![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 5, 2020, 9:43 PM IST
ಉಡುಪಿ: ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪದೋಷಗಳು ಕಂಡುಬಾರದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಅಂತಿಮ ಮತದಾರರ ಪಟ್ಟಿಯನ್ನು ಅತ್ಯಂತ ಪಾರದರ್ಶಕವಾಗಿ ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಡಾ| ಎಂ.ಟಿ.ರೇಜು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಶನಿವಾರ ನಡೆದ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳು, ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಷ್ಕರಣೆ ಸಂದರ್ಭದಲ್ಲಿ ಈಗಾಗಲೇ ಮರಣ ಹೊಂದಿದವರು, ಎರಡು ಕ್ಷೇತ್ರಗಳಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ಅವರನ್ನು ಪಟ್ಟಿ ಯಿಂದ ಕೈಬಿಡಬೇಕು. ಹೆಸರು ತಿದ್ದುಪಡಿ, ಒಂದು ಕ್ಷೇತ್ರದಿಂದ ಮತ್ತೂಂದು ಕ್ಷೇತ್ರಕ್ಕೆ ವರ್ಗಾವಣೆ ಪ್ರಕರಣಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಅನುಮೋದನೆ ನೀಡುವಂತೆ ತಹಶೀಲ್ದಾರ್‌ಗಳಿಗೆ ಅವರು ಸೂಚಿಸಿದರು.
ಅಗತ್ಯ ಮಾಹಿತಿ ನೀಡಿ
ರಾಜಕೀಯ ಪಕ್ಷಗಳು ಸಹ ಮತ ದಾರರ ಪಟ್ಟಿಯಲ್ಲಿ ಆಕ್ಷೇಪಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಇದರಿಂದ ಚುನಾವಣೆಯನ್ನು ಸುಗಮ ವಾಗಿ ನಡೆಸಲು ಸಾಧ್ಯವಾಗಲಿದೆ. ಜಿಲ್ಲಾಡಳಿತದ ಮೂಲಕ ಕರಡು ಮತದಾರರ ಪಟ್ಟಿಯನ್ನು ಪಡೆದು ಪರಿಶೀಲಿಸಿ ಆಕ್ಷೇಪಣೆ ಗಳಿದ್ದಲ್ಲಿ ಸಲ್ಲಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಯುವ ಮತದಾರರ ಸೇರ್ಪಡೆ ಮುಂತಾದವುಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡುವಂತೆ ಹಾಜರಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅವರು ತಿಳಿಸಿದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವಿಕೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದಂತೆ ಪರಿಶೀಲಿಸಿ ಅನುಮೋದನೆ ನೀಡಲು ಸೂಚಿಸಿದರು.
ಜಿಲ್ಲೆಯಲ್ಲಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗದ ಸಹಾ
ಯಕ ಆಯುಕ್ತ ರಾಜು, ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.
3,164 ಅರ್ಜಿ ಸ್ವೀಕಾರ
ಮತದಾರರ ಪಟ್ಟಿಗೆ ಮಿಂಚಿನ ನೋಂದಣಿ ಕಾರ್ಯಕ್ರಮದಲ್ಲಿ ಈವರೆಗೆ 3,164 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಡಿ.17 ರವರೆಗೆ ನಡೆಯುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ ಎಂದು ಡಾ| ಎಂ.ಟಿ. ರೇಜು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.