ನೈಜ ಬೆಳೆ ಹಾನಿಯ ವಿಶೇಷ ಪ್ಯಾಕೇಜ್‌ಗೆ ಸರಕಾರಕ್ಕೆ ಪತ್ರ: ಜಿಲ್ಲಾಧಿಕಾರಿ
ಮಟ್ಟು : ಮಟ್ಟುಗುಳ್ಳ ಬೆಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
Team Udayavani, Sep 23, 2020, 9:37 PM IST
ಕಟಪಾಡಿ: ಎಡೆಬಿಡದೆ ಸುರಿದ ಮಳೆಯಿಂದಾಗಿ ಮಟ್ಟುವಿನಲ್ಲಿ ಹರಿಯುತ್ತಿದ್ದ ಪಿನಾಕಿನಿ ಹೊಳೆಯು ಉಕ್ಕೇರಿ ಹರಿದ ಪರಿಣಾಮ ಮಟ್ಟು ನದಿ ಪಾತ್ರದಲ್ಲಿ ಸುಮಾರು 70 ಬೆಳೆಗಾರರು ಬೆಳೆದ ಜಿ.ಐ. ಮಾನ್ಯತೆ ಪಡೆದಿರುವ ಮಟ್ಟುಗುಳ್ಳದ ಬೆಳೆ ಹಾನಿಗೀಡಾಗಿ ಲಕ್ಷಾಂತರ ರೂ. ನಷ್ಟ ಅನುಭವಿಸು ವಂತಾಗಿತ್ತು.
ಈ ಪ್ರದೇಶಗಳಿಗೆ ಅವರು ಸೆ.23 ರಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ತೋಟಗಾರಿಕಾ ಇಲಾಖಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬೆಳೆಗಾರರ ಸಂಕಷ್ಟ ಆಲಿಸಿ, ಬೆಳೆ ಹಾನಿ ಪರಿಶೀಲನೆಯನ್ನು ನಡೆಸಿದರು. 20 ದಿನಗಳೊಳಗಾಗಿ ಮಟ್ಟುಗುಳ್ಳದ ಫಸಲು ಕೈ ಸೇರಲು ಸಿದ್ಧವಾಗಿರುವ ನಡುವೆಯೇ ಮಟ್ಟುಗುಳ್ಳದ ಬೆಳೆ ಪ್ರವಾಹ ದಿಂದ ಹಾನಿಗೀಡಾಗಿದೆ. ಈಗಾಗಲೇ ಮಲಿcಂಗ್ ಶೀಟ್, ಗೊಬ್ಬರ, ಸಸಿ ಸಹಿತ ಬೆಳೆಗಾರರಿಗೆ ಲಕ್ಷಾಂತರ ರೂ. ನಷ್ಟ ವಾಗಿದೆ. ಆ ನಿಟ್ಟಿನಲ್ಲಿ ಬೆಳೆ ನಷ್ಟಕ್ಕೆ ಹೆಚ್ಚಿನ ಮೊತ್ತದ ಪರಿಹಾರವನ್ನು ಒದಗಿಸುವಂತೆ ಆಗ್ರಹಿಸಿದ್ದರು.
ಈ ಸಂದರ್ಭ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕಿ ಭುವನೇಶ್ವರೀ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹೇಮಂತ್ ಕುಮಾರ್, ಸಹಾಯಕ ಪ್ರಭಾರ ತೋಟಗಾರಿಕಾ ಅಧಿಕಾರಿ ಶ್ವೇತಾ ಹಿರೇಮs…, ಸಿಡಿಪಿಒ ಇಲಾಖೆಯ ವೀಣಾ, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಗ್ರಾಮ ಲೆಕ್ಕಿಗ ಲೋಕನಾಥ ಲಮಾಣಿ, ಮಾಜಿ ಜಿ.ಪಂ. ಸದಸ್ಯೆ ಸರಸು ಡಿ. ಬಂಗೇರ, ಕೋಟೆ ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷ, ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ನಿ.ಪೂ. ಸದಸ್ಯರುಗಳು, ಮಟ್ಟುಗುಳ್ಳ ಬೆಳೆಗಾರರ ಸಂಘದ ನಿರ್ದೇಶಕರುಗಳಾದ ನಾಗರಾಜ ಮಟ್ಟು, ಯಶೋಧರ್, ದೇವೇಂದ್ರ, ಸಂತೋಷ್, ಪ್ರದೀಪ್, ಶರತ್, ಪ್ರಬಂಧಕ ಲಕ್ಷ್ಮಣ್ ಮಟ್ಟು, ಹಾಗೂ ಮಟ್ಟುಗುಳ್ಳ ಬೆಳೆಗಾರರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ನೈಜ ಬೆಳೆ ಹಾನಿ ಸಿದ್ಧಪಡಿಸಿ ಸರಕಾರಕ್ಕೆ ವರದಿ
ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಬೆಳೆ ಸಮೀಕ್ಷೆ ನಡೆಸಿ ಎಷ್ಟು ಬೆಳೆಗಾರರ ಮತ್ತು ಎಷ್ಟು ಬೆಳೆಹಾನಿ ಸಂಭವಿಸಿದೆ ಎಂಬ ಬಗ್ಗೆ ವರದಿ ಸಿದ್ಧಪಡಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ಸರಕಾರದಿಂದ ವಿಶೇಷವಾಗಿ ಪ್ಯಾಕೇಜ್ ಬಂದಲ್ಲಿ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲು ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಎನ್.ಡಿ.ಆರ್.ಎಫ್. ಮಾರ್ಗದರ್ಶನದಡಿ ಮಾತ್ರ ಪರಿಹಾರ ಹಣ ಕೊಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.