Padubidri: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
Team Udayavani, Nov 11, 2024, 9:33 PM IST
ಪಡುಬಿದ್ರಿ: ಕಟಪಾಡಿ ವಿಶ್ವನಾಥ ಕ್ಷೇತ್ರದ ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿದ್ದ ಸುನೀಲ್ ಕುಮಾರ್ (54) ಅವರ ಶವವು ಕೊಳೆತ ಸ್ಥಿತಿಯಲ್ಲಿ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಇರಂದಾಡಿಯ ಹಾಡಿಯಲ್ಲಿ ಪತ್ತೆಯಾಗಿದೆ.
ಪ್ರಾಣಿಗಳು ಎಳೆದಾಡಿದಂತೆ ಛಿದ್ರವಾಗಿದ್ದ ದೇಹ, ತಲೆಬುರುಡೆ ಮತ್ತು ಸೊಂಟದ ಭಾಗಗಳನ್ನು ಹೊಂದಿದ್ದ ಮೃತದೇಹವನ್ನು ಎಲ್ಲೂರು ಗ್ರಾ.ಪಂ. ಸದಸ್ಯ ಯಶವಂತ ಶೆಟ್ಟಿ ಅವರು ನೋಡಿದ್ದು ಅಪರಿಚಿತ ಮೃತದೇಹ ಪತ್ತೆಯಾಗಿರುವ ಕುರಿತು ಪಡುಬಿದ್ರಿ ಠಾಣೆಗೆ ನ. 10ರ ರಾತ್ರಿ ದೂರು ನೀಡಿದ್ದರು. ಸುನಿಲ್ ಮನೆಯವರು ಶವದ ಮೈಮೇಲಿದ್ದ ಬಟ್ಟೆಗಳ ಆಧಾರದಲ್ಲಿ ಅವರ ಗುರುತು ಪತ್ತೆಹಚ್ಚಿದ್ದಾರೆ.
ರಿಕ್ಷಾ ಚಾಲಕರಾಗಿದ್ದ ಸುನಿಲ್ ಬಳಿಕ ಪೀಠೊಪಕರಣಗಳ ಮಳಿಗೆಯಲ್ಲಿಯೂ ದುಡಿಯುತ್ತಿದ್ದರು. ವಿಪರೀತ ಮದ್ಯಪಾನದ ಚಟವಿದ್ದು ಸರಿಯಾಗಿ ಮನೆಗೂ ಬರುತ್ತಿರಲಿಲ್ಲ ಎನ್ನಲಾಗಿದೆ. ಮಾನಸಿಕ ಕಾಯಿಲೆಗೂ ಚಿಕಿತ್ಸೆ ನೀಡಲಾಗಿದ್ದರೂ ಪ್ರಯೋಜನವಾಗಿರಲಿಲ್ಲ ಎಂದು ತಿಳಿದುಬಂದಿದೆ. ಅವರು ಅಕ್ಟೋಬರ್ 23ರಂದು ಮನೆ ಬಿಟ್ಟಿದ್ದರು. ಕೆಲವು ಸಲ ಎರಡು-ಮೂರು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಕಾರಣ ನ. 1ರಂದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.