ಚುನಾವಣೆ ಬಳಿಕ ರೇಶನಿಂಗ್: 2 ದಿನಕ್ಕೊಮ್ಮೆ ನೀರು ಪೂರೈಕೆ
ಬರಿದಾಗುತ್ತಿರುವ ಸ್ವರ್ಣಾ ನದಿ
Team Udayavani, May 6, 2023, 3:38 PM IST
ಉಡುಪಿ: ನಗರಕ್ಕೆ ನೀರು ಪೂರೈಸುವ ಹಿರಿಯಡಕ ಸ್ವರ್ಣ ನದಿ ಬಜೆ ಡ್ಯಾಂನಲ್ಲಿ ನೀರು ಬರಿದಾಗುತ್ತಿದೆ. ಇನ್ನೂ
10 ದಿನಕ್ಕೆ ಪಂಪ್ ಮಾಡುವಷ್ಟು ನೀರಿನ ಪ್ರಮಾಣ ಲಭ್ಯವಿದೆ. ದಿನೇದಿನೇ ಬಿಸಿಲ ಪ್ರಮಾಣಕ್ಕೆ ನೀರಿನ ಮೂಲಗಳು ಬತ್ತುತ್ತಿವೆ.
ಮಳೆ ಬಾರದಿದ್ದಲ್ಲಿ ನಗರದಲ್ಲಿಯೂ ನೀರಿಗೆ ಆಹಕಾರ ಸೃಷ್ಟಿಯಾಗುವ ಸಾಧ್ಯತೆ ಇದೆ. ಚುನಾವಣೆ ಮುಗಿದ ಕೂಡಲೆ ಮೇ 10ರ ಅನಂತರ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಬಹುದು ಎಂದು ನಗರಸಭೆ ಮೂಲಗಳು ತಿಳಿಸಿದೆ. ಪ್ರಸ್ತುತ ಬಜೆ ಡ್ಯಾಂನಲ್ಲಿ 3 ಮೀ. ನಷ್ಟು ನೀರಿದೆ. ಅದರಲ್ಲಿಯೂ ಪೂರ್ಣ ಪ್ರಮಾಣದಲ್ಲಿ ನೀರು ಲಭ್ಯವಾಗುವುದಿಲ್ಲ. ಒಂದಷ್ಟು ಪ್ರಮಾಣ ಡೆಡ್ ಸ್ಟೋರೇಜ್ ಇರಲಿದೆ. ಸದ್ಯಕ್ಕೆ ಪುತ್ತಿಗೆ ಮೇಲಾºಗದ ಗುಂಡಿಗಳಲ್ಲಿ ನೀರನ್ನು ಪಂಪ್ ಮಾಡಲಾಗುತ್ತಿದೆ.
ಈ ನೀರನ್ನು ಬಜೆ ಡ್ಯಾಂಅ ಕಡೆಗೆ ಹಾಯಿಸಲಾಗುತ್ತಿದೆ. ಎಲ್ಲ 35 ವಾರ್ಡ್‌ಗಳಿಗೂ ಸಮಾನ ಒತ್ತಡದಲ್ಲಿ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಎತ್ತರದ ಪ್ರದೇಶಗಳಲ್ಲಿ ಬಹುತೇಕ ಮನೆ, ಅಪಾರ್ಟ್‌ಮೆಂಟ್‌ಗಳಿಗೆ ನೀರು ಲಭ್ಯವಾಗುತ್ತಿಲ್ಲ. ನಗರದಲ್ಲಿ ಹೊಟೇಲ್ ಉದ್ಯಮ ನೀರಿನ ಸಮಸ್ಯೆ ಯಿಂದ ನಲುಗಿ ಹೋಗಿದೆ ಎಂದು ಹೊಟೇಲ್ ಮಾಲಕರು ಬೇಸರ ವ್ಯಕ್ತಪಡಿಸಿದ್ದಾರೆ.
ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದೆ. ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಗರಸಭೆ 35 ವಾರ್ಡ್‌ಗಳಿಗೆ ಸಮಾನ ಒತ್ತಡದಲ್ಲಿ ನೀರು ಪೂರೈಕೆ ಅಸಾಧ್ಯವಾಗಿದೆ. ಇದರಿಂದ ಮೇಲ್ಮಟ್ಟದ ಜಲ ಸಂಗ್ರಹಣಾಗಾರ ಟ್ಯಾಂಕ್‌ಗಳಿಗೆ ನೀರು ಪೂರೈಕೆಯಾಗದೆ ಇರುವುದರಿಂದ. ಅಂತಹ ಮಹಡಿಗಳಲ್ಲಿ ವಾಸಿಸುವ ನಾಗರಿಕರು ನೀರನ್ನು ಶೇಖರಿಸಿಟ್ಟುಕೊಳ್ಳಲು ಸಂಪ್ ಟ್ಯಾಂಕ್ ಅಥವಾ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಸಹಕರಿಸಬೇಕು.
– ಆರ್. ಪಿ. ನಾಯ್ಕ, ಪೌರಾಯುಕ್ತರು, ಉಡುಪಿ ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.