ಪೊಲಿಪು : ಗಾಂಜಾ ಸೇವಿಸಿದ್ದ ಯುವಕ ಪೊಲೀಸ್ ವಶಕ್ಕೆ
Team Udayavani, Aug 25, 2022, 5:01 PM IST
ಕಾಪು: ಉಳಿಯಾರಗೋಳಿ ಗ್ರಾಮದ ಪೊಲಿಪು ಜಂಕ್ಷನ್ ಬಳಿ ಮಾದಕ ನಶೆಯಲ್ಲಿ ತಿರುಗಾಡುತ್ತಿದ್ದ ಶಿರ್ವ ತೋಪನಂಗಡಿ ನಿವಾಸಿ ಮಹಮ್ಮದ್ ಅಫ್ರಜ್ (19) ಎಂಬಾತನನ್ನು ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಪು ಎಸ್ಸೈ ಶ್ರೀಶೈಲ ಮುರಗೋಡ ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಅನುಮಾನಾಸ್ಪದ ರೀತಿಯಲ್ಲಿ ಮಾದಕ ಸೇವನೆಯ ನಶೆಯಲ್ಲಿದ್ದ ಮಹಮ್ಮದ್ ಅಫ್ರಜ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದ ಪೊಲೀಸರು ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದಿತ್ತು.
ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಯ ಬಗ್ಗೆ ಪ್ರೊಫೆಸರ್ ಅಂಡ್ ಹೆಡ್ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು ಈ ವೇಳೆ ವೈದ್ಯರು ಆತ ಗಾಂಜಾ ಸೇವಿಸಿರುವ ಬಗ್ಗೆ ದೃಢ ಪಡಿಸಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.