Padubidri: ಬಿಸ್ಕೆಟ್ ಕೊಡಿಸುವ ಆಮಿಷ; ಬಾಲಕಿಯ ಮೇಲೆ ದೌರ್ಜನ್ಯ
Team Udayavani, Jul 28, 2023, 12:52 PM IST
ಪಡುಬಿದ್ರಿ: ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಜು. 26ರಂದು ಲೈಂಗಿಕ ದೌರ್ಜನ್ಯವೆಸಗಿದ ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್ ಶೇಖ್ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಈ ವಿಕೃತ ಮನಸ್ಸಿನ ಆರೋಪಿಯು ಅಲ್ಲೇ ದುಡಿಯುತ್ತಿದ್ದ. ಅದೇ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ ಪುಸಲಾಯಿಸಿ ಅದೇ ಕಟ್ಟಡದ ಮೂರನೇ ಮಹಡಿಯಲ್ಲಿನ ತನ್ನ ರೂಮಿಗೆ ಕರೆದೊಯ್ದಿದ್ದ ಆರೋಪಿಯು ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರಗೈದಿದ್ದ.
ಅನಂತರದಲ್ಲಿ ಬಾಲಕಿಯು ಹೊಟ್ಟೆ ನೋವು ಎನ್ನುತ್ತಾ ಅಳುತ್ತಿದ್ದಳು. ಇದನ್ನು ಗಮನಿಸಿದ ಪೋಷಕರು ಬಾಲಕಿಯನ್ನು ಪಡುಬಿದ್ರಿಯ ಪ್ರಾ.ಆ. ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದರು. ಬಳಿಕ ಬಾಲಕಿಯನ್ನು ಪಡುಬಿದ್ರಿ ಪೊಲೀಸ್ ಠಾಣಾ ಮಹಿಳಾ ಪೇದೆ, ಬಾಲಕಿಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ರವಾನಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿಯ ಮೇಲೆ ಅತ್ಯಾಚಾರ ಆಗಿರುವುದು ಆಸ್ಪತ್ರೆಯಲ್ಲಿ ದೃಢಪಟ್ಟಿದೆ.
15 ದಿನ ನ್ಯಾಯಾಂಗ ಬಂಧನ
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪೋಕೊÕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪೂವಯ್ಯ ಅವರು ತನಿಖೆಯನ್ನು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.