ಎಂಜಿಎಂ ಕ್ಯಾಂಪಸ್: ಮನುಷ್ಯನ ಬದುಕಿಗೆ ಜೀವನ ಕೌಶಲ್ಯ ಮುಖ್ಯವಾದದ್ದು: ಟಿ.ಸತೀಶ್ ಯು.ಪೈ
ಎಂಜಿಎಂ ಕಾಲೇಜಿನಲ್ಲಿ ಕಾಲೇಜಿನಲ್ಲಿ ಟಿ.ಮೋಹನದಾಸ್ ಪೈ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ಉದ್ಘಾಟನೆ
Team Udayavani, Jan 13, 2023, 2:50 PM IST
ಉಡುಪಿ:ಇಂದಿನ ಆಧುನಿಕ ತಂತ್ರಜ್ಞಾನವಾದ ಮೊಬೈಲ್, ಇಂಟರ್ನೆಟ್ ನಿಂದಾಗಿ ಮಾಹಿತಿಯನ್ನು ಬೆರಳ ತುದಿಯಲ್ಲೇ ಪಡೆಯಲು ಸಾಧ್ಯವಾಗಿದೆ. ಆದರೆ ಮನುಷ್ಯನಿಗೆ ಜೀವನ ಕೌಶಲ್ಯ ಮುಖ್ಯ. ಇದರಿಂದ ವೈಯಕ್ತಿಕ ಹಾಗೂ ಒಂದು ಸಂಸ್ಥೆಯ ಬೆಳವಣಿಗೆಗೆ ಕಾರಣವಾಗಲಿದೆ. ಇದಕ್ಕೆ ಉತ್ತಮ ಉದಾಹರಣೆ ದಿ.ಟಿ.ಮೋಹನದಾಸ್ ಪೈ ಅವರ ದೂರದೃಷ್ಟಿ. ಅವರ ಲೈಫ್ ಸ್ಕಿಲ್ಸ್ ನಿಂದ ನಾನು ಕೂಡಾ ಇಂದು ಇಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು ಎಂದು ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ.ಸತೀಶ್ ಯು.ಪೈ ಹೇಳಿದರು.
ಅವರು ಶುಕ್ರವಾರ (ಜನವರಿ 13) ಎಂಜಿಎಂ ಕಾಲೇಜಿನಲ್ಲಿ ಟಿ.ಮೋಹನದಾಸ್ ಪೈ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಾನು ಟಿ.ಮೋಹನದಾಸ್ ಪೈ ಅವರನ್ನು ನೆನಪಿಸಿಕೊಳ್ಳಬೇಕು. ಯಾಕೆಂದರೆ ಈ ಭಾಗದ ಆರ್ಥಿಕ, ಶೈಕ್ಷಣಿಕ ಏಳಿಗೆಗೆ ಅವರ ಕೊಡುಗೆ ಅವಿಸ್ಮರಣೀಯವಾದದ್ದು. ಜೊತೆಗೆ ನನ್ನ ಯಶಸ್ವಿಗೆ ಪತ್ನಿ ಸಂಧ್ಯಾ ಎಸ್. ಪೈ, ಪುತ್ರ ಗೌತಮ್ ಪೈ, ಪುತ್ರಿ ನಂದನಾ ಸೇರಿದಂತೆ ಎಲ್ಲರ ಸಹಕಾರ ಕಾರಣವಾಗಿದೆ ಎಂದು ಸತೀಶ್ ಪೈ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಅಭಿನಂದನೆ ಭಾಷಣ ಮಾಡಿದ ಮೂಡುಬಿದಿರೆ ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಮೋಹನ ಆಳ್ವ, ಕರಾವಳಿ ಪ್ರದೇಶಕ್ಕೆ ಹೊಸ ದಿಕ್ಸೂಚಿಯನ್ನು ಕೊಟ್ಟವರು ಮಣಿಪಾಲದ ಪೈ ಕುಟುಂಬದವರು. ಅವರು ನಾಡಿಗೆ ನೀಡಿರುವ ಕೊಡುಗೆಗಾಗಿ ನಾವು ಅವರನ್ನು ಅಭಿನಂದಿಸಬೇಕಾಗಿದೆ. ಇಡೀ ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ವೈದ್ಯಕೀಯ ವಿದ್ಯಾಸಂಸ್ಥೆ, ಬ್ಯಾಂಕಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಣಿಪಾಲದ ಪೈ ಕುಟುಂಬ ನೀಡಿರುವ ಕೊಡುಗೆ ಅಪಾರವಾದದ್ದು ಎಂದರು.
ಸತೀಶ್ ಯು.ಪೈ ಮುಗ್ದ ಮನಸ್ಸಿನ ತಪಸ್ವಿ:
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಾನು (ಆಳ್ವ) ಸೇರಿದಂತೆ ಹಲವಾರು ಜನರಿಗೆ ಪೈ ಕುಟುಂಬವೇ ಸ್ಫೂರ್ತಿಯಾಗಿದೆ. ನೀವು ಕೇವಲ ಪೈ ಸಾಮ್ರಾಜ್ಯ ಕಟ್ಟಿಲ್ಲ, ಮನುಷ್ಯರ ಬದುಕನ್ನು ಕಟ್ಟಿದ್ದೀರಿ. ಅದೇ ರೀತಿ ಸತೀಶ್ ಯು ಪೈ ಅವರು ಕೂಡಾ ಮುಗ್ದ ಮನಸ್ಸಿನ ತಪಸ್ವಿ. ಅವರ ವ್ಯಕ್ತಿತ್ವದ ಬಗ್ಗೆ ಎಲ್ಲರಿಗೂ ಅಪಾರ ಗೌರವವಿದೆ. ಯಾಕೆಂದರೆ ಅವರು ಕರುಣಾಮಯಿ ಹೃದಯವಂತ. ಸತೀಶ್ ಪೈ ಅವರು ಎಲ್ಲರನ್ನೂ ಪ್ರೀತಿಸುವ ವ್ಯಕ್ತಿ ಎಂದು ಹೇಳಿದ ಡಾ.ಮೋಹನ ಆಳ್ವ ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿದರು.
ಟಿ.ಮೋಹನದಾಸ್ ಪೈ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ಉದ್ಘಾಟನೆಯ ನಂತರ ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ.ಸತೀಶ್ ಯು.ಪೈ ಹಾಗೂ ಡಾ.ಸಂಧ್ಯಾ ಎಸ್.ಪೈ ದಂಪತಿಯನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಅಧ್ಯಕ್ಷ ಡಾ| ಎಚ್.ಎಸ್. ಬಲ್ಲಾಳ್, ಡಾ| ಟಿಎಂಎ ಪೈ ಅವರ ದೂರದೃಷ್ಟಿಯಿಂದ ಮಣಿಪಾಲ ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ. ಪಿಪಿಪಿ ಮಾದರಿಯಲ್ಲಿ ದೇಶದಲ್ಲೇ ಮೊದಲ ವೈದ್ಯಕೀಯ ಕಾಲೇಜು ಸ್ಥಾಪಿಸಿದ್ದರು. ಈಗ ಸರಕಾರ ಪಿಪಿಪಿ ಮಾದರಿಯನ್ನು ಅನುಸರಿಸುತ್ತಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಉಡುಪಿ ಭಾಗಕ್ಕೆ ಎಂಜಿಎಂ ಮೊದಲ ಪದವಿ ಕಾಲೇಜಾಗಿತ್ತು ಮತ್ತು ಗಾಂಧೀಜಿ ಯವರ ಚಿಂತನೆಗಳ ಪ್ರೇರಣೆಯಿಂದ ಎಂಜಿಎಂ ಕಾಲೇಜು ಎಂದು ಹೆಸರಿಡಲಾಗಿತ್ತು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ರಿಜಿಸ್ಟ್ರಾರ್ ಡಾ.ರಂಜನ್ ಆರ್.ಪೈ ಉಪಸ್ಥಿತರಿದ್ದರು. ಅಕಾಡೆಮಿ ಜನರಲ್ ಎಜುಕೇಶನ್ ಅಧ್ಯಕ್ಷ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಕಾಲೇಜು ಟ್ರಸ್ಟ್ ಸದಸ್ಯರಾದ ಟಿ.ಅಶೋಕ್ ಪೈ, ವಸಂತಿ ಆರ್.ಪೈ, ಅಕಾಡೆಮಿ ಕಾರ್ಯದರ್ಶಿ ಬಿ.ಪಿ.ವರದರಾಯ ಪೈ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ್, ಎಂಜಿಎಂ ಪಿಯು ಕಾಲೇಜಿನ ಪ್ರಾಂಶುಪಾಲರಾದ ಮಾಲತಿ ದೇವಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಆರಂಭಕ್ಕೂ ಮುನ್ನ ಎಂಜಿಎಂ ವಿದ್ಯಾರ್ಥಿನಿ ಸಮನ್ವಿ ಮತ್ತು ಅವರ ತಂಡದಿಂದ ಗಾಯನ ಕಾರ್ಯಕ್ರಮ ನಡೆಯಿತು. ಎಂಜಿಎಂ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ದೇವಿದಾಸ್ ಎಸ್.ನಾಯಕ್ ಸ್ವಾಗತಿಸಿ,ಪ್ರೊ.ಲಕ್ಷ್ಮೀನಾರಾಯಣ ಕಾರಂತ್ ವಂದಿಸಿದರು. ಪ್ರೊ.ರೋಹಿಣಿ ನಾಯಕ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.