Malpe: ತಂತಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಹೊತ್ತಿ ಉರಿದ ಗೂಡ್ಸ್ ವಾಹನ
ಹೊತ್ತಿ ಉರಿದ ತೆಂಗಿನಕಾಯಿ ನಾರು ಸಾಗಾಟದ ಗೂಡ್ಸ್ ವಾಹನ
Team Udayavani, Dec 17, 2024, 9:10 PM IST
ಮಲ್ಪೆ: ಹೂಡೆ ಕೆನರಾ ಬ್ಯಾಂಕ್ ಬಳಿ ತೆಂಗಿನಕಾಯಿ ನಾರು ಸಾಗಾಟ ಮಾಡುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿ ವಾಹನ ಸಂಪೂರ್ಣ ಸುಟ್ಟು ಹೋದ ಘಟನೆ ಸೋಮವಾರ ರಾತ್ರಿ ನಡೆದಿದೆ.
ವಿದ್ಯುತ್ ತಂತಿ ತಗಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೇ ವಸತಿ, ಹೊಟೇಲ್, ಅಂಗಡಿ ಇದ್ದು, ಸುತ್ತ ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.
ಈ ಭಾಗದಲ್ಲಿ ವಿದ್ಯುತ್ ತಂತಿ ಜೋತು ಬಿದ್ದು ಹಲವು ಬಾರಿ ಶಾರ್ಟ್ ಸರ್ಕ್ಯೂಟ್‌ನಿಂದ ಕಿಡಿ ಹಾರುತ್ತಿತ್ತು ಎನ್ನಲಾಗಿದೆ. ಮೆಸ್ಕಾಂ ಕೂಡಲೇ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.