Shirva ಕಲ್ಲೊಟ್ಟು ಸೊರ್ಪು ಪರಿಸರದಲ್ಲಿ ಚಿರತೆ ಹಾವಳಿ
Team Udayavani, Nov 19, 2023, 10:56 AM IST
ಶಿರ್ವ: ಇಲ್ಲಿನ ಗ್ರಾ. ಪಂ.ವ್ಯಾಪ್ತಿಯ ಕಲ್ಲೊಟ್ಟು, ಸೊರ್ಪು,ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್ ಅವರ ಮನೆ ಬಳಿಯ ಕಲ್ಲೊಟ್ಟು ದೇವಣ್ಣ ನಾಯಕ್ ಅವರ ಮನೆಯ ಸಾಕು ನಾಯಿಯನ್ನು ಕಳೆದ ರಾತ್ರಿ ಚಿರತೆ ಬೇಟೆಯಾಡಿದ್ದು, ನಾಯಿಯನ್ನು ಅರ್ಧ ತಿಂದು ಹಾಕಿ ಉಳಿದರ್ಧ ದೇಹವನ್ನು ಮಲ್ಲಿಗೆ ಗಿಡದ ತೋಟದ ಬಳಿ ಬಿಟ್ಟು ಹೋಗಿದೆ.
ಕಳೆದ ವರ್ಷ ಚಿರತೆಯೊಂದು ಪದವು ಮುಟ್ಲುಪಾಡಿ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರೆಂದು ನಂಬಲಾದ ವೀಡಿಯೋವೊಂದು ವೈರಲ್ ಆಗಿತ್ತು. ಆ ಸಮಯ ಅರಣ್ಯ ಇಲಾಖೆಯವರು ಅಗೋಳಿಬೈಲು ಸಮೀಪ ದರ್ಕಾಸು ಬಳಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು. ಆದರೆ ಚಿರತೆ ಬೋನಿಗೆ ಬಿದ್ದಿರಲಿಲ್ಲ.
ಈ ರಸ್ತೆಯಲ್ಲಿ ಪ್ರತೀದಿನ ಶಿರ್ವದ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಪರಿಸರದ ನಾಗರಿಕರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.