Nejar Incident; ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಾತನ ವಿರುದ್ಧ ಸುಮೋಟೋ ಕೇಸ್
Team Udayavani, Nov 20, 2023, 11:33 AM IST
ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮ್ಮದ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದು, ಆತನ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಾನೆ. ‘’ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು’’ ಎಂದು ಘಟನೆ ಉಲ್ಲೇಖಿಸಿ ಪೋಸ್ಟ್ ಹಾಕಿದ್ದಾನೆ.
ಇದನ್ನೂ ಓದಿ:Kambala; 2023-24 ಸೀಸನ್ ನ ಮೊದಲ ಕಂಬಳ ಸಂಪನ್ನ; ಕಕ್ಯಪದವು ಕಂಬಳದ ಫಲಿತಾಂಶ ಇಲ್ಲಿದೆ
ಹಫೀಜ್ ಮೊಹಮದ್ ವಿರುದ್ದ ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.