ಮಣಿಪಾಲ: ಕಾರಿನಲ್ಲಿ ಅಪಾಯಕಾರಿಯಾಗಿ ಪಟಾಕಿ ಸಿಡಿಸಿದ ಆರೋಪಿ ಪೊಲೀಸ್ ವಶಕ್ಕೆ
Team Udayavani, Oct 27, 2022, 7:13 PM IST
ಉಡುಪಿ: ಅಪಾಯಕಾರಿ ರೀತಿಯಲ್ಲಿ ಕಾರಿನ ಮೇಲ್ಗಡೆ ಪಟಾಕಿ ಸಿಡಿಸಿದ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಮಣಿಪಾಲದ ಸೆಲೂನ್ನಲ್ಲಿ ಕರ್ತವ್ಯ ಮಾಡಿಕೊಂಡಿರುವ ವಿಶಾಲ್ ಕೊಹ್ಲಿ(26)ಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅ.25ರಂದು ರಾತ್ರಿ 9.30ರ ವೇಳೆಗೆ ಮಣಿಪಾಲದ ಡಾ ವಿ.ಎಸ್.ಆಚಾರ್ಯ ರಸ್ತೆಯಲ್ಲಿ ಕೆಎ20ಎಂ9232 ಸಂಖ್ಯೆಯ ಕಾರಿನಲ್ಲಿ ಅದರ ಚಾಲಕ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಕಾರಿನ ಮೇಲ್ಗಡೆ ಪಟಾಕಿ ಇಟ್ಟು ಸಿಡಿಸಿದ್ದಾನೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ಮಣಿಪಾಲ ಠಾಣೆಯ ಪಿಎಸ್ಐ ರಾಜಶೇಖರ ವಂದಲಿ, ಎಎಸ್ಐ ಶೈಲೇಶ್, ಹೆಡ್ಕಾನ್ಸ್ಟೆಬಲ್ ಪ್ರಸನ್ನ ಅವರು ಗುರುವಾರ ಕಾರನ್ನು ಮಣಿಪಾಲದ ಸಿಂಡಿಕೇಟ್ ವೃತ್ತದ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ. ಪಿಎಸ್ಐ ರಾಜಶೇಖರ ವಂದಲಿಯವರ ಸ್ವ ದೂರಿನ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.