ಕೃಷ್ಣ- ಮಹಾಲಕ್ಷ್ಮೀ ಸನ್ನಿಧಾನಕ್ಕೆ ಅಂತಃಸಂಬಂಧ: ಪುತ್ತಿಗೆ ಶ್ರೀ
Team Udayavani, Apr 10, 2022, 4:50 AM IST
ಪಡುಬಿದ್ರಿ: ಉಡುಪಿ ಶ್ರೀಕೃಷ್ಣ ಸನ್ನಿಧಾನ ಹಾಗೂ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ಸನ್ನಿಧಾನಗಳು ಪರಸ್ಪರ ಅಂತಃಸಂಬಂಧವುಳ್ಳ ಸನ್ನಿಧಾನಗಳಾಗಿವೆ.
ಹಾಗಾಗಿ ಲಕ್ಷ್ಮೀದೇವಿ ಇಲ್ಲಿ ತನ್ನ ವೈಭವವನ್ನು ಮೆರೆದಿದ್ದಾಳೆ. ಇಲ್ಲಿನ ಬ್ರಹ್ಮಕಲಶೋತ್ಸವವು ಡಾ| ಜಿ. ಶಂಕರ್ ಅವರಿಂದ ಆದರ್ಶಪ್ರಾಯವಾಗಿ ನಡೆದಿದೆ ಎಂದು ಉಡುಪಿ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.
ಅವರು ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸನ್ನಿಧಾನದ ಬ್ರಹ್ಮ ಕಲಶೋತ್ಸವ ಪುಣ್ಯೋತ್ಸವ ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಮೊಗವೀರರದು ಸತ್ಯ ನಿಷ್ಟ ಸಮಾಜ. ಸಮುದ್ರದಲ್ಲಿ ಅತಂತ್ರವಾಗಿರುವ ದೋಣಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಅವರು ತಮ್ಮ ವೃತ್ತಿ ನಿರ್ವಹಿಸುತ್ತಾರೆ. ಮೊಗವೀರ ಮಹಿಳೆಯರೂ ಇಂದು ಬಡತನದಿಂದ ಮುಕ್ತರಾಗಿದ್ದಾರೆ. ಮಹಾಲಕ್ಷ್ಮೀಯ ವಿಶೇಷ ಅನುಗ್ರಹ ಅವರ ಮೇಲಾಗಲಿ ಎಂದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಿಯ ಆನುವಂಶಿಕ ಅರ್ಚಕ ಶ್ರೀ ಅನಂತಪದ್ಮನಾಭ ಆಸ್ರಣ್ಣ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀಯು ಎಲ್ಲರನ್ನೂ ಹರಸಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ| ಜಿ. ಶಂಕರ್ ಮಾತನಾಡಿ, ಇಲ್ಲಿಯವರೆಗೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅನ್ನ ದಾಸೋಹವು ನಡೆದಿದೆ. ಎ. 15ರ ವರೆಗೆ ಸುಮಾರು 2.5 ಕೋಟಿ ಕುಂಕುಮಾರ್ಚನೆಗಳೂ ನೆರವೇರಲಿವೆ ಎಂದರು.
ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ. ಅಮೀನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಮುಂಬಯಿ ಉದ್ಯಮಿಗಳಾದ ಕುಸುಮೋದರ ಶೆಟ್ಟಿ, ಸುಧಾಕರ ಹೆಗ್ಡೆ, ಆನಂದ ಕುಂದರ್, ಭುವನೇಂದ್ರ ಕಿದಿಯೂರು, ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ, ಕೇಂದ್ರ ಸಾಂಸ್ಕೃತಿಕ ಸಚಿವಾಲಯದ ಗೌರಿ ಮರಾಠೆ, ಶಾಸಕ ಲಾಲಾಜಿ ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.
ಸಮರ್ಥ್ ಭಾರತ್ ಯೂ ಟ್ಯೂಬ್ ಅವತರಣಿಕೆ ಹಾಗೂ ಇಂಡಿಯನ್ ಟೆಂಪಲ್ಸ್‌ನ ಮೂರನೇ ಆವೃತ್ತಿಯ ಬಿಡುಗಡೆಗಳು ನಡೆದವು.
ಡಾ| ಜಿ. ಶಂಕರ್ ಸ್ವಾಗತಿಸಿದರು. ದಾಮೋದರ ಶರ್ಮ ಬಾರ್ಕೂರು ನಿರ್ವಹಿಸಿದರು. ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಶಂಕರ ಸಾಲ್ಯಾನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.