ಉಡುಪಿ: 25 ಅಂತಸ್ತಿನ ಕಟ್ಟಡವನ್ನು ಸರಸರನೆ ಏರಿದ ಕೋತಿರಾಜ್
Team Udayavani, Mar 2, 2023, 7:18 PM IST
ಉಡುಪಿ: ಆರೋಗ್ಯ ನಿಧಿಗೆ ಧನ ಸಂಗ್ರಹ ಮಾಡುವ ಉದ್ದೇಶದಿಂದ ಅಡ್ವೆಂಚರ್ ಮಂಕಿ ಕ್ಲಬ್‌ನ ಚಿತ್ರದುರ್ಗದ ಜ್ಯೋತಿರಾಜ್ ಯಾನೆ ಕೋತಿರಾಜ್ ಅವರು ಗುರುವಾರ ಬ್ರಹ್ಮಗಿರಿಯಲ್ಲಿರುವ 250 ಅಡಿ ಎತ್ತರದ 25 ಅಂತಸ್ತಿನ ಕಟ್ಟಡಕ್ಕೆ ಸರಸರನೆ ಏರುವ ಮೂಲಕ ಉಡುಪಿಯ ನಾಗರಿಕರನ್ನು ರಂಜಿಸಿದರು.
ಬೆಳಗ್ಗೆ 10.20ಕ್ಕೆ ಹತ್ತಲು ಆರಂಭಿಸಿದ ಅವರು 10.40ರ ವೇಳೆಗಾಗಲೇ ಕೊನೆಯ ಮಹಡಿಯನ್ನು ತಲುಪಿ ಕನ್ನಡ ಬಾವುಟ ಹಾರಿಸಿ ಸಂಭ್ರಮಿಸಿದರು. ಕಟ್ಟಡದಿಂದ ಕೆಳಗಿಳಿದು ಬಂದ ಬಳಿಕ ಅವರನ್ನು ಪೊಲೀಸ್ ಇಲಾಖೆ, ಅಗ್ನಿಶಾಮಕ ಹಾಗೂ ಮೆಸ್ಕಾಂ ಅಧಿಕಾರಿಗಳು ಅಭಿನಂದಿಸಿದರು. ನೆರೆದಿದ್ದ ನಾಗರಿಕರು ಕರತಾಡನದ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಕ್ಲೈಮ್ಮಿಂಗ್ ಫೌಂಡೇಶನ್ ಸ್ಥಾಪಿಸುವ ಉದ್ದೇಶ ಹೊಂದಿರುವ ಕೋತಿರಾಜ್ ಅದಕ್ಕಾಗಿ ನಾಡಿನೆಲ್ಲೆಡೆ ತಿರುಗಿ ಸಾಹಸ ಮಾಡುವ ಉದ್ದೇಶ ಹೊಂದಿದ್ದಾರೆ. ವಿದೇಶದಲ್ಲಿಯೂ ಇದೇ ರೀತಿ ಸಾಹಸ ಮಾಡಿ ರಾಷ್ಟ್ರಧ್ವಜ ಹಾರಿಸುವ ಉದ್ದೇಶ ಹೊಂದಿದ್ದಾರೆ. ಅಮೆರಿಕದ ಏಂಜಲ್ ಫಾಲ್ಸ್ ಹತ್ತುವ ನಿರೀಕ್ಷೆ ಹೊಂದಿದ್ದಾರೆ. ಹಾಲಿವುಡ್‌ನಲ್ಲಿ ನಾನು ನಾಯಕನಾಗಿ ನಟಿಸಿದ “ಇನ್‌ಕ್ರೆಡಿಬಲ್ ಮಂಕಿ’ ಸಿನೆಮಾದ ಚಿತ್ರೀಕರಣ ಶೇ.80 ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ ಎನ್ನುತ್ತಾರೆ ಕೋತಿರಾಜ್.
ಇದನ್ನೂ ಓದಿ: ಮಣಿಪಾಲ: 4 ಲಕ್ಷ ರೂ.ಮೌಲ್ಯದ ಸ್ವತ್ತುಗಳ ಸಹಿತ ಇಬ್ಬರು ಕಳ್ಳರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.