PakistanZindabad ಘೋಷಣೆ;ಉಡುಪಿ,ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಬಿಜೆಪಿಯತ್ನ
Team Udayavani, Feb 28, 2024, 12:39 PM IST
ಉಡುಪಿ/ಮಂಗಳೂರು: ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶಾಸಕ ಯಶಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ ನಡೆಯಿತು.
ಬ್ರಹ್ಮಗಿರಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದ ಹಿನ್ನೆಲೆ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ಮುಂದುವರಿಸಿದರು. ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದವರನ್ನು ಪೊಲೀಸರು ಬಂಧಿಸಿ, ಅನಂತರ ಬಿಡುಗಡೆ ಮಾಡಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮುಖಂಡರಾದ ರಾಜೇಶ್ ಕಾವೇರಿ, ವೀಣಾ ಶೆಟ್ಟಿ, ಮುಟ್ಲುಪಾಡಿ ಸತೀಶ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಖಂಡರಾದ ಪ್ರಖ್ಯಾತ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
ಬಿಜೆಪಿಯ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದೊಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.