ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Team Udayavani, Apr 19, 2023, 8:20 AM IST
ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾ ಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಸಾಹಿಲ್ (23) ಶಿಕ್ಷೆಗೆ ಗುರಿಯಾದ ಆರೋಪಿ. ಬೈಂದೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ಬಾಲಕಿಯ ತಂದೆಯ ಹೊಟೇಲ್ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿ ಬಾಲಕಿಯನ್ನು ಸಂಪರ್ಕಿಸಿ ಪ್ರೀತಿಸುವುದಾಗಿ ಹೇಳಿದ್ದನು. 2021ರ ಜುಲೈ ತಿಂಗಳಲ್ಲಿ ಬಾಲಕಿಯು ತನ್ನ ಊರಿಗೆ ಬಂದಿದ್ದು, ಆ ಸಮಯ ಆಕೆಯ ಜನ್ಮದಿನದಂದು ಸಾಗರದಿಂದ ಬೈಂದೂರಿಗೆ ಬಂದು ಆತ, ಆಕೆಯನ್ನು ರಾತ್ರಿ ಹಾಡಿಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಇದೇ ರೀತಿ ಆರೋಪಿ ಬಾಲಕಿಯನ್ನು ಹಲವು ಬಾರಿ ದೈಹಿಕ ಸಂಪರ್ಕ ನಡೆಸಿದ್ದ.
ಈ ವಿಚಾರ ತಿಳಿದು ಬಾಲಕಿಯ ತಾಯಿ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಪೊಲೀಸ್ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸಾಂದರ್ಭಿಕ ಸಾಕ್ಷ್ಯವನ್ನು ಪರಿಗಣಿಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ 20 ವರ್ಷಗಳ ಕಠಿನ ಶಿಕ್ಷೆ ಮತ್ತು 22,500 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಬಾಲಕಿಗೆ 1.50 ಲ.ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.