Malpe: ಡ್ರಗ್ಸ್ ಪಾರ್ಸೆಲ್ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ
Team Udayavani, Nov 14, 2024, 7:30 AM IST
ಮಲ್ಪೆ: ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ತನ್ನನ್ನು ಫೆಡೆಕ್ಸ್ ಕೊರಿಯರ್ ಕಂಪೆನಿಯ ಆಕಾಶ್ ವರ್ಮ ಎಂದು ಪರಿಚಯಿಸಿಕೊಂಡಿದ್ದ. ನೀವು ಕಳಿಸಿರುವ ಪಾರ್ಸೆಲ್‌ನಲ್ಲಿ 2 ಕೆಜಿ ಬಟ್ಟೆ, 4 ಎಕ್ಸ್‌ಪಯರ್ಡ್ ಪಾಸ್‌ಪೋರ್ಟ್, 4 ಡೆಬಿಟ್ ಕಾರ್ಡ್, 1 ಲ್ಯಾಪ್‌ಟಾಪ್, 420 ಗ್ರಾಂ ಎಂಡಿಎಂಎ ಡ್ರಗ್ಸ್ ಇದ್ದು, ಪಾರ್ಸೆಲ್ ಮುಂಬಯಿಯ ಎನ್‌ಸಿಬಿ ವಶದಲ್ಲಿದೆ. ನೀವು ಅರ್ಮನ್ ಅಲಿ ಅವರಿಗೆ ಪಾರ್ಸೆಲ್ ಕಳುಹಿಸಿರುವುದಾಗಿ ತಿಳಿಸಿ ಪೊಲೀಸ್ ಕ್ಲಿಯರೆನ್ಸ್ ಪಡೆಯಲು ಸ್ಕೈಪ್ ವೀಡಿಯೋಕಾಲ್‌ಗೆ ಬರುವಂತೆ ತಿಳಿಸಿ ಸ್ಕೈಪ್‌ನಲ್ಲಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್ ಸಾಫ್ಟ್ ಕಾಪಿಯನ್ನು ಪಡೆದುಕೊಂಡು, ಎಲ್ಲ ದಾಖಲೆಗಳನ್ನು ಪರಿಶೀಲಿಸುವುದಾಗಿ ತಿಳಿಸಿ ಫಿರ್ಯಾದಿದಾರರ ಐಸಿಐಸಿಐ ಬ್ಯಾಂಕ್ ಖಾತೆಯ ಐ ಮೊಬೈಲ್ ಅಪ್ಲಿಕೇಶನ್ ಲಾಗಿನ್ ಆಗಲು ಸೂಚಿಸಿದ್ದಾನೆ.
ಪರ್ಸನಲ್ ಲೋನ್ ಸೆಕ್ಷನ್‌ನಲ್ಲಿ 20 ಲಕ್ಷ ರೂ. ವಂಚನೆಯ ಹಣ ಇದ್ದು, ಅದನ್ನು ಫಿರ್ಯಾದಿದಾರರ ಖಾತೆಗೆ ಜಮೆ ಮಾಡಿಕೊಳ್ಳುವಂತೆ ಸೂಚಿಸಿರುತ್ತಾರೆ. ಅದರಂತೆ ದೂರುದಾರರು 20 ಲಕ್ಷ ರೂ. ವರ್ಗಾಯಿಸಿದ್ದು, ಬಳಿಕ ಇದು ವಂಚನೆ ಎಂಬುದು ಗೊತ್ತಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.