ನಾಗರಿಕರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಣೆ : ಎಸಿ ಭರವಸೆ


Team Udayavani, Apr 28, 2019, 6:20 AM IST

nagarika

ಕಾಪು : ಕಾಪು ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ, ಮಳೆಗಾಲದ ಸಮಸ್ಯೆಗಳನ್ನು ಎದುರಿಸಲು ಪೂರ್ವ ತಯಾರಿ ಮತ್ತು ತ್ಯಾಜ್ಯ ವಿಲೇವಾರಿ ಬಗ್ಗೆ ಕುಂದಾಪುರ ಸಹಾಯಕ ಆಯುಕ್ತ ಡಾ| ಮಧುಕೇಶ್ವರ್‌ ಅವರು ಎ. 27ರಂದು ವಿಶೇಷ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಮತ್ತು ಮುಂದಿನ ಮಳೆಗಾಲಕ್ಕೆ ಯಾವುದೇ ಅನಾಹುತಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸದಸ್ಯರು ಮತ್ತು ಸಾರ್ವಜನಿಕರು ಸಮರ್ಪಕವಾಗಿ ಸ್ಪಂದಿಸಬೇಕು. ಪುರಸಭೆ ಆಡಳಿತವೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಮಲ್ಲಾರು ನೀರಿನ ಸಮಸ್ಯೆ
ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಮೂಲಕ್ಕೆ ಕೊರತೆ ಇಲ್ಲ. ಆದರೆ ಅವುಗಳನ್ನು ಅಭಿವೃದ್ಧಿ ಪಡಿಸುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಆ ಕಾರಣದಿಂದಾಗಿ ಮಲ್ಲಾರು ಮತ್ತು ಅಚ್ಚಾಲು ಪರಿಸರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಬರ ಎದುರಾಗಿದೆ ಎಂದು ಅರುಣ್‌ ಶೆಟ್ಟಿ ಪಾದೂರು ದೂರಿದರು. ಪುರಸಭಾ ಸದಸ್ಯ ಶಾಬು ಸಾಹೇಬ್‌ ಬಾವಿ ನಿರ್ಮಾಣಕ್ಕೆ ಸ್ವಂತ ಜಮೀನನ್ನು ನೀಡಲು ಸಿದ್ಧªನಿದ್ದೇನೆ ಎಂದರು. ಶಾಂತಲತಾ ಶೆಟ್ಟಿ ಮಲ್ಲಾರು ಭಾಗದ ಕೆರೆಯನ್ನು ಅಭಿವೃದ್ಧಿ ಪಡಿಸುವಂತ ಮನವಿ ಮಾಡಿದರು. ಮಹಮ್ಮದ್‌ ಇಮ್ರಾನ್‌ ಕಿಂಡಿ ಅಣೆಕಟ್ಟಿನ ದುರಸ್ತಿ ಬಗ್ಗೆ ಮನವಿ ಮಾಡಿದರು.

ಎಸಿ ಶ್ಲಾಘನೆ
ಫಕೀರನಕಟ್ಟೆ ವಾರ್ಡ್‌ ಸದಸ್ಯ ಶಾಬು ಸಾಹೇಬ್‌ ಅವರು ಸಾರ್ವಜನಿಕರ ಕುಡಿಯುವ ನೀರಿಗೆ ಬಾವಿ ರಚಿಸಲು ತನ್ನ ಸ್ವಂತ ಭೂಮಿಯನ್ನು ನೀಡುವುದಾಗಿ ತಿಳಿಸಿ ಒಂದು ವರ್ಷವಾಗಿದೆ. ಆದರೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಮಾಜಿ ಉಪಾಧ್ಯಕ್ಷ ಕೆ. ಎಚ್‌. ಉಸ್ಮಾನ್‌ ಸಭೆಯ ಗಮನ ಸೆಳೆದರು. ಈ ಬಗ್ಗೆ ಎಸಿ ಶ್ಲಾ ಸಿ, ಶೀಘ್ರ ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿ ರಾಯಪ್ಪ ಅವರಿಗೆ ಸೂಚನೆ ನೀಡಿದರು.

ಚರಂಡಿಗಳ ಹೂಳೆತ್ತಲು ಮನವಿ
ಕಳೆದ ಬಾರಿ ಮಳೆಗಾಲದಲ್ಲಿ ಸುಬ್ಬಯ್ಯತೋಟದ ಬಳಿ ನೀರು ನಿಂತು ಸಮಸ್ಯೆ ಉಂಟಾಗಿತ್ತು ಎಂದು ಅನಿಲ್‌ ಕುಮಾರ್‌ ಗಮನ ಸೆಳೆದರು. ಭಾರತ್‌ ನಗರ ಕಾಲನಿಯಲ್ಲಿ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದು ಸ್ಥಳೀಯರು ಕೊಳಚೆ ನೀರನ್ನು ಚರಂಡಿಗೆ ಬಿಡುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಅಮೀರ್‌ ಮಹಮ್ಮದ್‌ ಒತ್ತಾಯಿಸಿದರು. ಕಾಪು ತೆಂಕಪೇಟೆಯಲ್ಲಿ ಚರಂಡಿ ಬ್ಲಾಕ್‌ ಆಗಿದ್ದು, ವಾಹನ ಸಂಚಾರದ ವೇಳೆ ರಸ್ತೆಯಲ್ಲಿನ ಕೊಳಚೆ ನೀರು ದೇವಸ್ಥಾನದ ಒಳಗೆ ನುಗ್ಗುತ್ತದೆ ಹರೀಶ್‌ ನಾಯಕ್‌ ತಿಳಿಸಿದರು. ಮಳೆಗಾಲಕ್ಕೆ ಮುನ್ನ ಎಚ್ಚೆತ್ತು ಕೊಳ್ಳಬೇಕು ಎಂದು ಸದಸ್ಯ ಅರುಣ್‌ ಶೆಟ್ಟಿ ಹೇಳಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿ ರಾಯಪ್ಪ ಅವರಿಗೆ ಎಸಿ ಡಾ| ಮಧುಕೇಶ್ವರ್‌ ಸೂಚನೆ ನೀಡಿದರು.

ಪುರಸಭೆಗೆ ಬರುವ ರಸ್ತೆ ಸರಿಯಾಗಿಲ್ಲ
ಪುರಸಭೆ ಕಾರ್ಯಾಲಯ ಮತ್ತು ಪುರಭವನ ಹಾಗೂ ಸರ್ವೇ ಇಲಾಖೆಯ ಕಚೇರಿಗೆ ಬರುವ ರಸ್ತೆಯ ದುಃಸ್ಥಿತಿ ಬಗ್ಗೆ ಸದಸ್ಯ ನಾಗೇಶ್‌ ಸುವರ್ಣ ಸಭೆಯ ಗಮನಸೆಳೆದರು. ಇದಕ್ಕೆ ಸದಸ್ಯರೂ ದನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ರಾಯಪ್ಪ ಅವರು, ಅನುದಾನದ ಕೊರತೆಯಿಂದ ಕಾಮಗಾರಿಗೆ ತಡೆಯುಂಟಾಗಿದ್ದು, ಶೀಘ್ರ ಕಾಮಗಾರಿ ನಡೆಸುವುದಾಗಿ ತಿಳಿಸಿದರು.

ತ್ಯಾಜ್ಯ ನಿರ್ವಹಣಾ ಶುಲ್ಕ ಏರಿಕೆಗೆ ಆಕ್ಷೇಪ
ಕಾಪು ಪುರಸಭೆಯಲ್ಲಿ ಬೇರೆಲ್ಲೂ ಇಲ್ಲದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಶುಲ್ಕ ವಿಧಿಸಲಾಗುತ್ತಿದೆ. ಹಿಂದಿಗಿಂತ ನಾಲ್ಕು ಪಟ್ಟು ಶುಲ್ಕ ಹೆಚ್ಚಿಸಲಾಗಿದೆ. ಈ ಶುಲ್ಕದಿಂದ ಜನಸಾಮಾನ್ಯರ ಜತೆಗೆ ಕಸವನ್ನು ನೀಡದವರಿಗೂ ತೊಂದರೆ ಉಂಟಾಗಿದೆ ಎಂದು ಸದಸ್ಯರು ಮತ್ತು ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು.

ಈ ಬಗ್ಗೆ ಪರಿಶೀಲನೆ ನಡೆಸಿ ಶುಲ್ಕ ಕಡಿತ ಮಾಡಿ, ದರ ಪರಿಷ್ಕರಿಸುವಂತೆ ಎಸಿ ಅವರು ಮುಖ್ಯಾಧಿಕಾರಿಗೆ ಸೂಚನೆ ನೀಡಿದರು. ಈಗಾಗಲೇ ಶುಲ್ಕ ಕಟ್ಟಿರುವವರ ಹೆಚ್ಚುವರಿ ಶುಲ್ಕವನ್ನು ಮುಂದಿನ ಸಾಲಿಗೆ ಹೊಂದಾಣಿಕೆ ಮಾಡಿಕೊಳ್ಳುವಂತೆಯೂ ಸಲಹೆ ನೀಡಿದರು. ಅಧಿಕಾರಿ ಅಮƒತೇಶ್‌ ಮೊದ ಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.