ಜು. 8ರಂದು ರಾಷ್ಟ್ರೀಯ ಲೋಕ ಅದಾಲತ್…
Team Udayavani, Jun 4, 2023, 7:30 AM IST
ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜು. 8ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಈ ಮೂಲಕ ತತ್‌ಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ವೈವಾಹಿಕ ಪ್ರಕರಣಗಳು, ಜಿಲ್ಲಾ ಗ್ರಾಹಕ ಪರಿಹಾರ ಆಯೋಗ ದಲ್ಲಿನ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಸಾಲ ವಸೂಲಾತಿ ನ್ಯಾಯಾ ಧೀಕರಣದ ಪ್ರಕರಣ, ಮೋಟಾರು ವಾಹನ ಪ್ರಕರಣ, ನ್ಯಾಯಾ ಧೀಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ತೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರ ಪ್ರಕರಣ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನ್ಯಾಯಾಲಯದಲ್ಲಿ ದಾಖಲಾಗ ದಿರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ 1800-425-90900 ಅಥವಾ ಸಮೀಪದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.