ಡ್ರೋನ್ ಚಿತ್ರಗಳ ಛಾಯಾಚಿತ್ರ ಪ್ರದರ್ಶನ
Team Udayavani, Mar 11, 2017, 12:48 PM IST
ಉಡುಪಿ: ಪ್ರವಾಸಿತಾಣಗಳ ವೈಮಾನಿಕ ನೋಟವನ್ನು ತೋರಿಸುವ ಮೂಲಕ ಪ್ರವಾಸೋದ್ಯಮವನ್ನು ಆಕರ್ಷಿಸಲು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ವಿವಿಧ ತಾಣಗಳ ಡ್ರೋನ್ ಛಾಯಾಚಿತ್ರ ಪ್ರದರ್ಶನವನ್ನು ಗ್ಯಾಲರಿ ಅದಿತಿ ಮಾ. 11-12ರಂದು ಆಯೋಜಿಸಿದೆ.
ಛಾಯಾಚಿತ್ರಗ್ರಾಹಕರಾದ ಆಸ್ಟ್ರೋ ಮೋಹನ್ ಮತ್ತು ಬೆಂಗಳೂರಿನ ಅರುಣ್ ಮಹೇಂದ್ರಕರ್ ಈ ಹೊಸ ಪರಿಕಲ್ಪನೆಗೆ ನಾಂದಿ ಹಾಡಿದ್ದಾರೆ. ಉಡುಪಿಯ ಸುಮಾರು 57 ಚಿತ್ರಗಳನ್ನು ಗ್ಯಾಲರಿ ಅದಿತಿಯಲ್ಲಿ ಪ್ರದರ್ಶಿಸಲಾಗುವುದು. ಕಾಪು ದೀಪ ಸ್ತಂಭ, ಕಾರ್ಕಳದ ಬಾಹುಬಲಿ, ಸೈಂಟ್‌ಮೇರಿಸ್ ದ್ವೀಪ ಹಾಗೂ ಬಾರಕೂರು ಬಸದಿಗಳು ವಿಶೇಷ ಆಕರ್ಷಣೆಯಾಗಿವೆ. ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ಮಣಿಪಾಲವನ್ನು ಬಾನಿನಿಂದ ನೋಡಿದಾಗ ಅದರ ಸೊಬಗು ಅತಿ ವಿಶಿಷ್ಟವಾಗಿದೆ ಎಂದು ಗ್ಯಾಲರಿಯ ಆಡಳಿತ ವಿಶ್ವಸ್ತ ಡಾ| ಕಿರಣ್ ಆಚಾರ್ಯ ತಿಳಿಸಿದ್ದಾರೆ. ಮಾ. 11 ಸಂಜೆ 6 ಗಂಟೆಗೆ ಪ್ರದರ್ಶನದ ಉದ್ಘಾಟನೆ ಜರಗಲಿದೆ. ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಪೈ, ಉಡುಪಿ ಎಎಸ್‌ಪಿ ವಿಷ್ಣುವರ್ಧನ್ ಹಾಗೂ ಸಾಯಿ ರಾಧಾ ಸಮೂಹದ ಮುಖ್ಯಸ್ಥ ಮನೋಹರ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಕೋರಲಿದ್ದಾರೆ. ಮಾ. 11 ಸಂಜೆ 6 ರಿಂದ ರಾತ್ರಿ 8 ಗಂಟೆಯ ವರೆಗೆ, ಮಾ. 12 ಬೆಳಗ್ಗೆ 10 ರಿಂದ ರಾತ್ರಿ 8 ರತನಕ ಚಿತ್ರಗಳನ್ನು ವೀಕ್ಷಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.