Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ
ಆರೋಗ್ಯ ಇಲಾಖೆ ಸಮನ್ವಯ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಸೂಚನೆ
Team Udayavani, Jun 30, 2024, 1:24 AM IST
ಮಣಿಪಾಲ: ಜಿಲ್ಲೆಯಲ್ಲಿ ಅನಧಿಕೃತವಾಗಿ ಸ್ಕ್ಯಾನಿಂಗ್ ಸೆಂಟರ್‌ಗಳು ನಡೆಯುತ್ತಿರುವ ಬಗ್ಗೆ ಹಾಗೂ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದು ಕಂಡು ಬಂದ ಬಗ್ಗೆ ಮಾಹಿತಿ ನೀಡಿದಲ್ಲಿ ಅವರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು.
ಪ್ರಸಕ್ತ ಸಾಲಿನ ಈವರೆಗೆ 302 ಗರ್ಭಪಾತ ಪ್ರಕರಣಗಳಾಗಿವೆ. ಅವುಗಳಲ್ಲಿ 84 ಸ್ವಾಭಾವಿಕ ಗರ್ಭಪಾತವಾಗಿವೆ. ಕಾನೂನು ಬಾಹಿರವಾಗಿ ವೈದ್ಯರ ಸಲಹೆಗಳಿಲ್ಲದೆ ಭ್ರೂಣ ಪತ್ತೆಗಳು ನಡೆಯುತ್ತಿರುವ ಬಗ್ಗೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ.ನ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜರಗಿದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಕಾಡುತ್ತವೆ. ಜನರ ಸಹಭಾಗಿ ತ್ವದೊಂದಿಗೆ ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಡಿವಾಣ ಹಾಕಬೇಕು ಎಂದರು.
ಸಾಂಕ್ರಾಮಿಕ ರೋಗಗಳ ನಿವಾರಣೆಗೆ ಅಗತ್ಯವಿರುವ ಔಷಧ, ಲಸಿಕೆ, ವ್ಯಾಕ್ಸಿನೇಶನ್ ಮತ್ತು ಕ್ಲೋರಿನೇಶನ್ ಸಾಮಗ್ರಿಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಪ್ರವಾಹ ಸಂಭವನೀಯ ಪ್ರದೇಶಗಳ ಪಟ್ಟಿಮಾಡಿ ಆರ್‌ಆರ್‌ಟಿ ತಂಡ ರಚಿಸಬೇಕು ಎಂದು ಹೇಳಿದರು.
ತಂಬಾಕು ಉತ್ಪನ್ನಗಳನ್ನು ಶಾಲಾ- ಕಾಲೇಜುಗಳ ಸುತ್ತ 100 ಮೀ. ವ್ಯಾಪ್ತಿಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂಗಡಿಗಳ ಲೈಸೆನ್ಸ್ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದರು.
ಹೆರಿಗೆ ಸಂದರ್ಭದ ಸಾವು ತಡೆಯಿರಿ
ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 3 ತಾಯಿ-ಮರಣ ಪ್ರಕರಣಗಳಾಗಿವೆ. ಅವುಗಳಲ್ಲಿ 2 ಹೊರಜಿಲ್ಲೆಗಳ ಪ್ರಕರಣಗಳಿವೆ. ಬಾಣಂತಿಯರಿಗೆ ಪ್ರಾರಂಭದಿಂದಲೇ ತಾಯಿ ಕಾರ್ಡ್‌ಗಳನ್ನು ವಿತರಿಸಿ, ನಿರಂತರ ಆರೋಗ್ಯ ತಪಾಸಣೆ ಮಾಡಬೇಕು. ಹೆರಿಗೆ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಹಾಗೂ ತಾಯಿ ಮರಣ ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುದಾರಣೆ ಹಾಗೂ ಪುನರ್ವಸತಿ ಕಾರ್ಯ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಬೇಕು. ಅವರಿಗೆ ಮಾಸಾಶನ ನಿಗದಿತ ಅವಧಿಯಲ್ಲಿ ಪಾವತಿ ಆಗುತ್ತಿವೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಬೈಂದೂರಿನ ನಾಡ ಗ್ರಾ.ಪಂ.ನ ಸೇನಾಪುರ ಗ್ರಾಮದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನಿರ್ಮಾಣಕ್ಕಾಗಿ ಕ್ರಮ ಕೈಗೊಳ್ಳಬೇಕು ಎಂದರು.
ನಾಯಿ ಕಡಿತ ಬಗ್ಗೆ ಎಚ್ಚರ
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಪ್ರಸ್ತುತ ಸಾಲಿನಲ್ಲಿ 7,536 ನಾಯಿ ಕಡಿತ ಪ್ರಕರಣಗಳು, 151 ಹಾವು ಕಡಿತ ಪ್ರಕರಣ ಗಳಾಗಿವೆ. ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಮಣಿಪಾಲ ವ್ಯಾಪ್ತಿಯಲ್ಲಿ ಹೆಚ್ಚು ನಾಯಿ ಕಡಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಕ್ಷಯ ಮುಕ್ತ ಗ್ರಾಮ ರೂಪಿಸಿ
ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಕ್ಷಯ ಮುಕ್ತ ಭಾರತ ಅಭಿಯಾನ ನಡೆಯುತ್ತಿದ್ದು, ಗ್ರಾ.ಪಂ. ವ್ಯಾಪ್ತಿಯಲ್ಲಿ ಕ್ಷಯ ರೋಗಿಗಳನ್ನು ದತ್ತು ಪಡೆಯಲು ದಾನಿಗಳನ್ನು ಪ್ರೋತ್ಸಾಹಿಸಿ, ಕ್ಷಯರೋಗಿಗಳಿಗೆ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರವನ್ನು ಒದಗಿಸಿ ಕ್ಷಯ ಮುಕ್ತ ಗ್ರಾಮ ರೂಪಿಸಬೇಕು ಎಂದರು.
ಜಿಲ್ಲೆಯಲ್ಲಿ 29,107 ಯೂನಿಟ್‌ಗಳಷ್ಟು ರಕ್ತ ಸಂಗ್ರಹವಾಗಿರುತ್ತದೆ. ರಕ್ತ ನಿಧಿ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದಲ್ಲಿ ಅವುಗಳಿಗೆ ನಿಯಮಾನುಸಾರ ಅನುಮತಿ ನೀಡಬೇಕು. ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾಂಪೌಂಡ್, ಉದ್ಯಾನವನವನ್ನು ನರೇಗಾ ದಡಿ ಕೈಗೊಳ್ಳಲು ಹಾಗೂ ಕಟ್ಟಡದ ಇತರ ಅನುದಾನದಲ್ಲಿ ಅಭಿವೃದ್ಧಿಪಡಿಸಲು ಅವಕಾಶವಿದೆ ಎಂದರು.
ಡಿಎಚ್‌ಒ ಡಾ| ಐ.ಪಿ ಗಡಾದ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ
Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.