ರಾಜ್ಯಾಧ್ಯಕ್ಷರ ಕನಸು ಸಾಕಾರಕ್ಕೆ ಪ್ರಯತ್ನಿಸೋಣ: ಸೊರಕೆ


Team Udayavani, Jun 5, 2020, 5:26 AM IST

ರಾಜ್ಯಾಧ್ಯಕ್ಷರ ಕನಸು ಸಾಕಾರಕ್ಕೆ ಪ್ರಯತ್ನಿಸೋಣ: ಸೊರಕೆ

ಕಾಪು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ. ಶಿವಕುಮಾರ್‌ ಅವರ ಪದಗ್ರಹಣ ಕಾರ್ಯಕ್ರಮವು ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರೊಂದಿಗೆ ಏಕಕಾಲದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವುದರೊಂದಿಗೆ ವಿಶಿಷ್ಟ ರೀತಿಯಲ್ಲಿ ನಡೆಯಲಿಕ್ಕಿದ್ದು ಈ ಕಾರ್ಯಕ್ರಮವನ್ನು ಪ್ರತೀ ಗ್ರಾಮದಲ್ಲೂ ಯಶಸ್ವಿಯಾಗಿ ಆಯೋಜಿಸಬೇಕೆಂದು ಕಾರ್ಯಕರ್ತರಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮನವಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ ಕಾರ್ಯಕ್ರಮದ ಪೂರ್ವ ಭಾವಿಯಾಗಿ ಕಾಪು ರಾಜೀವ್‌ ಭವನದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಈ ವಿಶಿಷ್ಟ ರೀತಿಯ ಪ್ರತಿಜ್ಞಾ ವಿಧಿ ಕಾರ್ಯಕ್ರಮವು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಲಿದ್ದು ಎಲ್ಲ ಗ್ರಾಮ ಪಂಚಾಯತ್‌, ಪುರಸಭೆ ಮತ್ತು ಬ್ಲಾಕ್‌ ಮತ್ತು ಜಿಲ್ಲಾಮಟ್ಟದ ಎಲ್ಲ ಕಾರ್ಯಕರ್ತರು ಕೂಡ ಅಧ್ಯಕ್ಷರೊಂದಿಗೆ ಏಕಕಾಲದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗುವುದು. ಈ ಕಾರ್ಯಕ್ರಮವು ಪಕ್ಷಕ್ಕೆ ಪುನಶ್ಚೇತನ ನೀಡುವುದರೊಂದಿಗೆ ಕಾರ್ಯಕರ್ತರಲ್ಲಿ
ಹೊಸ ಸ್ಫೂರ್ತಿಯನ್ನು ನೀಡಲಿದೆ. ಎಲ್ಲ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವಾಗಬೇಕು ಎಂದರು.

ಕಾಪು ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 23,000ಕ್ಕೂ ಹೆಚ್ಚು ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ಜನರಿಗೆ ದಾನಿಗಳ ಸಹಕಾರದಿಂದ ಹಂಚಲಾಗಿದೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರ್‌, ಕೆಪಿಸಿಸಿ ವೀಕ್ಷಕರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಅನಿಲ್‌ ಕುಮಾರ್‌, ಪಕ್ಷದ ಮುಖಂಡರಾದ ಡಾ| ದೇವಿಪ್ರಸಾದ್‌ ಶೆಟ್ಟಿ, ಗೀತಾ ವಾಗ್ಲೆ, ವಿಶ್ವಾಸ್‌ ವಿ. ಅಮೀನ್‌, ಕಾಪು ದಿವಾಕರ ಶೆಟ್ಟಿ, ವಿನಯ ಬಲ್ಲಾಳ್‌, ಪ್ರಭಾ ಬಿ. ಶೆಟ್ಟಿ, ಮೊಹಮ್ಮದ್‌ ಸಾದಿಕ್‌, ದಿನೇಶ್‌ ಕೋಟ್ಯಾನ್‌, ನವೀನ್‌ ಎನ್‌. ಶೆಟ್ಟಿ, ಅಬ್ದುಲ್‌ ರಹಿಮಾನ್‌ ಕನ್ನಂಗಾರ್‌, ಗೋಪಾಲ್‌ ಪೂಜಾರಿ ಪಾಲಿಮಾರ್‌, ಮೊಹಮ್ಮದ್‌ ಫಾರೂಕ್‌, ಸತೀಶ್‌ ದೇಜಾಡಿ ಹಾಗೂ ವಿವಿಧ ಗ್ರಾಮೀಣ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರು, ಗ್ರಾಮ ಪಂಚಾಯತ್‌ ಅಧ್ಯಕ್ಷರು ಮತ್ತು ಸದಸ್ಯರು, ಪುರಸಭೆ, ತಾ.ಪಂ. ಮತ್ತು ಜಿ.ಪಂ. ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ನವೀನಚಂದ್ರ ಸುವರ್ಣ ಪ್ರಸ್ತಾವನೆಗೈದರು. ಬ್ಲಾಕ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಮೀರ್‌ ಮೊಹಮ್ಮದ್‌ ಸ್ವಾಗತಿಸಿದರು. ನಾಗೇಶ್‌ ಎಸ್‌. ಸುವರ್ಣ ವಂದಿಸಿದರು.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.