ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಕುಂದಾಪುರದ ವ್ಯಕ್ತಿ ಹೃದಯಾಘಾತದಿಂದ ಸಾವು
ಕೋವಿಡ್ ಶಂಕೆ: ವೈದ್ಯಕೀಯ ವರದಿ ನಿರೀಕ್ಷೆಯಲ್ಲಿ ಆರೋಗ್ಯ ಇಲಾಖೆ
Team Udayavani, May 16, 2020, 1:29 PM IST
ಉಡುಪಿ: ಮಹಾರಾಷ್ಟ್ರದಿಂದ ಮೇ 5ರ ಬಳಿಕ ಹುಟ್ಟುರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ವ್ಯಕ್ತಿಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಕೋವಿಡ್-19 ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಆರೊಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಿಂದ 3 ಸಾವಿರಕ್ಕೂ ಅಧಿಕ ಮಂದಿ
ಕೋವಿಡ್-19 ಹಾಟ್‌ಸ್ಪಾಟ್ ಆಗಿರುವ ಮಹಾರಾಷ್ಟ್ರದಿಂದಲೇ 3031 ಮಂದಿ ಜಿಲ್ಲೆಗೆ ಆಗಮಿಸಿರುವುದು ಆತಂತಕ್ಕೆ ಕಾರಣವಾಗಿದೆ. ಉಳಿದಂತೆ ತೆಲಂಗಾಣದಿಂದ 369, ತಮಿಳುನಾಡಿನಿಂದ 55, ಕೇರಳದಿಂದ 46, ಗೋವಾದಿಂದ 32, ಆಂಧ್ರಪ್ರದೇಶದಿಂದ 31, ಗುಜರಾತ್‌ನಿಂದ 22 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ.
ಜಿಲ್ಲೆಗೆ ಮುಂಬಯಿ ಆತಂಕ
ತಿಂಗಳಿಗೂ ಅಧಿಕ ಕಾಲ ಹಸಿರು ವಲಯದಲ್ಲಿದ್ದ ಉಡುಪಿ ಜಿಲ್ಲೆಗೆ 47 ದಿನಗಳ ಬಳಿಕ ದುಬೈ ಪ್ರಯಾಣಿಕರಿಂದ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ವಿದೇಶದಿಂದ ಆಗಮಿಸಿದ ಜಿಲ್ಲೆಯ 49 ಮಂದಿಯಲ್ಲಿ 6 ಜನರಿಗೆ ಶುಕ್ರವಾರ ಸೋಂಕು ಕಂಡುಬಂದಿತ್ತು. ಈಗ ಮಹಾರಾಷ್ಟ್ರದಿಂದ ಆಗಮಿಸಿದವರ ಬಗ್ಗೆ ನಿಗಾ ಇರಿಸಲಾಗುತ್ತಿದೆ. ಲಾಕ್ ಡೌನ್‌ನಿಂದಾಗಿ ತೆಲಂಗಾಣ, ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಒರಿಸ್ಸಾ, ಗೋವಾ, ಪಶ್ಚಿಮ ಬಂಗಾಳ, ರಾಜಸ್ತಾನ, ಹೊಸದಿಲ್ಲಿ ಸಹಿತ ಹಲವು ರಾಜ್ಯಗಳಲ್ಲಿ ಸಿಕ್ಕಿಹಾಕಿಕೊಂಡವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇವರನ್ನೆಲ್ಲ ಜಿಲ್ಲಾಡಳಿತವು ಸ್ಥಳೀಯ ತಾಲೂಕು ಆಡಳಿತದ ಮೂಲಕ ಗುರುತಿಸಲ್ಪಟ್ಟ ಹಾಸ್ಟೆಲ್‌ಗಳಲ್ಲಿ ಮತ್ತು ಹೊಟೇಲ್ ಲಾಡ್ಜ್ ಗಳಲ್ಲಿ ಕ್ವಾರಂಟೈನ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.