Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
ಕೆಲವು ಮಂದಿಗೆ ಕಡಿತ; ನಾಯಿಗಳ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆಗೆ ಮುಂದಾದ ನಗರಸಭೆ
Team Udayavani, Nov 8, 2024, 3:57 PM IST
ಮಣಿಪಾಲ: ನಗರದ ವಿವಿಧೆಡೆ ಬೀದಿ ನಾಯಿಗಳ ಉಪಟಳ ಕಂಡುಬರುತ್ತಿದ್ದು, ಈಗ ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೂ ಸೇರಿಕೊಂಡಿವೆ.
2 ವಾರಗಳಿಂದಲೂ ಜಿಲ್ಲಾಧಿಕಾರಿ ಕಚೇರಿಯ ಎದುರುಭಾಗದ ಗೇಟ್ ಹಾಗೂ ಹಿಂಬದಿಯಿಂದ ನಾಯಿಗಳು ಆಗಮಿಸುತ್ತಿದ್ದು, ಈಗಾಗಲೇ ಕೆಲವು ಮಂದಿ ಕಡಿತಕ್ಕೂ ಒಳಗಾಗಿದ್ದಾರೆ. ಇಲ್ಲಿನ ಭದ್ರತಾ ಸಿಬಂದಿ ನಾಯಿಯನ್ನು ಓಡಿಸುವ ಕೆಲಸ ಮಾಡುತ್ತಿದ್ದರೂ ಅದರ ಉಪಟಳ ಮಾತ್ರ ತಪ್ಪುತ್ತಿಲ್ಲ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಟ್ಟಡ ಒಳಗೂ ಶ್ವಾನಗಳು ಮಲಗಿರುತ್ತವೆ. ಈ ಬಗ್ಗೆ ನಗರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ದಿನನಿತ್ಯ ಜಿಲ್ಲಾಧಿಕಾರಿ ಕಚೇರಿಗೆ ಹಲವಾರು ಮಂದಿ ಭೇಟಿ ನೀಡುತ್ತಿದ್ದು, ಪ್ರತಿಭಟನೆಗಳು ನಡೆಯುವ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಅಲ್ಲದೆ ಸಭೆ, ಸಮಾರಂಭಗಳು ಇರುವಾಗ ಆಗಮಿಸುವ ಜನರ ಸಂಖ್ಯೆಯೂ ಅಧಿಕವಿರುತ್ತದೆ. ಈ ವೇಳೆ ನಾಯಿಗಳು ಉಪಟಳ ನೀಡಿದರೆ ಸಾರ್ವಜನಿಕರು ತೊಂದರೆ ಎದುರಿಸಬೇಕಾಗುತ್ತದೆ ಎನ್ನುತ್ತಾರೆ ಸ್ಥಳೀಯರೊಬ್ಬರು.
ಈ ಬಗ್ಗೆ ನಗರಸಭೆಯ ಪೌರಾಯುಕ್ತ ಡಾ| ಉದಯ ಶೆಟ್ಟಿ ಪ್ರತಿಕ್ರಿಯಿಸಿದ್ದು, ಜಿಲ್ಲಾಧಿಕಾರಿ ಕಚೇರಿಯೊಳಗೆ ಆಗಮಿಸುವ ನಾಯಿಗಳನ್ನು ಸ್ಥಳಾಂತರ ಮಾಡುವಂತಿಲ್ಲ. ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೆ ನೀಡುವ ಬಗ್ಗೆ ನಗರಸಭೆಯ ಮೂಲಕ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪೊದೆಗಳಲ್ಲಿ ಬಂಧಿಯಾದ ದಂಡಿ ಪ್ರತಿಮೆ
ಡಿಸಿ ಕಚೇರಿ ಆವರಣದ ಒಳಗಿರುವ ದಂಡಿ ಸತ್ಯಾಗ್ರಹದ ಸ್ಮರಣೆಯ ಪ್ರತಿಮೆ ಪೊದೆಗಳಿಂದ ಆವರಿಸಿದೆ. ಸುತ್ತಲೂ ಪೊದೆಗಳು ಬೆಳೆದು ನಿಂತ ಪರಿಣಾಮ ನಾಯಿಗಳು ಹಾಗೂ ವಿಷಜಂತುಗಳು ಕೂಡ ಇಲ್ಲಿ ಆಶ್ರಯ ಪಡೆಯುತ್ತಿವೆ. ಅಲ್ಲದೆ ಸ್ಥಳೀಯ ಕಟ್ಟಡದ ತ್ಯಾಜ್ಯಗಳನ್ನು ಇಲ್ಲಿ ಎಸೆಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.