ಬೆಳಪು: ಆರು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮನೆ ಹಸ್ತಾಂತರ

Team Udayavani, Dec 10, 2020, 4:30 PM IST

ಬೆಳಪು: ಆರು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮನೆ ಹಸ್ತಾಂತರ

ಕಾಪು: ಬೆಳಪು ದೇವೇಗೌಡ ಬಡಾವಣೆಯಲ್ಲಿ ಸಮಾಜ ಸೇವಾ ಘಟಕ, ಜಮಾಅತೆ ಇಸಾಮೀ ಹಿಂದ್, ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ ಇವರ ವತಿಯಿಂದ ಬಡ ಕುಟುಂಬವೊಂದಕ್ಕೆ ಸುಮಾರು ಆರು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ನೂತನ ಮನೆ ರಹಮತ್ ಅನ್ನು ಡಿ. 10ರಂದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಮನೆ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ಸಿಎ ಬ್ಯಾಂಕ್ ಅಧ್ಯಕ್ಷ, ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಬೆಳಪು ಗ್ರಾಮದಲ್ಲಿ 600ಕ್ಕೂ ಅಧಿಕ ಬಡಕುಟುಂಬಗಳಿಗೆ ಮನೆ ನಿವೇಶನವನ್ನು ಒದಗಿಸಿ ಕೊಡಲಾಗಿದ್ದು, ಸರಕಾರದ ವಿವಿಧ ಮೂಲಗಳಿಂದ ಗೃಹ ನಿರ್ಮಾಣಕ್ಕೆ ಸರಕಾರ ಮತ್ತು ದಾನಿಗಳಿಂದ ಹಣಕಾಸಿನ ನೆರವನ್ನೂ ದೊರಕಿಸಿಲಾಗಿದೆ. ಮನೆ ನಿವೇಶನ ದೊರಕಿದರೂ, ಮನೆ ನಿರ್ಮಾಣಕ್ಕೆ ಕಷ್ಟ ಪಡುತ್ತಿದ್ದ ಕೆಲವರಿಗೆ ದಾನಿಗಳ ನೆರವಿನೊಂದಿಗೆ ಮನೆ ನಿರ್ಮಾಣದ ಸಂಕಲ್ಪ ಮಾಡಲಾಗಿದ್ದು, ಅದಕ್ಕೆ ಅನುಗುಣವಾಗಿ ಜಮಾಅತೆ ಇಸಾಮೀ ಹಿಂದ್ ಸಹಿತ ವಿವಿಧ ಸಂಸ್ಥೆಗಳು ನಮ್ಮೊಂದಿಗೆ ಕೈ ಜೋಡಿಸಿರುವುದು ಶ್ಲಾಘನೀಯ ಎಂದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾಪು ತಾಲೂಕು ಘಟಕದ ಅಧ್ಯಕ್ಷ ಶಬೀ ಅಹಮದ್ ಕಾಝಿ ಮಾತನಾಡಿ, ಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ. ನಮ್ಮ ದಿನ ನಿತ್ಯದ ಉಳಿತಾಯದ ಒಂದಂಶವನ್ನು ಸಮಾಜದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಒದಗಿಸಿದರೆ ಅದು ದೇವರಿಗೆ ಅತ್ಯಂತ ಪ್ರಿಯವಾಗುತ್ತದೆ. ಈ ಮಾದರಿಯ ಸೇವೆಗೆ ಭಗವದನುಗ್ರಹವೂ ಸಿಗುತ್ತದೆ ಎಂದರು.

ಇದನ್ನೂ ಓದಿ:ಚುನಾವಣೆ ಬಹಿಷ್ಕಾರಕ್ಕೆ ಕರೆ ಕೊಟ್ಟ ಕೋಡಿಕನ್ಯಾಣಕ್ಕೆ ಜಿಲ್ಲಾಧಿಕಾರಿ ಭೇಟಿ

ಜಮಾಅತೆ ಇಸಾಮೀ ಹಿಂದ್‌ನ ಜಿಲ್ಲಾ ಸಂಚಾಲಕ ಶಬ್ಬೀರ್ ಮಲ್ಪೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗೋವಾದ ಉದ್ಯಮಿ ಇಸ್ಮಾಯಿಲ್ ಸಾಹೇಬ್ ನೂತನ ಮನೆಯ ಕೀಲಿ ಕೈಯನ್ನು ಹಸ್ತಾಂತರಿಸಿದರು. ಕೊಂಬಗುಡ್ಡೆ ಜಾಮಿಯಾ ಮಸ್ಜಿದ್ ಜದೀದ್ ಕಲಾನ್‌ನ ಇಮಾಮ್ ಮೌಲಾನಾ ಮಹಮ್ಮದ್ ಪರ್ವೇಝ್ ಆಲಂ ನದ್ವಿ ಕುರ್ ಆನ್ ಪಠಣದೊಂದಿಗೆ ಮನೆ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಲೀಲಾಧರ ಶೆಟ್ಟಿ ಕರಂದಾಡಿ, ಉದ್ಯಮಿ ಎಸ್. ಕೆ. ಇಕ್ಬಾಲ್ ಕಟಪಾಡಿ, ಕಾಪು ಮುಷ್ತಾಕ್ ಇಲೆಕ್ಟ್ರಿಕಲ್ಸ್‌ನ ಮಾಲಕ ಮುಷ್ತಾಕ್ ಇಬ್ರಾಹಿಂ, ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಸ್ಥಾಯೀ ಅಧ್ಯಕ್ಷ ಡಾ| ಅಬ್ದುಲ್ ಅಜೀಜ್, ಇಕ್ಬಾಲ್ ಸಾಹೇಬ್ ಮಜೂರು ಅತಿಥಿಗಳಾಗಿ ಭಾಗವಹಿಸಿದ್ದರು.

ಜಮಾಅತೆ ಇಸಾಮೀ ಹಿಂದ್‌ನ ಹೂಡೆ ಸ್ಥಾನೀಯ ಅಧ್ಯಕ್ಷ ಅಬ್ದುಲ್ ಖಾದರ್, ಮಲ್ಪೆ ಸ್ಥಾನೀಯ ಅಧ್ಯಕ್ಷ ಅಬ್ದುಲ್ ರಹಮಾನ್ ರಫೀಕ್, ಹೆಚ್.ಆರ್.ಎಸ್. ನ ಜಿಲ್ಲಾ ಸಂಚಾಲಕ ಹಸನ್ ಮೊದಲಾದವರು ಉಪಸ್ಥಿತರಿದ್ದರು.

ಜಮಾಅತೆ ಇಸ್ಲಾಮೀ ಹಿಂದ್‌ನ ಕಾಪು ಸ್ಥಾನೀಯ ಅಧ್ಯಕ್ಷ ಅನ್ವರ್ ಅಲಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಮಹಮ್ಮದ್ ಇಕ್ಬಾಲ್ ಆದಂ ಮಜೂರು ವಂದಿಸಿದರು. ನಿಸಾರ್ ಅಹಮದ್ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kaup

ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

4-kaup

ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.