ಪರ್ಕಳ, ಇಂದ್ರಾಳಿ: ಸವಾರರ ಜೀವ ಹಿಂಡುವ ರಸ್ತೆಗಳು
ನಗರ ಪ್ರದಕ್ಷಿಣೆ:- ಕೆಳ ಪರ್ಕಳದಲ್ಲಿ ಕುಸಿಯುತ್ತಿರುವ ರಸ್ತೆ ; ಇಂದ್ರಾಳಿಯಲ್ಲಿ ಯಮಕೂಪ ಗುಂಡಿ
Team Udayavani, Jun 26, 2022, 5:50 PM IST
ಉಡುಪಿ: ನಗರದೊಳಗೆ ಇರುವ ರಾ.ಹೆ (169ಎ) ರಸ್ತೆ ಅವ್ಯವಸ್ಥೆ ಸವಾರರ ಜೀವ ಹಿಂಡುತ್ತಿದೆ. ಕೆಳ ಪರ್ಕಳ ಮತ್ತು ಇಂದ್ರಾಳಿ ರೈಲ್ವೇ ಸೇತುವೆ ಸಮೀಪದ ರಸ್ತೆ ಮೇಲಿನ ಗುಂಡಿಗಳಿಂದ ವಾಹನ ಸವಾರರು ನಿತ್ಯ ತತ್ತರಿಸುವಂತಾಗಿದೆ.
ಕೆಳ ಪರ್ಕಳದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ಒಂದೆಡೇ ಸಾಗುತ್ತಿದ್ದರೆ. ಇನ್ನೊಂದು ತಾತ್ಕಾಲಿಕ ದುರಸ್ತಿ ಪಡಿಸಿದ್ದ ಹಳೆಯ ರಸ್ತೆಗೆ ಡಾಮರು ಹಾಕಿದ್ದು, ಅದರಲ್ಲಿ ಜನರು ನಿತ್ಯ ಸಂಚಾರ ಮಾಡುತ್ತಿದ್ದಾರೆ. ಈ ರಸ್ತೆಯೂ ತೀರಾ ಹದಗೆಟ್ಟಿದೆ. ಡಾಮರು ರಸ್ತೆ ಕುಸಿದು ಸಾರ್ವಜನಿಕರು ಆತಂಕದಲ್ಲಿ ವಾಹನ ಚಲಾ ಯಿಸುವ ದುಸ್ಥಿತಿ ಎದುರಾಗಿದೆ.
ಈಗಾಗಲೇ ರಸ್ತೆ ಸಂಪೂರ್ಣ ಹದ ಗೆಟ್ಟಿರುವುದರಿಂದ ಮಳೆ ಹೆಚ್ಚಾದಂತೆ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಸ್ತೆ ತಗ್ಗಿನಲ್ಲಿರುವುದರಿಂದ ರಾತ್ರಿ ವೇಳೆ ಮಳೆ ಸಮಯದಲ್ಲಿ ಚಾಲಕರಿಗೆ ರಸ್ತೆ ಪರಿಸ್ಥಿತಿ ಅರಿವಿಲ್ಲದೆ ಒಂದೆ ವೇಗದಲ್ಲಿ ಸಾಗಿದರೆ ಭೀಕರ ಅಪಘಾತ ಕಟ್ಟಿಟ್ಟ ಬುತ್ತಿಯಾಗಿದೆ. ದ್ವಿಚಕ್ರ ವಾಹನ ಚಲಾಯಿಸುವ ಮಹಿಳೆಯರು ಜೀವ ಕೈನಲ್ಲಿಡಿದುಕೊಂಡೆ ಸಂಚರಿಸಬೇಕಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ.
ಇಂದ್ರಾಳಿ ರೈಲ್ವೇ ಸೇತುವೆ ಬಳಿ ಎರಡು ಬದಿಯಲ್ಲಿ ಬೃಹತ್ ಗುಂಡಿಗಳು ಬಿದ್ದಿವೆ. ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಸಾಗುವಾಗ, ಮಣಿಪಾಲದಿಂದ ಉಡುಪಿ ಕಡೆಗೆ ಸಾಗುವಾಗ ಎರಡು ಬದಿಯಲ್ಲಿ ಗುಂಡಿಗಳು ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗಿವೆ.
ಕೆಳ ಪರ್ಕಳ ಮತ್ತು ಇಂದ್ರಾಳಿ ರೈಲ್ವೇ ಸೇತುವೆ ಬಳಿ ಈಗಾಗಲೆ ಸಾಕಷ್ಟು ಮಂದಿ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.
ಜನರ ಆಕ್ರೋಶ, ಜಿಲ್ಲಾಡಳಿತ ಅಸಹಾಯಕತೆ ರಸ್ತೆ ಪರಿಸ್ಥಿತಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಜಿಲ್ಲಾಡಳಿತ, ಹೆದ್ದಾರಿ ಪ್ರಾಧಿಕಾರ ಅಸಹಾಯಕತೆ ವ್ಯಕ್ತಪಡಿಸಿದೆ. ಈ ರಸ್ತೆ ಈಗಾಗಲೇ ದುರಸ್ತಿಪಡಿಸಿದ್ದು, ಮಳೆ ಬರುತ್ತಿರುವ ಸಮಯದಲ್ಲಿ ಪುನರ್ ದುರಸ್ತಿಗೆ ಮುಂದಾದರೆ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ. ಮಳೆ ಮುಗಿಯುವವರೆಗೂ ಈ ರಸ್ತೆ ಪರಿಸ್ಥಿತಿ ಸುಧಾರಿಸುವ ಯಾವುದೇ ಲಕ್ಷಣ ಕಾಣುತ್ತಿಲ್ಲ
ಇತ್ತೀಚೆಗೆ ದುರಸ್ತಿಗೊಳಿಸಲಾಗಿತ್ತು
ರಾ.ಹೆ. ಪ್ರಾಧಿಕಾರ ವತಿಯಿಂದ ಇತ್ತೀಚೆಗೆ ಎರಡು ರಸ್ತೆಯನ್ನು ದುರಸ್ತಿಗೊಳಿಸಲಾಗಿತ್ತು. ಕೆಳ ಪರ್ಕಳ ರಸ್ತೆಯನ್ನು ಕೆಸರು, ಧೂಳಿನಿಂದ ಮುಕ್ತಿ ಕಲ್ಪಿಸಲು ತಾತ್ಕಾಲಿಕ ನೆಲೆಯಲ್ಲಿ ಡಾಮರು ಹಾಕಿ ಅಭಿವೃದ್ಧಿಪಡಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ಮಳೆಗಾಲದ ಶುರುವಿನಲ್ಲೇ ರಸ್ತೆ ಒಂದು ಭಾಗದಲ್ಲಿ ಕುಸಿಯುತ್ತಿದೆ. ಕೆಲವು ತಿಂಗಳ ಹಿಂದೆ ಇಂದ್ರಾಳಿ ರೈಲ್ವೇ ಸೇತುವೆ ಬಳಿ ತೀರ ಹದಗೆಟ್ಟಿದ್ದ ರಸ್ತೆಯನ್ನು ತಾತ್ಕಾಲಿಕವಾಗಿ ಡಾಮರು ಹಾಕಲಾಗಿತ್ತು. ಇದೀಗ ಮಳೆ ನೀರಿನ ಒರತೆಯಿಂದ ಹಾಕಲ್ಪಟ್ಟ ಡಾಮರು ಕಿತ್ತು ಹೋಗಿ ಗುಂಡಿಯಾಗಿದೆ.
ಶೀಘ್ರ ಕ್ರಮ: ಕೆಳಪರ್ಕಳ ಪರ್ಕಳ, ಇಂದ್ರಾಳಿ ಹೆದ್ದಾರಿ ದುಸ್ಥಿತಿ ಗಮನಕ್ಕೆ ಬಂದಿದೆ. ಕೆಳ ಪರ್ಕಳಕ್ಕೆ ಎರಡು ದಿನಗಳ ಹಿಂದೆ ಭೇಟಿ ನೀಡಿ ಎಂಜಿನಿಯರ್‌ಗಳೊಂದಿಗೆ ಚರ್ಚೆ ನಡೆಸಲಾಗಿದೆ. ಸವಾರರಿಗೆ ಸಮಸ್ಯೆಯಾಗದ ರೀತಿಯಲ್ಲಿ ಮಳೆಗಾಲದಲ್ಲಿ ತುರ್ತು ಕಾಮಗಾರಿ ಹೇಗೆ ನಡೆಸಬಹುದು ಎಂಬ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ. ಶೀಘ್ರ ಈ ಬಗ್ಗೆ ಕ್ರಮ ಕೈಗೊಂಡು ತಾತ್ಕಾಲಿಕ ನಿಟ್ಟಿನಲ್ಲಿ ರಸ್ತೆಗಳನ್ನು ವ್ಯವಸ್ಥಿತವಾಗಿಸುವ ಬಗ್ಗೆ ರಾ. ಹೆ. ಎಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದೇನೆ. –ಕೂರ್ಮಾ ರಾವ್ ಎಂ., ಉಡುಪಿ ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.