ಹಾಗೂ ಇನೋವಾ ಕಾರಿನಲ್ಲಿ ತೆರಳಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿಯ ಬ್ರಹ್ಮಲಿಂಗೇಶ್ವರ ಮೇಲಂಟೆ ದೇವಸ್ಥಾನದ ಬಳಿ ಪತ್ತೆ ಯಾಗಿತ್ತು. ಇನೋವಾ ಕಾರು ಶುಕ್ರವಾರ ಕಾರ್ಕಳ ಸಮೀಪದ ಇರ್ವತ್ತೂರುವಿನಲ್ಲಿ ಪತ್ತೆಯಾಗಿತ್ತು.
You seem to have an Ad Blocker on.
To continue reading, please turn it off or whitelist Udayavani.