ಚುನಾವಣಾ ಬಹಿಷ್ಕಾರದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಬಹಿಷ್ಕಾರ ಕೈ ಬಿಟ್ಟು ಯೋಗ್ಯ ಅಭ್ಯರ್ಥಿಯನ್ನು ಆಯ್ದುಕೊಳ್ಳಿ
Team Udayavani, Dec 18, 2020, 4:46 PM IST
ಕಾಪು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗ್ರಾಮಸ್ಥರಿಗೇ ತಮಗೆ ಬೇಕಾದ ಯೋಗ್ಯ ಸೇವಕರನ್ನು ನೇರವಾಗಿ ಆಯ್ಕೆ ಮಾಡಲು ಮುಕ್ತ ಅವಕಾಶವಿದೆ. ಹಿಂದಿನವರು ತಮಗೆ ಏನೂ ಕೆಲಸ ಮಾಡಿಲ್ಲವೆಂದಾದರೆ ಯಾರು ಯೋಗ್ಯರು ಕಣದಲ್ಲಿ ಇರುತ್ತಾರೋ ಅವರನ್ನು ಆಯ್ಕೆ ಮಾಡಬಹುದು. ಅದು ಬಿಟ್ಟು ಚುನಾವಣಾ ಬಹಿಷ್ಕಾರದ ಬೆದರಿಕೆಯೊಡ್ಡುವುದು ಸರಿಯಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾಪು ಕ್ಷೇತ್ರ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಬಹಿಷ್ಕಾರದಿಂದ ಯಾರಿಗೂ ಯಾವುದೇ ಲಾಭವಿಲ್ಲ. ಅದರಿಂದ ನಷ್ಟವೇ ಜಾಸ್ತಿಯಾಗುತ್ತದೆ ಎಂದರು.
ಎಲ್ಲೆಲ್ಲಾ ಚುನಾವಣಾ ಬಹಿಷ್ಕಾರದ ಕೂಗು ಕೇಳಿ ಬರುತ್ತಿದೆಯೋ ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಮುಜರಾಯಿ ಇಲಾಖೆಗೆ ಸಂಬಂಧ ಪಟ್ಟ ಯಾವುದೇ ತೊಂದರೆಗಳಿದ್ದರೂ, ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ – ಪಂಗಡಗಳ ಕಾಲೊನಿಗಳ ಅಭಿವೃದ್ಧಿಯಲ್ಲಿ ತಾರತಮ್ಯ ಎಸಗಲು ಸಾಧ್ಯವೇ ಇಲ್ಲ. ಜನಪ್ರತಿನಿಧಿಗಳು ಹಾಗೆ ಮಾಡಿದರೂ, ಪ್ರಾಶಸ್ತ್ಯದ ಆಧಾರದಲ್ಲಾದರೂ ಅನುದಾನ ಪಡೆಯಲು ಅವಕಾಶವಿದೆ. ಅದರ ಬದಲಾಗಿ ಚುನಾವಣೆ ಬಹಿಷ್ಕಾರದಿಂದ ಯಾರಿಗೂ ಯಾವುದೇ ಲಾಭವಿಲ್ಲ. ಮತ ಚಲಾಯಿಸಿ, ಆ ಮೂಲಕ ತಮ್ಮ ವಾರ್ಡ್, ಗ್ರಾಮಗಳನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಸಾಧ್ಯವಿದೆ. ಈ ಬಾರಿ ಬಿಜೆಪಿ ಬೆಂಬಲಿತರನ್ನು ಬೆಂಬಲಿಸುವ ಮೂಲಕ ಗ್ರಾಮದ ಅಭಿವೃದ್ಧಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದರು.
ಇದನ್ನೂ ಓದಿ:ನಮ್ಮ ಪಕ್ಷದವರೇ ನನ್ನ ಸೋಲಿಗೆ ಕಾರಣ, ಪಕ್ಷದ್ರೋಹಿ ಪಕ್ಷ ಬಿಡಲಿ:ನೋವು ತೋಡಿಕೊಂಡ ಸಿದ್ದರಾಮಯ್ಯ
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ 20 ಕೋಟಿ ರೂಪಾಯಿ ಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಚುನಾವಣಾ ಬಹುಷ್ಕಾರದ ಕೂಗು ಕೇಳಿ ಬಂದಿರುವಲ್ಲಿ ರಾಜಕೀಯ ಪ್ರಾತಿನಿಧ್ಯವನ್ನೂ ನೀಡಲಾಗಿದೆ. ದೇವಸ್ಥಾನದ ಅಭಿವೃದ್ಧಿಗೂ ಅನುದಾನ ನೀಡಲಾಗಿದೆ ಎಂದರು.
ಕಾಪು ವಿಧಾನ ಸಭಾ ಕ್ಷೇತ್ರದ 26 ಗ್ರಾಮ ಪಂಚಾಯತ್ ಗಳಲ್ಲೂ ಬಿಜೆಪಿ ಬೆಂಬಲಿತರು ಜಯ ಸಾಧಿಸುವ ನಿರೀಕ್ಷೆಯಿದೆ. ಅದಕ್ಕೆ ಪೂರಕವಾಗಿ ಪಕ್ಷ ಸಂಘಟನೆ ನಡೆಯುತ್ತಿದೆ. ಕಾರ್ಯಕರ್ತರೂ ಕೂಡಾ ಶ್ರಮಿಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರಕಾರಗಳ ಜೊತೆಗೆ ಗ್ರಾಮ ಪಂಚಾಯತ್ ಗಳಲ್ಲೂ ಬಿಜೆಪಿ ಆಡಳಿತದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದರು.
ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಬಿಜೆಪಿ ಮಂಡಲ ಪ್ರಭಾರಿ ಯಶ್ ಪಾಲ್ ಸುವರ್ಣ, ಚುನಾವಣಾ ಉಸ್ತುವಾರಿ ನವೀನ್ ಎಸ್.ಕೆ., ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ
Goddess Lakshmi: ಲಕ್ಷ್ಮೀ ಆರಾಧನೆಯ ಪರ್ವ ಸಮಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.