ಹಾಸ್ಟೆಲ್‌ಗಳಿಗೆ ಸೊಳ್ಳೆ ಪರದೆ: ಡಿಸಿ
Team Udayavani, Aug 5, 2018, 10:30 AM IST
ಉಡುಪಿ: ಮಲೇರಿಯಾ ಪ್ರಕರಣಗಳು ನಗರ ಪ್ರದೇಶಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ನಗರ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲ ಹಾಸ್ಟೆಲ್‌ಗಳಿಗೆ ಸೊಳ್ಳೆ ಪರದೆಯನ್ನು ವಿತರಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಲಹಾ ಸಮಿತಿ ಅಂತರ್ ಇಲಾಖಾ ಮಲೇರಿಯಾ ಮತ್ತು ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಲೇರಿಯಾ ಇಳಿಮುಖ
ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಮಲೇರಿಯಾ ಪ್ರಕರಣ ಕಡಿಮೆ. 2016ರಲ್ಲಿ 1,168 ಪ್ರಕರಣಗಳಿದ್ದು, 2017ರಲ್ಲಿ 513 ಪ್ರಕರಣಗಳು ಹಾಗೂ ಈ ವರ್ಷ ಇದುವರೆಗೆ 79 ಪ್ರಕರಣ ವರದಿಯಾಗಿವೆ. ನಗರ ಪ್ರದೇಶದಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ ಉಡುಪಿಯಲ್ಲಿ 35,563, ಕುಂದಾಪುರದಲ್ಲಿ 4,450, ಕಾರ್ಕಳದಲ್ಲಿ 200 ಸೇರಿದಂತೆ ಒಟ್ಟು 40,213 ಸೊಳ್ಳೆ ಪರದೆ ವಿತರಿಸಲಾಗಿದೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಪ್ರೇಮಾನಂದ ಮಾಹಿತಿ ನೀಡಿದರು.
ಹಾಸ್ಟೆಲ್ ಕಿಟಕಿಗಳಿಗೆ ಮೆಷ್ ಅಳವಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಡೆಂಗ್ಯೂ ಇಳಿಮುಖ
ಜಿಲ್ಲೆಯಲ್ಲಿ ಕಳೆದ ವರ್ಷ 383 ಡೆಂಗ್ಯೂ ಪ್ರಕರಣ ವರದಿಯಗಿದ್ದು, ಈ ವರ್ಷ 91 ಪ್ರಕರಣ ವರದಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರೋಹಿಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.